ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ: ನಾಗೇಶ್ ರಾಯ್ಕರ್

KannadaprabhaNewsNetwork |  
Published : May 29, 2025, 01:00 AM IST
ಉದ್ಘಾಟಿಸಲಾಯಿತು  | Kannada Prabha

ಸಾರಾಂಶ

ಪ್ರತಿ ವರ್ಷ ವಾರ್ಷಿಕ ಪರೀಕ್ಷೆ ನಂತರದ ಬೇಸಿಗೆ ರಜೆಯಲ್ಲಿ ಮಕ್ಕಳು ಮೂಬೈಲ್,ಟಿವಿ ಹಾಗೂ ಆಧುನಿಕ ತಂತ್ರಜ್ಞಾನದಲ್ಲಿ ತಮ್ಮ ಅಮೂಲ್ಯವಾದ ಸಮಯ ವ್ಯರ್ಥ ಮಾಡುತ್ತಿದ್ದಾರೆ.

ಕಾರವಾರ: ಮಕ್ಕಳಿಗೆ ಬೇಸಿಗೆ ರಜೆ ದಿನಗಳಲ್ಲಿ ಅನವಶ್ಯಕವಾಗಿ ಸಮಯ ವ್ಯರ್ಥ ಮಾಡಿಸದೇ ಉಚಿತ ಬೇಸಿಗೆ ಶಿಬಿರಗಳಿಗೆ ಕಳುಹಿಸಿ ಅವರಲ್ಲಿರುವ ಪ್ರತಿಭೆ ಗುರುತಿಸಿ, ಆ ಕ್ಷೇತ್ರದಲ್ಲಿ ನಿರಂತರವಾಗಿ ತರಬೇತಿ ಕೊಡಿಸಿ ಮಕ್ಕಳ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಸಹಕರಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್ ಹೇಳಿದರು.

ಅವರು ಬುಧವಾರ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕಾರವಾರ ಸಹಯೋಗದಲ್ಲಿ 2025-26ನೇ ಸಾಲಿನ ಉಚಿತ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರತಿ ವರ್ಷ ವಾರ್ಷಿಕ ಪರೀಕ್ಷೆ ನಂತರದ ಬೇಸಿಗೆ ರಜೆಯಲ್ಲಿ ಮಕ್ಕಳು ಮೂಬೈಲ್,ಟಿವಿ ಹಾಗೂ ಆಧುನಿಕ ತಂತ್ರಜ್ಞಾನದಲ್ಲಿ ತಮ್ಮ ಅಮೂಲ್ಯವಾದ ಸಮಯ ವ್ಯರ್ಥ ಮಾಡುತ್ತಿದ್ದಾರೆ. ಖಾಸಗಿ ಸಂಸ್ಥೆಗಳು ಆಯೋಜನೆ ಮಾಡಿದ ಶಿಬಿರಗಳನ್ನು ಮಕ್ಕಳನ್ನು ಕಳುಹಿಸಿ ಅನವಶ್ಯಕವಾಗಿ ಹಣ ವ್ಯರ್ಥ ಮಾಡುವ ಬದಲು ತಮ್ಮ ಮಕ್ಕಳನ್ನು ಇಂತಹ ಉಚಿತ ಶಿಬಿರಗಳಿಗೆ ಕಳುಹಿಸದಲ್ಲದೇ ಅವರಲ್ಲಿರುವ ಹುದುಗಿರುವ ಪ್ರತಿಭೆ ಗುರುತಿಸಿ ಯಾವ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುತ್ತಾರೆ. ಆ ಕ್ಷೇತ್ರದ ತರಬೇತಿಗೆ ತಪ್ಪದೇ ಕಳುಹಿಸಬೇಕು ಎಂದು ಪೋಷಕರಿಗೆ ಕಿವಿಮಾತು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಡಾ. ಲಕ್ಷ್ಮೀದೇವಿ ಮಾತನಾಡಿ, ಮಕ್ಕಳ ಬೌದ್ಧಿಕ ಮತ್ತು ಕ್ರಿಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿಯಾಗಿದ್ದು, ಮಕ್ಕಳ ಬೌದ್ಧಿಕ ವಿಕಾಸದೊಂದಿಗೆ ಭವಿಷ್ಯದ ಜೀವನಕ್ಕೆ ಮಾದರಿಯಾಗುತ್ತದೆ. ಮಕ್ಕಳು ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆಯಂತಹ ಸರ್ಕಾರಿ ಕಾರ್ಯಕ್ರಮಗಳಲ್ಲಿ ತಮ್ಮ ಕಲೆ, ಪ್ರತಿಭೆ ಪ್ರದರ್ಶಿಸಿ ತಮ್ಮನ್ನು ಗುರುತಿಸಿಕೊಳ್ಳಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿರೂಪಾಕ್ಷಗೌಡ ಪಾಟೀಲ್, ಮಕ್ಕಳಲ್ಲಿನ ಸೂಕ್ತ ಪ್ರತಿಭೆ ಅರಳಿಸಲು ಹಾಗೂ ಮಾನಸಿಕ ಶಕ್ತಿ ಹೊರ ಹಾಕಲು ಇಂತಹ ಉಚಿತ ಶಿಬಿರಗಳ ಮೂಲಕ ಸಾಧ್ಯವಾಗಿದೆ. ಈ ಶಿಬಿರದಲ್ಲಿ ಮಕ್ಕಳು ಸಾಂಸ್ಕೃತಿಕ, ನೃತ್ಯ, ಚಿತ್ರಕಲೆ, ಕ್ರಾಪ್ಟ್ ಇತ್ಯಾದಿ ಚಟುವಟಿಕೆ ಕಲಿತು ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ, ಅವರಿಗೆ ಸೂಕ್ತ ವೇದಿಕೆ ಕಲ್ಪಿಸಿ ಇಲಾಖೆಯಿಂದ ಮುಂದಿನ ವರ್ಷ 1 ತಿಂಗಳ ಕಾಲ ಬೇಸಿಗೆ ಶಿಬಿರ ಆಯೋಜಿಸಲು ಪ್ರಯತ್ನಿಸಲಾಗುವುದು ಎಂದರು.

ವಾರ್ತಾ ಮತ್ತು ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಶಿವಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೋನಲ್ ಐಗಲ್ ಇದ್ದರು. ಕಲ್ಪನಾರಶ್ಮಿ ಕಲಾ ಲೋಕದ ಅಧ್ಯಕ್ಷ ಸೂರ್ಯಪ್ರಕಾಶ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

PREV

Recommended Stories

ಯೂರಿಯಾ: ರೈತ ಬಾಂಧವರಲ್ಲಿ ಅತಂಕ ಬೇಡ
ಪಂಚಪೀಠ ನಿರ್ಣಯ ಒಪ್ಪಲ್ಲ, ರಂಭಾಪುರಿ ಶ್ರೀಗಳ ಮನಸ್ಥಿತಿ ಕಲುಷಿತ: ವಚನಾನಂದ ಶ್ರೀ