ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಮತದಾರರು ನನ್ನ ಮೇಲೆ ವಿಶ್ವಾಸವಿಟ್ಟು ಅತಿ ಹೆಚ್ಚು ಮತಗಳನ್ನು ನೀಡಿ ಗೆಲ್ಲಿಸಿದ್ದೀರಿ. ನಿಮ್ಮ ನಂಬಿಕೆಗೆ ಚ್ಯುತಿ ಬಾರದಂತೆ ನಿಮ್ಮ ಮನೆ ಮಗನಾಗಿ ಕೆಲಸ ಮಾಡುತ್ತೇನೆ ಎಂದು ವಿಧಾನ ಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕೆ.ಎಂ.ಸುರೇಶ್ ಹೇಳಿದರು.
ಕನ್ನಡಪ್ರಭ ವಾರ್ತೆ ಶಿರಾ
ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಮತದಾರರು ನನ್ನ ಮೇಲೆ ವಿಶ್ವಾಸವಿಟ್ಟು ಅತಿ ಹೆಚ್ಚು ಮತಗಳನ್ನು ನೀಡಿ ಗೆಲ್ಲಿಸಿದ್ದೀರಿ. ನಿಮ್ಮ ನಂಬಿಕೆಗೆ ಚ್ಯುತಿ ಬಾರದಂತೆ ನಿಮ್ಮ ಮನೆ ಮಗನಾಗಿ ಕೆಲಸ ಮಾಡುತ್ತೇನೆ ಎಂದು ವಿಧಾನ ಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕೆ.ಎಂ.ಸುರೇಶ್ ಹೇಳಿದರು. ಶುಕ್ರವಾರ ನಗರದ ಸೇವಾ ಸದನದಲ್ಲಿ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಅವರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಚಿದಾನಂದ್ ಎಂ. ಗೌಡ ಅವರು ನನ್ನ ಗೆಲುವಿಗೆ ಅವಿರತ ಶ್ರಮಿಸಿದ್ದಾರೆ. ಹಾಗೂ ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳು ಮತದಾರರ ಮನೆ ಮನೆಗೆ ಭೇಟಿ ನೀಡಿ ಮತಯಾಚಿಸಿದ್ದಾರೆ ಎಂದು ಎಲ್ಲರಿಗೂ ಧನ್ಯವಾದ ತಿಳಿಸಿದ ಅವರು, ಚಿದಾನಂದ್ ಎಂ.ಗೌಡ ಅವರಿಗೆ ಮುಂದಿನ ದಿನಗಳಲ್ಲಿ ಒಳ್ಳೆಯ ರಾಜಕೀಯ ಭವಿಷ್ಯ ಸಿಗಲಿ ಹಾರೈಸಿದರು.ಚಿದಾನಂದ್ ಎಂ ಗೌಡ ಮಾತನಾಡಿ, ಕೆ.ಎಂ.ಸುರೇಶ್ ಅವರು ನಿರುದ್ಯೋಗಿ ಪದವೀಧರರ ಪರವಾಗಿ ಹೋರಾಟ ಮಾಡಿ ಯಶಸ್ವಿ ಪರಿಷತ್ ಸದಸ್ಯರಾಗಿ ಸೇವೆ ಮಾಡಲಿ ಎಂದು ಆಶಿಸಿದರು. ಶಿರಾ ಕ್ಷೇತ್ರ ಸೇರಿದಂತೆ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಮನೆ ಮನೆಗೆ ಹೋಗಿ ಮತದಾರರ ಮನವೊಲಿಸುವ ಕೆಲಸ ಮಾಡಿದ್ದಾರೆ. ಈ ಕಾರಣದಿಂದ ಕೆ.ಎಂ.ಸುರೇಶ್ ಅವರು ಅಭೂತಪೂರ್ವ ಗೆಲುವು ಸಾಧಿಸಲು ಸಾಧ್ಯವಾಗಿದೆ. ಜನಪ್ರತಿನಿಧಿಯಾಗಲು ಎಲ್ಲರಿಗೂ ಅವಕಾಶ ಸಿಗುವುದಿಲ್ಲ. ಆದ್ದರಿಂದ ನೀವು ನಿಮ್ಮ ಅಧಿಕಾರವಧಿಯಲ್ಲಿ ಉತ್ತಮ ಸೇವೆ ಮಾಡಿ ಎಂದು ಹೇಳಿದರು. ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ರೈಲ್ವೆ ಸಮಿತಿ ಸದಸ್ಯ ವೀರೇಶ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹೊನ್ನಗೊಡಂನಹಳ್ಳಿ ಚಿಕ್ಕಣ್ಣ, ಕಾರ್ಯದರ್ಶಿ ಕುಮಾರ್ ಮಾಸ್ಟರ್, ಓಬಿಸಿ ಮೋರ್ಚಾ ಅಧ್ಯಕ್ಷ ಮಾಗೋಡು ಪ್ರತಾಪ್, ಮುಖಂಡರಾದ ಗೌಡಪ್ಪ, ಪರಮೇಶ್ ಗೌಡ, ಪುರುಷೋತ್ತಮ್, ನಾಗರಾಜ್ ಗೌಡ, ಬೊಪ್ಪರಾಯಪ್ಪ, ಶಿವು ಸ್ನೇಹಪ್ರಿಯ, ಡಿ.ಪಿ. ರಂಗನಾಥ್ ಕೊಟ್ಟ, ಮೂಗನಹಳ್ಳಿ ರಾಮು, ಪದ್ಮ ಮಂಜುನಾಥ್, ನಾಗರತ್ನಮ್ಮ ಸೇರಿ ಹಲವರು ಹಾಜರಿದ್ದರು. ------------
೩೦ಶಿರಾ೧:
ಶಿರಾ ನಗರದ ಸೇವಾ ಸದನದಲ್ಲಿ ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಅವರು ನೂತನ ವಿಧಾನಪರಿಷತ್ ಸದಸ್ಯರಾಗಿ ಗೆಲುವು ಸಾಧಿಸಿದ ಕೆ.ಎಂ.ಸುರೇಶ್ ಅವರಿಗೆ ಅಭಿನಂದನೆ ಸಲ್ಲಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.