ಕನ್ನಡ ಪ್ರತಿಭೆಗಳ ಗುರುತಿಸಿ ಪ್ರೋತ್ಸಾಹಿಸಿ: ಎಸ್‌.ಕೆ. ಬೋರ್ಕರ್

KannadaprabhaNewsNetwork |  
Published : Nov 22, 2026, 02:15 AM IST
ಮುಂಡಗೋಡದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು. | Kannada Prabha

ಸಾರಾಂಶ

ಸ್ಥಳೀಯ ಕನ್ನಡ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಅವರಲ್ಲಿರುವ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಪ್ರತಿಭೆಗಳನ್ನು ಹೊರತರುವ ಕಾರ್ಯ ಮಾಡುತ್ತಿರುವುದು ಅತ್ಯಂತ ಶ್ಲಾಘನೀಯ.

ಮುಂಡಗೋಡ: ಕನ್ನಡ ಭಾಷೆ ಪ್ರತಿಯೊಬ್ಬರ ಮನೆಯಲ್ಲಿ ಮಾತ್ರವಲ್ಲ, ಎಲ್ಲರ ಮನದಲ್ಲಿಯೂ ಬೆಳಗಬೇಕಾದರೆ ಕನ್ನಡ ನಾಡು, ನುಡಿ, ಸಂಸ್ಕೃತಿ ಮತ್ತು ಸಾಹಿತ್ಯದ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ತಾಲೂಕು ನಿವೃತ್ತ ನೌಕರ ಸಂಘದ ಅಧ್ಯಕ್ಷ ಎಸ್.ಕೆ. ಬೋರ್ಕರ್ ಕರೆ ನೀಡಿದರು.

ಪಟ್ಟಣದ ನಿವೃತ್ತ ನೌಕರರ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಕನ್ನಡ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿಯ ಉಳಿವು ಹಾಗೂ ಬೆಳವಣಿಗೆಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಳೆದ ಐದು ವರ್ಷಗಳಿಂದ ಕಸಾಪ ಅಧ್ಯಕ್ಷ ವಸಂತ ಕೊಣಸಾಲಿ ಅವರ ಅಧ್ಯಕ್ಷತೆಯಲ್ಲಿ ಮುಂಡಗೋಡ ತಾಲೂಕು ಘಟಕವು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸ್ಥಳೀಯ ಕನ್ನಡ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಅವರಲ್ಲಿರುವ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಪ್ರತಿಭೆಗಳನ್ನು ಹೊರತರುವ ಕಾರ್ಯ ಮಾಡುತ್ತಿರುವುದು ಅತ್ಯಂತ ಶ್ಲಾಘನೀಯ. ಕನ್ನಡ ಕಟ್ಟುವ ಕಾರ್ಯದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.

ಚಿತ್ರ ಕಲಾ ಶಿಕ್ಷಕ ಸಂತೋಷ ಕುಸನೂರ ಮಾತನಾಡಿ, ಕನ್ನಡ ಚಲನಚಿತ್ರ ಗೀತೆಗಳು ಕನ್ನಡ ಭಾಷೆಯ ಸೌಂದರ್ಯ, ಸಾಹಿತ್ಯದ ಶ್ರೀಮಂತಿಕೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷ ವಸಂತ ಎಸ್. ಕೊಣಸಾಲಿ ಮಾತನಾಡಿ, ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗಾಗಿ ಪರಿಷತ್ತು ನಿರಂತರವಾಗಿ ವಿವಿಧ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದರು.

ಪರಿಷತ್ತಿನ ಗೌರವ ಕಾರ್ಯದರ್ಶಿ ವಿನಾಯಕ ಶೇಟ್ ಅವರು ಮಾತನಾಡಿದರು. ಎಸ್.ಬಿ. ಹೂಗಾರ್, ಸುಭಾಸ ಡೋರಿ, ಎಸ್. ಫಕ್ಕೀರಪ್ಪ, ಸಂಗಪ್ಪ ಕೋಳೂರು, ಶಿವಾನಂದ ವಾಲಿಶೆಟ್ಟರ್, ಕೃಷ್ಣ ಗುಜಮಾಗಡಿ, ಆನಂದ ಹೊಸೂರು, ಗೌರಮ್ಮ ಕೊಳ್ಳಾನವರ, ಜ್ಯೋತಿ ಆಚಾರಿ, ಶಾರದಾ ರಾಠೋಡ ಸೇರಿದಂತೆ ಪರಿಷತ್ತಿನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸಾಹಿತಿಗಳು, ಶಿಕ್ಷಕರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು. ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಡಿ. ಮುಡೆಣ್ಣವರ ಸ್ವಾಗತಿಸಿದರು. ಸಿ. ಎಸ್. ಸುರ್ಕೋಡ್ ಪ್ರಾರ್ಥನೆ ಸಲ್ಲಿಸಿದರು. ಗೌರವ ಕೋಶಾಧ್ಯಕ್ಷರಾದ ನಾಗರಾಜ ಅರ್ಕಸಾಲಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಜಾಸೇವಾ ಜನರ ಸಮಸ್ಯೆ ಪರಿಹಾರಕ್ಕೆ ಸಹಕಾರ
ಶಾಸನಗಳ ಸಂರಕ್ಷಣೆ ನಮ್ಮೆ ಹೊಣೆ