ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ತಾಲೂಕು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಗರದ ಸೇಂಟ್ ಜೋಸೆಫ್ ಕಾನ್ವೆಂಟ್ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟಿಸಿ ಮಾತನಾಡಿದರು.
ಪ್ರತಿಭೆ ಗುರ್ತಿಸಿ ತರಬೇತಿ ನೀಡಿಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸುವ ಪ್ರಾಥಮಿಕ ಶಾಲಾ ಹಂತದಲ್ಲಿ ಮಕ್ಕಳಿಗೆ ಸೂಕ್ತವಾದ ತರಬೇತಿ ನೀಡಿದರೆ, ಮಕ್ಕಳು ರಾಜ್ಯ, ದೇಶ, ವಿದೇಶದಲ್ಲಿ ಭಾಗವಹಿಸುವ ಅವಕಾಶ ಸಿಗುತ್ತದೆ. ಈ ವೇದಿಕೆ ಇಂದು ಮಕ್ಕಳು 45 ಸ್ಪರ್ಧೆಗಳಲ್ಲಿ ಭಾಗವಹಿಸಿ ತಾಲೂಕು ಮತ್ತು ಜಿಲ್ಲಾ ಹಂತದಲ್ಲಿ ಕಲಿಕಾ ಪ್ರತಿಭೆ ಪ್ರದರ್ಶಿಸಲಿ ಎಂದು ಹೇಳಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎ.ನಾರಾಯಣ ಸ್ವಾಮಿ ಮಾತನಾಡಿ, ಯಾವುದೇ ಒಂದು ಮಗು ಸಮಗ್ರವಾಗಿ ಬೆಳೆಯುವಂತೆ ಶೈಕ್ಷಣಿಕ ವಾತಾವರಣ ನಿರ್ಮಿಸಲು ಪ್ರತಿಭಾ ಕಾರಂಜಿ ಮಕ್ಕಳ ಪ್ರತಿಭೆ ಹೊರತರಲು ಮುಖ್ಯ ವೇದಿಕೆಯಾಗಿರಲಿದೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಎಲ್ಲಾ ವಿಧದ ಜ್ಞಾನ ಒದಗಿಸಬೇಕು. ಮಕ್ಕಳು ಸತತ ಪ್ರಯತ್ನ ಬಿಡದೆ ಛಲ, ನಿರ್ದಿಷ್ಟ ಗುರಿ ಇಟ್ಟುಕೊಂಡು ಪ್ರಯತ್ನಿಸಿದರೆ ಯಶಸ್ಸು ತಾನಾಗಿಯೇ ಹಿಂಬಾಲಿಸುತ್ತದೆ ಎಂದರು.ಪೋಷಕರ ಬೆಂಬಲವೂ ಅಗತ್ಯ
ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ ಮಾತನಾಡಿ, ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡು ಎಂಬ ಗಾದೆಯಂತೆ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸುವ ನಿಟ್ಟಿನಲ್ಲಿ ಶಿಕ್ಷಕರಂತೆ ಪೋಷಕರೂ ಕೂಡ ಗಮನ ಹರಿಸಬೇಕು.ಕೇವಲ ಪಠ್ಯಬೋಧನೆಗೆ ಮಾತ್ರ ಸೀಮಿತವಾಗದೆ, ಮಕ್ಕಳಲ್ಲಿ ಅಂತರ್ಗತವಾಗಿರುವ ಪ್ರತಿಭೆಯನ್ನು ಗುರುತಿಸುವ ಕೆಲಸ ಮಾಡಬೇಕು. ಇದನ್ನು ಮನಗಂಡೇ ಸರ್ಕಾರ ಪ್ರತಿಭಾ ಕಾರಂಜಿ ಎಂಬ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಸ್ವರ್ಧೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ, ಸ್ವರ್ಧೆಯಲ್ಲಿ ಭಾಗವಹಿಸಿ, ತಮ್ಮ ಪ್ರತಿಭೆಯನ್ನು ಅನಾವರಣ ಮಾಡುವುದು ಮುಖ್ಯ. ತಾಲೂಕಿನ 19 ಕ್ಲಸ್ಟರ್ ಗಳಿಂದ 500 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸುತ್ತಿರುವುದು ಸಂತೋಷದ ವಿಚಾರ ಎಂದರು.ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಸುನಿಲ್, ಅಕ್ಷರ ದಾಸೋಹ ಅಧಿಕಾರಿ ಲಕ್ಷ್ಮೀ ದೇವಮ್ಮ, ಜಿಲ್ಲಾ ಖಾಸಗಿ ಶಾಲೆಗಳ ಜಿಲ್ಲಾಧ್ಯಕ್ಷ ಹಾಗೂ ವಕೀಲ ಶ್ರೀನಿವಾಸ, ಅನುದಾನಿತ ಶಾಲೆಗಳ ಜಿಲ್ಲಾಧ್ಯಕ್ಷ ನಾರಾಯಣ ಸ್ವಾಮಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಂದ್ರ ಪ್ರಸಾದ್, ತಾಲ್ಲೂಕು ಸಮನ್ವಯ ಅಧಿಕಾರಿ ಅರುಣ್ ಕುಮಾರ್ , ಚಿತ್ರಕಲಾ ರಾಜ್ಯ ಕಾರ್ಯದರ್ಶಿ ಸಂತೋಷ್, ಪದವೀಧರ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನರೇಶ್, ಎನ್ ಪಿಎಸ್ ಜಿಲ್ಲಾಧ್ಯಕ್ಷ ಸುರೇಶ್, ಸರ್ಕಾರಿ ನೌಕರರ ಸಂಘದ ನಿರ್ದೇಶಕ ನಾಗರಾಜ್, ತಾಲ್ಲೂಕು ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಲಪತಿ ಗೌಡ ಮತ್ತಿತರರು ಇದ್ದರು.