ಮಕ್ಕಳಲ್ಲಿನ ರಕ್ತ ಹೀನತೆ ಗುರುತಿಸಿ ಪೌಷ್ಠಿಕತೆಯಲ್ಲಿ ತೊಡಗಿಸಿ

KannadaprabhaNewsNetwork |  
Published : Sep 14, 2024, 01:51 AM IST
ಚಿತ್ರದುರ್ಗ ಎರಡನೇ ಪುಟದ ಬಾಟಂ   | Kannada Prabha

ಸಾರಾಂಶ

ಮಕ್ಕಳಲ್ಲಿನ ಅಪೌಷ್ಠಿಕತೆ ಮತ್ತು ರಕ್ತಹೀನತೆ ಗುರುತಿಸಿ ಅವರನ್ನು ಸುಧಾರಿತ ಪೌಷ್ಟಿಕತೆಯಲ್ಲಿ ತೊಡಗಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕೆಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಡಿ.ಎಂ. ಅಭಿನವ್ ಸಲಹೆ ನೀಡಿದರು.

ಕನ್ನಡಪ್ರಭವಾರ್ತೆ ಚಿತ್ರದುರ್ಗಮಕ್ಕಳಲ್ಲಿನ ಅಪೌಷ್ಠಿಕತೆ ಮತ್ತು ರಕ್ತಹೀನತೆ ಗುರುತಿಸಿ ಅವರನ್ನು ಸುಧಾರಿತ ಪೌಷ್ಟಿಕತೆಯಲ್ಲಿ ತೊಡಗಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕೆಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಡಿ.ಎಂ. ಅಭಿನವ್ ಸಲಹೆ ನೀಡಿದರು.ನಗರದ ಜಿಲ್ಲಾ ಆರೋಗ್ಯಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಹಿರಿಯೂರು, ಹೊಸದುರ್ಗ ಮತ್ತು ಹೊಳಲ್ಕೆರೆ ತಾಲೂಕಿನ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳಿಗೆ ಮಕ್ಕಳ ಸುಧಾರಿತ ಪೌಷ್ಟಿಕತೆಗಾಗಿ ಆರೋಗ್ಯ ಪ್ರಕ್ರಿಯೆ ಸಾಮಾರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಪೌಷ್ಠಿಕತೆ ಬಗ್ಗೆ ಯಾರೂ ಉದಾಸೀನ ಮಾಡಬಾರದು. ಭವಿಷ್ಯದ ಆರೋಗ್ಯಪೀಳಿಗೆ ಸೃಷ್ಟಿಗೆ ಹಿನ್ನಡೆಯಾಗುತ್ತದೆ ಎಂದರು.ಅಪೌಷ್ಠಿಕತೆಯ ಮಕ್ಕಳ ಪ್ರಮಾಣ ತಗ್ಗಿಸಲು ಈ ತರಬೇತಿ ಕಾರ್ಯಾಗಾರ ಒಂದು ನೂತನ ವಿಧಾನವಾಗಿದೆ. ಪ್ರತಿ ಗ್ರಾಮಗಳಲ್ಲಿ ಮಕ್ಕಳಲ್ಲಿ ಕಂಡು ಬರುವ ಅಪೌಷ್ಟಿಕತೆಯನ್ನು ಗುರಿತಿಸಿ, ಆ ಮಕ್ಕಳಿಗೆ ಸ್ಥಳೀಯವಾಗಿ ದೊರೆಯುವ ಸುಧಾರಿತ ಪೌಷ್ಠಿಕಾಹಾರ ಸೇವನೆಗೆ ಅವಕಾಶ ಮಾಡಿಕೊಡಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ತಾಯಂದಿರಿಗೆ ಸಲಹೆ ಮಾಹಿತಿ ಅರಿವು ಮೂಡಿಸಿ, ಸುಧಾರಿತ ಪೌಷ್ಠಿಕ ಪೋಷಣೆಯಲ್ಲಿ ತೊಡುಗುವಂತೆ ಮಾಡುವುದು ತರಬೇತಿಯ ಮುಖ್ಯ ಉದ್ದೇಶ ಎಂದರು.6 ವರ್ಷದೊಳಗಿನ ಮಕ್ಕಳಿಗೆ ಸಾಂಸ್ಥಿಕ ಹಾಗೂ ಸಮುದಾಯ ಮಟ್ಟದಲ್ಲಿ ಅಪೌಷ್ಠಿಕ ನಿವಾರಣೆಗಾಗಿ ಆರೈಕೆ ಮತ್ತು ಚಿಕಿತ್ಸೆ, ಪೌಷ್ಠಿಕ ಪುನ:ಶ್ಚೇತನ ಸಾರ್ವಜನಿಕ ಆರೋಗ್ಯ ಸೇವೆಗಳೊಂದಿಗೆ ಬಲಪಡಿಸುವುದು ಅಗತ್ಯವಿದೆ. ಅಂಗನವಾಡಿ ಕೇಂದ್ರಗಳು ಈ ನಿಟ್ಟಿನಲ್ಲಿ ಸದಾ ಸಕ್ರಿಯವಾಗಿರುತ್ತವೆ ಎಂದು ತಿಳಿಸಿದರು.ತಾಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ. ಗಿರೀಶ್ ಮಾತನಾಡಿ, ಗ್ರಾಮಮಟ್ಟದಲ್ಲಿ ಅಪೌಷ್ಠಿಕತೆ ಮಕ್ಕಳನ್ನು ಗುರುತಿಸಿ ಪಟ್ಟಿ ಮಾಡಿ ಜಿಲ್ಲಾ ಆಸ್ಪತ್ರೆಯಲ್ಲಿರುವ ಪೌಷ್ಠಿಕ ಪುನ:ಶ್ಚೇತನ ಕೇಂದ್ರಕ್ಕೆ ಕಳುಹಿಸಿ ಉಚಿತ ಆರೈಕೆ ಚಿಕಿತ್ಸೆ ಪೋಷಣೆ ಪಡೆದುಕೊಳ್ಳಬೇಕು. ಈ ಬಗ್ಗೆ ಗ್ರಾಮೀಣ ಮಟ್ಟದಲ್ಲಿ ವ್ಯಾಪಕ ಅರಿವು ಮೂಡಿಸಿ ಅಪೌಷ್ಠಿಕತೆ ನಿವಾರಿಸಲು ಶ್ರಮಿಸಬೇಕೆಂದರು.ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯ್ಕ್, ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೌರಮ್ಮ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಬಿ. ಮೂಗಪ್ಪ, ಬಿ. ಜಾನಕಿ, ಲಲಿತಮ್ಮ, ಪೋಷಣ್ ಅಭಿಯಾನ ವ್ಯವಸ್ಥಾಪಕ ಕರಕಪ್ಪ ಮೇಟಿ ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ ತೆಬಿಯಾ ರೋಸಿಯಾ ಹೂ ವೈಭವ!
ನಿವೇಶನ ರಹಿತರಿಗೆ ಸರ್ಕಾರದಿಂದ ಸೈಟ್‌