ಮಂಗನ ಕಾಯಿಲೆಗೆ ಲಸಿಕೆ ರೆಡಿ: ಮಾನವ ಪ್ರಯೋಗ ಆರಂಭ

KannadaprabhaNewsNetwork |  
Published : Feb 08, 2026, 02:15 AM IST
VACCINE

ಸಾರಾಂಶ

ಕರ್ನಾಟಕದ ಪಶ್ಚಿಮಘಟ್ಟ ಪ್ರದೇಶದ ಜನರಲ್ಲಿ ತೀವ್ರ ಆತಂಕ ಮೂಡಿಸಿರುವ ಮಂಗನ ಕಾಯಿಲೆಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ವಿಜ್ಞಾನಿಗಳು ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

 ನವದೆಹಲಿ :  ಕರ್ನಾಟಕದ ಪಶ್ಚಿಮಘಟ್ಟ ಪ್ರದೇಶದ ಜನರಲ್ಲಿ ತೀವ್ರ ಆತಂಕ ಮೂಡಿಸಿರುವ ಮಂಗನ ಕಾಯಿಲೆಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ವಿಜ್ಞಾನಿಗಳು ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಾಣಿಗಳ ಮೇಲಿನ ಪ್ರಯೋಗದ ಬಳಿಕ ಇದೀಗ ಮಾನವರ ಮೇಲೆ ಲಸಿಕೆಯ ಕ್ಲಿನಿಕಲ್‌ ಪ್ರಯೋಗ ಆರಂಭಿಸಲಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ಕರ್ನಾಟಕ ಸರ್ಕಾರದ ಕೋರಿಕೆ

ಕರ್ನಾಟಕ ಸರ್ಕಾರದ ಕೋರಿಕೆಯ ಮೇರೆಗೆ, ಐಸಿಎಂಆರ್ ಲಸಿಕೆ ಅಭಿವೃದ್ಧಿಪಡಿಸಿದೆ. 2 ಡೋಸ್‌ಗಳ ಈ ಲಸಿಕೆಯನ್ನು ದ ಇಂಡಿಯನ್‌ ಇಮ್ಯುನುಲಾಜಿಕಲ್ಸ್‌ (ಐಐಎಲ್‌) ಮತ್ತು ಐಸಿಎಂಆರ್‌ನ ನ್ಯಾಷನಲ್‌ ಇನ್ಸ್‌ಟಿಟ್ಯೂಟ್‌ ಆಫ್‌ ವೈರಾಲಜಿ ಜಂಟಿಯಾಗಿ ಅಭಿವೃದ್ಧಿಪಡಿಸಿವೆ. 28 ದಿನಗಳ ಅಂತರದಲ್ಲಿ 2 ಸಲ ನೀಡುವ ರೀತಿಯ ಲಸಿಕೆಯನ್ನು ಇದೀಗ ಅಭಿವೃದ್ಧಿಪಡಿಸಲಾಗಿದೆ.

ಲಸಿಕೆಯನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಲಾಗಿದೆ

‘ಈಗಾಗಲೇ ಲಸಿಕೆಯನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಲಾಗಿದೆ. ಅದನ್ನು ಪ್ರಾಣಿಗಳ ಮೇಲೆ ಪ್ರಯೋಗಿಸಲಾಗಿದೆ. ಲಸಿಕೆಯ ವಿಷಕಾರಿ ಅಂಶಗಳ ಅಧ್ಯಯನಗಳು ಪೂರ್ಣಗೊಂಡಿವೆ. ಇದೀಗ ಮಾನವನ ಮೇಲಿನ ಮೊದಲನೇ ಹಂತದ ಪ್ರಾಯೋಗಿಕ ಪರೀಕ್ಷೆ ಆರಂಭಿಸಲಾಗಿದೆ. ಈ ಹಂತ ಯಶಸ್ವಿಯಾದರೆ ಮುಂದಿನ ಪ್ರಯೋಗಗಳನ್ನು ನಡೆಸಲಾಗುತ್ತದೆ. ಲಸಿಕೆ ಸುರಕ್ಷಿತ ಎಂದು ಖಚಿತವಾದರೆ ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಮಂಡಳಿಯಿಂದ ಅನುಮೋದನೆ ಪಡೆಯಲಾಗುವುದು’ ಎಂದು ಸಚಿವಾಲಯ ತಿಳಿಸಿದೆ.

ಮಂಗನ ಕಾಯಿಲೆಯು ಪಶ್ಚಿಮಘಟ್ಟ ಪ್ರದೇಶದಲ್ಲಿ ವ್ಯಾಪಕವಾಗಿದ್ದು, ಕರ್ನಾಟಕ, ತಮಿಳುನಾಡು, ಕೇರಳ, ಗೋವಾ ಮತ್ತು ಮಹಾರಾಷ್ಟ್ರದ ರಾಜ್ಯಗಳಲ್ಲಿ ತೀವ್ರವಾಗಿದೆ.

ಶಿವಮೊಗ್ಗ ಬಳಿಯ ಕ್ಯಾಸನೂರಿನ ಕಾಡಿನಲ್ಲಿ 1957ರಲ್ಲಿ ಮೊದಲ ಬಾರಿಗೆ ಈ ವೈರಸ್‌ ಕೋತಿಯಲ್ಲಿ ಕಂಡುಬಂದಿತ್ತು. ಇದನ್ನು ಕ್ಯಾಸನೂರು ಕಾಡಿನ ಕಾಯಿಲೆ ಅಥವಾ ಮಂಗನ ಕಾಯಿಲೆ ಎಂದು ಕರೆಯಲಾಗುತ್ತದೆ. ಇದು ಸೋಂಕಿತ ಪ್ರಾಣಿಗಳಿಂದ ಮಾನವರಿಗೆ ಹಬ್ಬುತ್ತದೆ. ಆದರೆ ಮಾನವರಿಂದ ಮಾನವರಿಗೆ ಹಬ್ಬುವುದಿಲ್ಲ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಯುವಕರು ಮೊಬೈಲ್‌ ಬಿಟ್ಟು ಕುಸ್ತಿ, ಕಬ್ಬಡ್ಡಿ ಆಟವಾಡಿ
ಕೆಜಿಐಎಸ್ 2.0 ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯ ಅವಶ್ಯಕ: ರಾಜೇಶ ಎನ್.ಎಲ್.