ವಿಚಾರಗಳು ಜಗತ್ತನ್ನೇ ಆಳುತ್ತವೆ: ಪ್ರೊ.ಬಿ.ಸಿ. ಮಹಾಬಲೇಶ್ವರಪ್ಪ

KannadaprabhaNewsNetwork |  
Published : Jun 04, 2026, 02:00 AM IST
ಸಂಡೂರು ತಾಲ್ಲೂಕಿನ ನಂದಹಳ್ಳಿಯಲ್ಲಿನ ಸ್ನಾತಕೋತ್ತರ ಕೇಂದ್ರದಲ್ಲಿ ಬುಧವಾರ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯದ ವಿಶ್ರಾಂತ ಇತಿಹಾಸ ಪ್ರಾಧ್ಯಾಪಕ ಕೊಟ್ಟೂರಿನ ಪ್ರೊ.ಬಿ.ಸಿ. ಮಹಾಬಲೇಶ್ವರಪ್ಪ ಅವರು ಮಾತನಾಡಿದರು. | Kannada Prabha

ಸಾರಾಂಶ

ಇಡೀ ಜಗತ್ತನ್ನು ಮುನ್ನಡೆಸುವುದು ಕೇವಲ ಭೌತಿಕ ಸಾಮರ್ಥ್ಯವಲ್ಲ.

ಸಂಡೂರು: ಇತಿಹಾಸದ ವಿದ್ಯಾರ್ಥಿಗಳು ಹಾಗೂ ಯುವ ಸಂಶೋಧಕರು ಹೊಸ ಆಲೋಚನಾ ಕ್ರಮಗಳನ್ನು ತಮ್ಮಲ್ಲಿ ರೂಢಿಸಿಕೊಳ್ಳಬೇಕು ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ವಿಶ್ರಾಂತ ಇತಿಹಾಸ ಪ್ರಾಧ್ಯಾಪಕ ಕೊಟ್ಟೂರಿನ ಪ್ರೊ.ಬಿ.ಸಿ. ಮಹಾಬಲೇಶ್ವರಪ್ಪ ಹೇಳಿದರು.

ತಾಲೂಕಿನ ನಂದಿಹಳ್ಳಿಯಲ್ಲಿರುವ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗ ಹಾಗೂ ನಂದಿಹಳ್ಳಿ ಹಳೆಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ವಿಶೇಷ ಉಪನ್ಯಾಸ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಇಡೀ ಜಗತ್ತನ್ನು ಮುನ್ನಡೆಸುವುದು ಕೇವಲ ಭೌತಿಕ ಸಾಮರ್ಥ್ಯವಲ್ಲ. ಬದಲಿಗೆ ಪ್ರಭಾವಶಾಲಿ ಆಲೋಚನೆಗಳು, ಉದಾತ್ತ ವಿಚಾರಗಳು. ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಹೋರಾಟಗಾರರು ತಮ್ಮ ತ್ಯಾಗ ಬಲಿದಾನ ಮಾಡಿದ್ದಾರೆ. ಆದರೆ, ಅವರಲ್ಲಿ ಅನೇಕರನ್ನು ಇತಿಹಾಸದಲ್ಲಿ ಕಡೆಗಣಿಸಲಾಗಿದೆ. ಅವರ ಕೊಡುಗೆಗಳನ್ನು ನಾವು ಸದಾ ಸ್ಮರಿಸಬೇಕು. ಇತಿಹಾಸದ ಇಂದಿನ ಹೊಸ ಸಂಶೋಧಕರು ಅಂತಹ ಅಪ್ರತಿಮ ಹೋರಾಟಗಾರರ ಕೊಡುಗೆಗಳನ್ನು ಮುಂಚೂಣಿಗೆ ತಂದು ದಾಖಲಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಸಹ ಪ್ರಾಧ್ಯಾಪಕ ಡಾ.ಎಸ್.ಎಂ. ಶಶಿಧರ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗಬಾರದು. ಅವರ ಸರ್ವಾಂಗೀಣ ವ್ಯಕ್ತಿತ್ವ ವಿಕಸನ ಶಿಕ್ಷಣದ ಮುಖ್ಯ ಉದ್ದೇಶವಾಗಬೇಕು ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ.ತಿಪ್ಪೇಸ್ವಾಮಿ ಎಚ್. ಮಾತನಾಡಿ, ಇತಿಹಾಸದ ಪುಟಗಳಲ್ಲಿ ರಾಜ ಮಹಾರಾಜರ, ಸಾಮ್ರಾಜ್ಯಗಳ ಇತಿಹಾಸವನ್ನು ಅನೇಕರು ಬರೆದಿದ್ದಾರೆ. ಆದರೆ, ಸಮಾಜದಲ್ಲಿ ಶತಮಾನಗಳಿಂದ ತುಳಿತಕ್ಕೊಳಗಾದ, ಶೋಷಿತ ಹಾಗೂ ವಂಚಿತ ಸಮುದಾಯಗಳ ನೈಜ ಇತಿಹಾಸ ಇನ್ನು ದಾಖಲಾಗಬೇಕಾಗಿದೆ ಎಂದು ತಿಳಿಸಿದರು.

ಡಾ.ನರಸಿಂಹಮೂರ್ತಿ ಟಿ.ಎಸ್. ಕಾರ್ಯಕ್ರಮ ನಿರೂಪಿಸಿದರು. ಅಧ್ಯಾಪಕರಾದ ಡಾ.ವಿರೂಪಾಕ್ಷಪ್ಪ ಎಂ., ಡಾ. ಮಲ್ಲಯ್ಯ ಸಂಡೂರು, ಡಾ.ಗುಡ್ಡಪ್ಪ, ಶಿವಕುಮಾರ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಖಂಡ ಧಾರವಾಡ ಜಿಲ್ಲೆಗೆ ಸಿಗದ ಸಚಿವಗಿರಿ!
ಇಂಧನ ಅಭಾವದ ವದಂತಿಗೆ ಕಿವಿಗೊಡದಿರಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ