ಪ್ರತಿಭೆ ಗುರುತಿಸಿ ಪುರಸ್ಕರಿಸುವುದು ಸಮಾಜದ ಆದ್ಯ ಕರ್ತವ್ಯ

KannadaprabhaNewsNetwork |  
Published : Oct 19, 2026, 02:30 AM IST
ಕೊಪ್ಪಳದಲ್ಲಿ ನಡೆದ ವಾಸವಿ ಪ್ರತಿಭೋತ್ಸವ–2026 ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆರ್ಯ ವೈಶ್ಯ ಸಂಘದ ಪದಾಧಿಕಾರಿಗಳು ಹಾಗೂ ಗಣ್ಯರು ಸನ್ಮಾನಿಸಿದರು. | Kannada Prabha

ಸಾರಾಂಶ

ಎಸ್‌ಎಸ್‌ಎಲ್‌ಸಿ, ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಜಿಲ್ಲೆಯ 65 ಪ್ರತಿಭಾವಂತ ಆರ್ಯ ವೈಶ್ಯ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಕೊಪ್ಪಳ: ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕರಿಸುವುದು ಸಮಾಜದ ಆದ್ಯ ಕರ್ತವ್ಯವಾಗಿದೆ. ವಿದ್ಯಾರ್ಥಿಗಳ ಸಾಧನೆಯನ್ನು ಗೌರವಿಸುವುದರಿಂದ ಅವರಲ್ಲಿ ಆತ್ಮವಿಶ್ವಾಸ ಹೆಚ್ಚುವ ಜತೆಗೆ ಭವಿಷ್ಯದಲ್ಲಿ ಇನ್ನಷ್ಟು ಉನ್ನತ ಸಾಧನೆ ಮಾಡಲು ಪ್ರೇರಣೆ ದೊರೆಯುತ್ತದೆ ಎಂದು ಕೊಪ್ಪಳ ಆರ್ಯ ವೈಶ್ಯ ಸಂಘದ ಅಧ್ಯಕ್ಷ ಹಾಗೂ ಜಿಲ್ಲಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗುಪ್ತಾ ಹೇಳಿದರು.

ನಗರದ ಕಿನ್ನಾಳ ರಸ್ತೆಯ ವಾಸವಿ ಮಂಗಲ ಭವನದಲ್ಲಿ ಕೊಪ್ಪಳ ಆರ್ಯ ವೈಶ್ಯ ಸಂಘದ ವತಿಯಿಂದ ಭಾನುವಾರ ಆಯೋಜಿಸಿದ್ದ ‘ವಾಸವಿ ಪ್ರತಿಭೋತ್ಸವ–2026’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಸ್‌ಎಸ್‌ಎಲ್‌ಸಿ, ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಜಿಲ್ಲೆಯ 65 ಪ್ರತಿಭಾವಂತ ಆರ್ಯ ವೈಶ್ಯ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಕರ್ನಾಟಕ ಆವೋಪಗಳ ಒಕ್ಕೂಟದ ರಾಜ್ಯಾಧ್ಯಕ್ಷ ಎಸ್.ಎಲ್. ಕೋರಾ ಮುಖ್ಯ ಅತಿಥಿಯಾಗಿ, ಲಯನ್ಸ್ ಕ್ಲಬ್ ಅಧ್ಯಕ್ಷ ವೆಂಕಟೇಶ ಶಾನಭಾಗ ಮುಖ್ಯ ವಕ್ತಾರರಾಗಿ ಪಾಲ್ಗೊಂಡಿದ್ದರು.

ಆರ್ಯ ವೈಶ್ಯ ಸಂಘದ ಉಪಾಧ್ಯಕ್ಷ ನಾರಾಯಣ ಡಿ. ಕುರಗೋಡು, ರಾಘವೇಂದ್ರ ಬೆಲ್ಲಂಕೊಂಡಿ, ರಾಘವೇಂದ್ರ ಪಾನಗಂಟಿ, ಡಿ. ಗುರುರಾಜ, ರಾಕೇಶ್ ಪಾನಗಂಟಿ, ಆನಂದ ಶಿರಹಟ್ಟಿ, ಹೇಮಲತಾ ಲಕ್ಷ್ಮಣ್ ಜನಾದ್ರಿ, ಶಾರದಾ ಬೆಲ್ಲಂಕೊಂಡಿ ಉಪಸ್ಥಿತರಿದ್ದರು.

ಶ್ರೀವಾಸವಿ ದೇವಸ್ಥಾನದಲ್ಲಿ ವಿಶೇಷ ಅಲಂಕಾರ:

ಕೊಪ್ಪಳದ ಶ್ರೀವಾಸವಿ ಕನ್ಯಕಾ ಪರಮೇಶ್ವರಿ ದೇವಸ್ಥಾನದಲ್ಲಿ ದಸರಾ ಉತ್ಸವದ ಅಂಗವಾಗಿ ಎಂಟನೇ ದಿನವಾದ ಭಾನುವಾರ ಅಮ್ಮನವರಿಗೆ ಶ್ರೀ ಅರ್ಧನಾರೀಶ್ವರ ಅಲಂಕಾರ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ದುರ್ಗಾ ಹೋಮ ಹಾಗೂ ಮಹಾರಥೋತ್ಸವ ಜರುಗಿದವು. ಮಕ್ಕಳಿಗೆ ನವದುರ್ಗೆಯರು ಹಾಗೂ ಶ್ರೀ ವೆಂಕಟೇಶ್ವರ ಸ್ವಾಮಿಯ ಅಲಂಕಾರ ಮಾಡಲಾಗಿತ್ತು. ಭಕ್ತರು ದೇವಿಯ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಕರ ಸಮಸ್ಯೆಗಳ ಬಗ್ಗೆ ಬಿಜೆಪಿಗೆ ಕಾಳಜಿಯಿಲ್ಲ: ಸಚಿವ ಶಿವರಾಜ ತಂಗಡಗಿ
ಇಂದು ಐತಿಹಾಸಿಕ ಕುಕನೂರು ಮಹಾಮಾಯೆ ದೇವಿ ರಥೋತ್ಸವ