ಜನರ ಋಣ ತೀರಿಸುವ ಕೆಲಸ ಮಾಡೇ ಮಾಡುತ್ತೇನೆ: ಎಚ್.ಡಿ.ಕುಮಾರಸ್ವಾಮಿ

KannadaprabhaNewsNetwork |  
Published : Nov 19, 2026, 01:45 AM IST
18ಕೆಎಂಎನ್ ಡಿ12 | Kannada Prabha

ಸಾರಾಂಶ

ನಾಗಮಂಗಲ ಕ್ಷೇತ್ರದ ಜನರು ನಮ್ಮನ್ನು ತಮ್ಮ ಕುಟುಂಬದ ಮನೆ ಮಕ್ಕಳಂತೆ ಕಾಣುತ್ತೀರಿ. ದೇವಸ್ಥಾನದ ಸನ್ನಿಧಿಯಲ್ಲಿ ಹೇಳುತ್ತಿದ್ದೇನೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಶಾಸಕ ಸುರೇಶ್‌ಗೌಡ ಹಾಗೂ ನನ್ನ ಮೇಲೆ, ನಮ್ಮ ಪಕ್ಷದ ಮೇಲೆ ಈ ತಾಲೂಕಿನ ಜನರು ಅಪಾರವಾದ ಅಭಿಮಾನವನ್ನಿಟ್ಟಿದ್ದೀರಿ. ಈ ಜನರ ಋಣ ತೀರಿಸುವ ಕೆಲಸವನ್ನು ಮಾಡೇ ಮಾಡುತ್ತೇನೆ.

ಕನ್ನಡಪ್ರಭ ವಾರ್ತೆ ನಾಗಮಂಗಲ

ತಾಲೂಕಿನ ಜನರು ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ, ಅಭಿಮಾನದ ಋಣ ತೀರಿಸುವ ಕೆಲಸ ಮಾಡೇ ಮಾಡುತ್ತೇನೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ತಾಲೂಕಿನ ಅಳಿಸಂದ್ರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಕೋಡಿಮಾರಮ್ಮ ದೇವಾಲಯದ ಲೋಕಾರ್ಪಣೆ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಆಯೋಜಿಸಿದ್ದ ಹೋಮಹವನಾದಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ನಾಗಮಂಗಲ ಕ್ಷೇತ್ರದ ಜನರು ನಮ್ಮನ್ನು ತಮ್ಮ ಕುಟುಂಬದ ಮನೆ ಮಕ್ಕಳಂತೆ ಕಾಣುತ್ತೀರಿ. ದೇವಸ್ಥಾನದ ಸನ್ನಿಧಿಯಲ್ಲಿ ಹೇಳುತ್ತಿದ್ದೇನೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಶಾಸಕ ಸುರೇಶ್‌ಗೌಡ ಹಾಗೂ ನನ್ನ ಮೇಲೆ, ನಮ್ಮ ಪಕ್ಷದ ಮೇಲೆ ಈ ತಾಲೂಕಿನ ಜನರು ಅಪಾರವಾದ ಅಭಿಮಾನವನ್ನಿಟ್ಟಿದ್ದೀರಿ. ಈ ಜನರ ಋಣ ತೀರಿಸುವ ಕೆಲಸವನ್ನು ಮಾಡೇ ಮಾಡುತ್ತೇನೆ ಎಂದರು.

ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳು ಬಹಳ ಆತಂಕವನ್ನುಂಟು ಮಾಡುತ್ತಿವೆ. ಇಂತಹ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜಕೀಯ ಮಾತನಾಡುವುದಿಲ್ಲ. ಕುಟುಂಬಗಳಲ್ಲಿ ಇಂದು ಸಣ್ಣಪುಟ್ಟ ವಿಚಾರಗಳಿಗೂ ಮನಸ್ಥಾಪಗಳನ್ನು ಮಾಡಿಕೊಂಡು ಇಡೀ ಕುಟುಂಬಗಳೇ ಬೀದಿಗೆ ಬರುವುದು ಅಥವಾ ನಾಶವಾಗುತ್ತಿರುವುದನ್ನು ನೋಡಿದರೆ ಸಮಾಜ ಎತ್ತ ಸಾಗುತ್ತಿದೆ ಎಂದು ಆತಂಕವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ತಂದೆ ಮಗನನ್ನೆ ಕೊಲೆ ಮಾಡುವುದು, ಮಗ ತಂದೆಯನ್ನೆ ಕೊಲೆ ಮಾಡುವುದು ಇಂತಹ ಘಟನೆಗಳನ್ನು ನೋಡುತ್ತಿದ್ದರೆ ಹಳೆ ಬಾಂಧವ್ಯಗಳು ಮರೆಯಾಗುತ್ತಿವೆ ಎನಿಸುತ್ತಿದೆ. ಸಂಬಂಧಗಳಿಗೆ ಬೆಲೆ ಕೊಡುವ ಕೆಲಸವಾಗಬೇಕು. ಜಮೀನು ವಿಚಾರಕ್ಕೆ ಹೆಚ್ಚಿನ ಮನಸ್ಥಾಪಗಳಾಗುತ್ತಿವೆ. ಅವುಗಳನ್ನು ಬದಿಗಿಟ್ಟು ನೆಮ್ಮದಿಯಿಂದ ಬದುಕುವುದನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದರು.

ಎಚ್.ಡಿ.ದೇವೇಗೌಡರು ಮತ್ತು ನನ್ನ ಮೇಲೆ ಅಪಾರ ಪ್ರೀತಿ, ಅಭಿಮಾನವನ್ನಿಟ್ಟುಕೊಂಡಿದ್ದಾರೆ. ನೀವು ಕೂಡ ಕುಟುಂಬಗಳು, ಗ್ರಾಮಸ್ಥರು ಸಹೋದರರಂತೆ ಒಬ್ಬರಿಗೊಬ್ಬರು ಸಹಕಾರದಿಂದ ಅನೋನ್ಯವಾಗಿದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲಿದೆ ಎಂದರು.

ಇದೇ ವೇಳೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಗ್ರಾಮದ ವಿದ್ಯಾರ್ಥಿಗಳು ಗ್ರಾಮಸ್ಥರ ಜತೆಗೂಡಿ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಹಾಗೂ ಗ್ರಾಮದ ಸರ್ಕಾರಿ ಶಾಲೆಗೆ ಅಗತ್ಯವಿರುವ ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಿಕೊಡುವಂತೆ ಮನವಿ ಪತ್ರ ಸಲ್ಲಿಸಿದರು.

ಇದಕ್ಕೆ ಸ್ಪಂದಿಸಿದ ಸಚಿವ ಎಚ್ಡಿಕೆ, ಗ್ರಾಮದ ಶಾಲೆಗೆ ಅಗತ್ಯವಿರುವ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿಕೊಡಲಾಗುವುದು ಮತ್ತು ಶಾಲಾ ಮಕ್ಕಳಿಗೆ ಅನುಕೂಲವಾಗುವಂತೆ ಬಸ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಮಾಜಿ ಶಾಸಕ ಸುರೇಶ್‌ಗೌಡ, ಕೆ.ಆರ್.ಪೇಟೆ ಶಾಸಕ ಎಚ್.ಟಿ.ಮಂಜು, ಮುಖಂಡರಾದ ನೆಲ್ಲಿಗೆರೆ ಬಾಲು, ಜವರನಹಳ್ಳಿ ಗೌರೀಶ್ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ: ಕಿಶೋರ ಯಕ್ಷಗಾನ ಸಂಭ್ರಮಕ್ಕೆ ಚಾಲನೆ
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಿ