ಬಂದಕುಂಟೆ ಸರಕಾರಿ ಶಾಲೆಯಲ್ಲಿ ಪ್ರತಿಭಾ ಕಾರಂಜಿ

KannadaprabhaNewsNetwork |  
Published : Nov 16, 2025, 02:15 AM IST
೧೪ಶಿರಾ೨: ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಬಂದಕುಂಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ತೊಗರುಗುಂಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು   ಶಿಕ್ಷಣ ಸಮೂಹ ಸಂಪನ್ಮೂಲ ವ್ಯಕ್ತಿ ತಿಪ್ಪೇಸ್ವಾಮಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಪ್ರತಿಭಾ ಕಾರಂಜಿ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ರೂಪಿಸಲು ಪೋಷಕರು ಹಾಗೂ ಶಿಕ್ಷಕರನ್ನು ಪ್ರೋತ್ಸಾಹಿಸುತ್ತದೆ ಎಂದು ಶಿಕ್ಷಣ ಸಮೂಹ ಸಂಪನ್ಮೂಲ ವ್ಯಕ್ತಿ ತಿಪ್ಪೇಸ್ವಾಮಿ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ

ಪ್ರತಿಭಾ ಕಾರಂಜಿ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ರೂಪಿಸಲು ಪೋಷಕರು ಹಾಗೂ ಶಿಕ್ಷಕರನ್ನು ಪ್ರೋತ್ಸಾಹಿಸುತ್ತದೆ ಎಂದು ಶಿಕ್ಷಣ ಸಮೂಹ ಸಂಪನ್ಮೂಲ ವ್ಯಕ್ತಿ ತಿಪ್ಪೇಸ್ವಾಮಿ ಹೇಳಿದರು.

ಅವರು ತಾಲೂಕಿನ ಗೌಡಗೆರೆ ಹೋಬಳಿಯ ಬಂದಕುಂಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ತೊಗರುಗುಂಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ ಹೊರತರಲು ಶಿಕ್ಷಕರಿಗೆ ಅವಕಾಶವನ್ನು ನೀಡುತ್ತದೆ. ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಜೀವನ ಕೌಶಲ್ಯವನ್ನು ಹೊಂದಲು ಪ್ರತಿಭಾ ಕಾರಂಜಿ ಸಹಕಾರಿಯಾಗಲಿದೆ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ವೈ.ಕಲ್ಲಪ್ಪ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಕಲೆಗಳನ್ನು ಉತ್ತೇಜಿಸುವ ಮೂಲಕ ಶಾಲಾ ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆ ಸೃಜನಾತ್ಮಕ ಕೌಶಲ್ಯ ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ಶಿಕ್ಷಕರು ತರಗತಿ ವೇಳೆಯಲ್ಲಿ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಭವಿಷ್ಯದಲ್ಲಿ ಉತ್ತಮ ಪ್ರತಿಭಾನ್ವಿತ ವ್ಯಕ್ತಿಯಾಗಿ ಹೊರಹೊಮ್ಮಲು ಸಹಕರಿಸಬೇಕು ಎಂದರು.

ಈ ಸಂದರ್ಭದಲ್ಲಿ ಎಸ್. ಡಿ.ಎಂ.ಸಿ ಅಧ್ಯಕ್ಷೆ ಕೆಂಚಮ್ಮ, ಉಪಾಧ್ಯಕ್ಷೆ ಚಿತ್ತಮ್ಮ, ಗ್ರಾಮ ಪಂಚಾಯತಿ ಸದಸ್ಯೆ ಶಿವಮ್ಮ ರಂಗನಾಥ್, ಎಸ್. ಡಿ.ಎಂ.ಸಿ ಸದಸ್ಯೆ ತಿಮ್ಮರಾಜಮ್ಮ, ಇ ಸಿ ಓ ಮಂಜಪ್ಪ, ಸಿಆರ್ಪಿ ರಮೇಶ್, ಸಹ ಶಿಕ್ಷಕಿ ಸೌಭಾಗ್ಯಮ್ಮ ಎನ್, ಈರಪ್ಪ ಶಶಿಕಲಾ ಲಕ್ಷ್ಮೀದೇವಿ ಸೇರಿದಂತೆ ಹಲವಾರು ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ರಾಜಕಾರಣಕ್ಕೆ ಎಚ್‌ಡಿಕೆ ಪರೋಕ್ಷ ಇಂಗಿತ
ಜೈಲಿನ ಬ್ಯಾರಕ್‌ಗಳಿಗೆ ಸಿಸಿಟಿವಿ ಕ್ಯಾಮೆರಾ!