ಐಪಿಎಸ್‌ ಡಿ.ರೂಪಾ ಕ್ಷಮೆಗೆ ಐಎಎಸ್‌ ರೋಹಿಣಿ ಸಿಂಧೂರಿ ಪಟ್ಟು

KannadaprabhaNewsNetwork |  
Published : Jan 13, 2024, 01:30 AM IST
ರೋಹಿಣಿ ಸಿಂಧೂರಿ | Kannada Prabha

ಸಾರಾಂಶ

ಐಪಿಎಸ್ ಅಧಿಕಾರಿ ಡಿ.ರೂಪಾ ಜೊತೆಗಿನ ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ರೂಪಾ ಅವರು ಕ್ಷಮೆ ಕೋರಬೇಕೆಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪಟ್ಟು ಹಿಡಿದಿದ್ದಾರೆ.

ಕನ್ನಡಪ್ರಭ ವಾರ್ತೆ ದೆಹಲಿಐಪಿಎಸ್ ಅಧಿಕಾರಿ ಡಿ.ರೂಪಾ ಜೊತೆಗಿನ ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ರೂಪಾ ಅವರು ಕ್ಷಮೆ ಕೋರಬೇಕೆಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪಟ್ಟು ಹಿಡಿದಿದ್ದಾರೆ. ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಅಭಯಚಂದ್ರ ಓಕಾ ನೇತೃತ್ವದ ಪೀಠದಲ್ಲಿ ಶುಕ್ರವಾರ ಪ್ರಕರಣದ ವಿಚಾರಣೆ ನಡೆಯಿತು. ಸಿಂಧೂರಿ ಪರ ವಾದ ಮಂಡಿಸಿದ ವಕೀಲರು, ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಪೋಸ್ಟ್ ಗಳನ್ನು ತೆಗೆದ ತಕ್ಷಣ ಮಾನಹಾನಿ ಸರಿ ಹೋಗಲ್ಲ. ಸಿಂಧೂರಿ ವಿರುದ್ಧ ಮಾಡಿರುವ ಅವಹೇಳನಕಾರಿ ಪೋಸ್ಟ್‌ ಗಳನ್ನು ತೆಗೆದು ಹಾಕಬಹುದು. ಆದರೆ, ಘಟನೆಯಿಂದ ಅವರ ಕುಟುಂಬಕ್ಕೆ ಘಾಸಿಯಾಗಿದೆ. ಈ ರೀತಿಯ ಮಾನಹಾನಿ ಮಾಡಿದರೆ ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡುವುದಾದರೂ ಹೇಗೆ?. ಇದಕ್ಕಾಗಿ ಡಿ.ರೂಪಾ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದರು.ಇದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿದ ಡಿ.ರೂಪಾ ಪರ ವಕೀಲರು, ರೋಹಿಣಿ ಸಿಂಧೂರಿ ಕೂಡಾ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಬುದ್ದಿ ಭ್ರಮಣೆಯಾಗಿದೆ ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ ಎಂದರು. ಇದಕ್ಕೆ ತಿರುಗೇಟು ನೀಡಿದ ಸಿಂಧೂರಿ ಪರ ವಕೀಲರು, ಬುದ್ದಿ ಭ್ರಮಣೆಯಾದವರು ಈ ರೀತಿ ಪೋಸ್ಟ್‌ ಮಾಡುತ್ತಾರೆ ಎಂದಿದ್ದೇವೆಯೇ ಹೊರತು, ಡಿ.ರೂಪಾ ಅವರಿಗೆ ಬುದ್ದಿ ಭ್ರಮಣೆಯಾಗಿದೆ ಎಂದು ಹೇಳಿಲ್ಲ ಎಂದರು.ವಾದ, ಪ್ರತಿವಾದ ಆಲಿಸಿದ ನ್ಯಾ.ಎ.ಎಸ್ ಓಕಾ, ಇಬ್ಬರೂ ಅಧಿಕಾರಿಗಳು ಒಂದು ನಿರ್ಧಾರಕ್ಕೆ ಬರಬೇಕು. ಇದಕ್ಕಾಗಿ ಒಂದು ತಿಂಗಳ ಸಮಯ ನೀಡಲಾಗುವುದು. ಇಬ್ಬರೂ ಕೂತು ಮಾತಾಡಿ, ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಸಲಹೆ ನೀಡಿದರು. ಬಳಿಕ, ಪ್ರಕರಣದ ವಿಚಾರಣೆಯನ್ನು ಫೆ.15ಕ್ಕೆ ಮುಂದೂಡಿದರು.

ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಳಿಕ, ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ