ಕನ್ನಡಪ್ರಭ ವಾರ್ತೆ ಕೋಲಾರ
ನಗರದ ಸಾಯಿಬಾಬಾ ಮಂದಿರದಲ್ಲಿ ತಮ್ಮ ಬೆಂಬಲಿಗರು ಆಯೋಜಿಸಿದ್ದ ೭೬ನೇ ವರ್ಷದ ಹುಟ್ಟುಹಬ್ಬದ ಸಮಾರಂಭದಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಜನರ ಸುಖ, ಶಾಂತಿ, ನೆಮ್ಮದಿ, ಸಹಬಾಳ್ವೆಗಾಗಿ ಕಾಂಗ್ರೆಸ್ ಪಕ್ಷವು ಶ್ರಮಿಸುತ್ತಿದ್ದು, ಸಮ್ಮಿಶ್ರ ಸರ್ಕಾರ ಆಡಳಿತಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್ ಪಕ್ಷವು ಮಹತ್ತರ ಪಾತ್ರ ವಹಿಸಲಿದೆ. ಅಂಬೇಡ್ಕರ್ ರಚಿಸಿದ ಸಂವಿಧಾನ ಬದ್ದ ಸರ್ಕಾರ ಬರಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು, ಪ್ರಾಣ ತ್ಯಾಗ, ಬಲಿದಾನದ ಮೂಲಕ ಹೋರಾಡಿ ತಂದು ಕೊಟ್ಟಿರುವ ಈ ದೇಶದ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಪಕ್ಷದ ಕೈಗೆ ಆಡಳಿತದ ಚುಕ್ಕಾಣಿ ನೀಡಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.ದಲಿತ ಸಮುದಾಯವು ಪ್ರಾರಂಭದಿಂದಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬರುತ್ತಿದೆ, ಕಾಂಗ್ರೆಸ್ ಪಕ್ಷದ ಸಚಿವ ಸಂಪುಟದಲ್ಲಿ ಸಮುದಾಯದ ೭ ಮಂದಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮಾನತೆ, ಸಾಮಾಜಿಕ ನ್ಯಾಯ ನೀಡಿದೆ. ಕಾಂಗ್ರೆಸ್ ಪಕ್ಷದಲ್ಲಿ ಪ್ರಸ್ತುತ ದಲಿತ ಮುಖ್ಯಮಂತ್ರಿಯಾಗಬೇಕೆಂಬ ಪ್ರಶ್ನೆ ಉದ್ಬವಿಸಿಲ್ಲ, ಇವೆಲ್ಲವೂ ಮಾಧ್ಯಮಗಳಲ್ಲಿ ಪ್ರಚಾರವಾಗುತ್ತಿವೆ ಅಷ್ಟೇ, ಹೊರತಾಗಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಸ್ವಷ್ಟಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ವಿ.ಶ್ರೀನಿವಾಸ್ ಮಾತನಾಡಿ, ಕೆ.ಎಚ್.ಮುನಿಯಪ್ಪ ಕೋಲಾರ ಜಿಲ್ಲೆಯಲ್ಲಿ ೭ ಬಾರಿ ಸತತವಾಗಿ ಲೋಕಸಭೆಗೆ ಆಯ್ಕೆಯಾಗುವ ಮೂಲಕ ಸೋಲಿಲ್ಲದ ಸರದಾರ ಎಂಬ ಬಿರುದಿಗೆ ಪಾತ್ರರಾಗಿದ್ದರು, ಸುಮಾರು ೩೦ ವರ್ಷಗಳ ಕಾಲ ಸಂಸದರಾಗಿ ಅನೇಕ ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ, ರಾಜಕೀಯವಾಗಿ ಅನೇಕ ಬೆಂಬಲಿಗರನ್ನು ಬೆಳೆಸಿದ್ದಾರೆ ಎಂದು ಹೇಳಿದರು.
ಇಂದು ಬೆಂಗಳೂರಿಗೆ ಉಪರಾಷ್ಟ್ರಪತಿಗಳು ಆಗಮಿಸುತ್ತಿದ್ದು, ಅವರನ್ನು ಬರ ಮಾಡಿಕೊಳ್ಳಲು ಸಚಿವರು ತೆರಳಬೇಕಾಗಿತ್ತು. ಅದರೆ ನಾವೆಲ್ಲಾ ಬರಲೇಬೇಕೆಂದು ಒತ್ತಡ ಹಾಕಿದ್ದರಿಂದ ಅವೆಲ್ಲವನ್ನೂ ಬದಿಗೆ ಸರಿಸಿ ಆಗಮಿಸಿರುವುದು ಸಂತಸದ ಸಂಗತಿಯಾಗಿದೆ, ನಗರದ ಪ್ರಮುಖ ಮಂದಿರ, ಮಸೀದಿ, ಚರ್ಚ್‌ಗಳಿಗೆ ಭೇಟಿ ನಂತರ ಸಾಯಿಬಾಬಾ ಮಂದಿರದಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವುದು ಸ್ವಾಗತಾರ್ಹವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಮೀನಾರಾಯಣ, ಉಪಾಧ್ಯಕ್ಷ ಎಲ್.ಎ.ಮಂಜುನಾಥ್, ಮುಖಂಡರಾದ ಜಯದೇವ್, ಪ್ರಸಾದ್‌ಬಾಬು, ಶ್ರೀಕೃಷ್ಣ, ಮಾವು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ದಳಸನೂರು ಗೋಪಾಲ್, ನಗರ ಅಧ್ಯಕ್ಷ ಪ್ರಸಾದ್ ಬಾಬು, ಗ್ರಾಮೀಣ ಬ್ಲಾಕ್ ಅಧ್ಯಕ್ಷ ಉದಯಶಂಕರ್, ಮುರಳಿಗೌಡ, ಮಂಜುನಾಥ್, ತ್ಯಾಗರಾಜ್, ರಾಮಯ್ಯ, ಅತಾವುಲ್ಲಾ, ನಾಗರಾಜ್ ಇದ್ದರು,
ದೇವರು ಒಬ್ಬನೇ, ನಾಮ ಹಲವು ಎಂದು ನಂಬಿರುವೇನು. ಎಲ್ಲರೂ ಸಹೋದರತ್ವದ ಬಾಳ್ವೆ ನಡೆಸುವಂತಾಗಬೇಕು, ಶಾಂತಿ, ನೆಮ್ಮದಿಯ ಬಾಳ್ವೆಯಲ್ಲಿ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ ಎಂದರು.