ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!

KannadaprabhaNewsNetwork |  
Published : Sep 19, 2025, 01:01 AM IST
ಗದಗ ನಗದಲ್ಲಿನ ಬಸವೇಶ್ವರ ಮೂರ್ತಿ.  | Kannada Prabha

ಸಾರಾಂಶ

ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರ ಅಡಿಯಲ್ಲಿ ರಾಜ್ಯಾದ್ಯಂತ ಒಟ್ಟು 1275 ಹೊಸ ಪ್ರವಾಸಿ ತಾಣಗಳನ್ನು ಗುರುತಿಸಿದೆ. ಅದರಲ್ಲಿ ಗದಗ ಜಿಲ್ಲೆಯ 48 ತಾಣಗಳು ಸ್ಥಾನ ಪಡೆದಿವೆ.

ಶಿವಕುಮಾರ ಕುಷ್ಟಗಿ

ಕನ್ನಡಪ್ರಭ ವಾರ್ತೆ ಗದಗ

ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರ ಅಡಿಯಲ್ಲಿ ರಾಜ್ಯಾದ್ಯಂತ ಒಟ್ಟು 1275 ಹೊಸ ಪ್ರವಾಸಿ ತಾಣಗಳನ್ನು ಗುರುತಿಸಿದೆ. ಅದರಲ್ಲಿ ಗದಗ ಜಿಲ್ಲೆಯ 48 ತಾಣಗಳು ಸ್ಥಾನ ಪಡೆದಿವೆ.

ಗದಗ-ಬೆಟಗೇರಿ ಅವಳಿ ನಗರದಲ್ಲಿರುವ ವೀರೇಶ್ವರ ಪುಣ್ಯಾಶ್ರಮ, ವೀರಗಲ್ಲು, ಸಬರಮತಿ ಆಶ್ರಮದ ಪ್ರತಿರೂಪ ಸಹಿತ ಜಿಲ್ಲೆಯ 48 ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ. ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಅಂಕಿ ಅಂಶ ಆಧರಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಿತಿಯಿಂದ ಸ್ವೀಕರಿಸಿದ ಆಧಾರದ ಮೇಲೆ ಹೊಸ ಪ್ರವಾಸಿ ತಾಣ ಗುರುತಿಸಲಾಗಿದೆ.

ಹೊಸ ಪ್ರವಾಸಿ ತಾಣಗಳ ಗುರುತಿಸುವಿಕೆಯಿಂದ ಪ್ರವಾಸಿ ತಾಣಗಳು ಮೂಲ ಸೌಕರ್ಯ ಅಭಿವೃದ್ಧಿಯ ನಿರೀಕ್ಷೆ ಗರಿಗೆದರಿದೆ. ವಿಶೇಷವಾಗಿ ರಾಜ್ಯ ಪುರಾತತ್ವ ಇಲಾಖೆ ಅಧೀನದಲ್ಲಿರುವ ಮತ್ತು ನಿರ್ಲಕ್ಷ್ಯಕ್ಕೆ ಒಳಗಾಗಿರುವ ಅನೇಕ ಧಾರ್ಮಿಕ ತಾಣಗಳು, ಐತಿಹಾಸಿಕ ದೇವಸ್ಥಾನ ಅಭಿವೃದ್ಧಿ ಕಂಡು, ಪ್ರವಾಸಿಗರು ಆಕರ್ಷಿಸಲಿವೆ ಎನ್ನುತ್ತಾರೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು.

ಗದಗ ತಾಲೂಕು: ಭೀಷ್ಮ ಕೆರೆ (116 ಅಡಿ ಎತ್ತರದ ಬಸವೇಶ್ವರ ಮೂರ್ತಿ), ವೀರನಾರಾಯಣ ದೇವಸ್ಥಾನ, ತ್ರಿಕೂಟೇಶ್ವರ ದೇವಸ್ಥಾನ, ಸೋಮೇಶ್ವರ ದೇವಸ್ಥಾನ, ರಾಮೇಶ್ವರ ದೇವಸ್ಥಾನ, ತೋಂಟದಾರ್ಯ ಮಠ, ವೀರೇಶ್ವರ ಪುಣ್ಯಾಶ್ರಮ, ಜಾಮಿಯಾ ಮಸೀದಿ, ಬೆಟಗೇರಿ ಚರ್ಚ್, ಸಬರಮತಿ ಆಶ್ರಮ, ರಾಮಕೃಷ್ಣ ಆಶ್ರಮ, ವೆಂಕಟೇಶ್ವರ ದೇವಸ್ಥಾನ, ವೆಂಕಟಾಪುರ, ದಾವಲಮಲಿಕ ದರ್ಗಾ, ಮುಳಗುಂದ, ಸಿದ್ದೇಶ್ವರ ದೇವಸ್ಥಾನ, ಮುಳಗುಂದ, ಚಂದ್ರನಾಥ ಬಸದಿ, ಮುಳಗುಂದ, ಪಾರ್ವತಿ-ಪರಮೇಶ್ವರ ದೇವಸ್ಥಾನ, ಹರ್ತಿ, ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯ, ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ, ಬೆಟಗೇರಿಯ ವೀರಗಲ್ಲುಗಳು, ಸರ್ಕಾರಿ ವಸ್ತು ಸಂಗ್ರಹಾಲಯ, ಲಕ್ಕುಂಡಿಯ ಬ್ರಹ್ಮ, ಜೀನಾಲಯ ದೇವಸ್ಥಾನ, ನನ್ನೇಶ್ವರ ದೇವಸ್ಥಾನ, ಮುಸಕಿನ ಬಾವಿ, ಕಾಶೀ ವಿಶ್ವೇಶ್ವರ ದೇವಸ್ಥಾನ, ಹಾಲಗುಂಡಿ ಬಸವೇಶ್ವರ ದೇವಸ್ಥಾನ, ವಸ್ತು ಸಂಗ್ರಹಾಲಯಗಳು.

ಮುಂಡರಗಿ ತಾಲೂಕು: ವೀರಭದ್ರೇಶ್ವರ ದೇವಸ್ಥಾನ, ಸಿಂಗಟಾಲೂರು, ಹಮ್ಮಿಗಿ ಬ್ಯಾರೇಜ್, ಹಮ್ಮಿಗಿ, ಅನ್ನದಾನೇಶ್ವರ ಮಠ ಮುಂಡರಗಿ, ಕಪ್ಪತ್ತಗುಡ್ಡ, ಡಂಬಳ ಗ್ರಾಮದ ದೊಡ್ಡಬಸಪ್ಪ ದೇವಸ್ಥಾನ, ಸೋಮೇಶ್ವರ ದೇವಸ್ಥಾನ, ವಿಕ್ಟೋರಿಯಾ ರಾಣಿ ಕೆರೆ, ಜಪದ ಬಾವಿ.

ರೋಣ -ಗಜೇಂದ್ರಗಡ:ಕಲ್ಲೇಶ್ವರ ದೇವಸ್ಥಾನ ರೋಣ, ಗಜೇಂದ್ರಗಡ ಕೋಟೆ, ಗಜೇಂದ್ರಗಡ, ಕಾಲಕಾಲೇಶ್ವರ ಕ್ಷೇತ್ರ, ಗಜೇಂದ್ರಗಡ, ನಾಗೇಶ್ವರ ದೇವಸ್ಥಾನ (ಜೋಡು ಕಳಸ), ಸೂಡಿ, ರಸದ ಬಾವಿ ನಾಗನ ಹೊಂಡ, ಗಜೇಂದ್ರಗಡ, ಭೀಮಾಂಬಿಕಾ ದೇವಸ್ಥಾನ ಇಟಗಿ, ಶಂಭುಲಿಂಗ ದೇವಸ್ಥಾನ ಇಟಗಿ.

ಶಿರಹಟ್ಟಿ: ಫಕೀರೇಶ್ವರ ಮಠ ಶಿರಹಟ್ಟಿ, ಹೊಳಲಮ್ಮದೇವಿ ದೇವಸ್ಥಾನ ಶ್ರೀಮಂತಗಡ, ಕೋಟೆ ಶಿರಹಟ್ಟಿ, ವರವಿ ಮೌನೇಶ್ವರ ದೇವಸ್ಥಾನ, ಶಿರಹಟ್ಟಿ, ಮಾಗಡಿ ಕೆರೆ (ಪಕ್ಷಿ ಧಾಮ) ಶಿರಹಟ್ಟಿ,ಲಕ್ಷ್ಮೇಶ್ವರ ತಾಲೂಕಿನಲ್ಲಿ ಸೋಮೇಶ್ವರ ದೇವಸ್ಥಾನ, ಲಕ್ಷ್ಮೇಶ್ವರ, ಶಂಖ ಬಸದಿ, ಲಕ್ಷ್ಮೀಶ್ವರ, ನರಗುಂದ ತಾಲೂಕಿನ ವೆಂಕಟೇಶ್ವರ ದೇವಸ್ಥಾನ.ಪ್ರವಾಸೋದ್ಯಮ ಸಚಿವ ಎಚ್ .ಕೆ. ಪಾಟೀಲ ವಿಶೇಷ ಪ್ರಯತ್ನದಿಂದ ನೂತನ ಪ್ರವಾಸೋದ್ಯಮ ನೀತಿಯಡಿ ಗುರುತಿಸಲಾದ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಗದಗ ಜಿಲ್ಲೆಯ 48 ತಾಣಗಳು ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ ಹೇಳಿದರು.

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ