ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರು ಮತ್ತು ಪೋಷಕರ ಆದ್ಯ ಕರ್ತವ್ಯವೆಂದು ಪರಿವರ್ತನಾ ಇನ್ನೋವೇಟಿವ್ ಪಬ್ಲಿಕ್ ಸ್ಕೂಲ್‌ನ ಅಧ್ಯಕ್ಷ ಪಿ.ಒ.ತೇಜಸ್ ತಿಳಿಸಿದರು.
ಕಡೂರು: ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರು ಮತ್ತು ಪೋಷಕರ ಆದ್ಯ ಕರ್ತವ್ಯವೆಂದು ಪರಿವರ್ತನಾ ಇನ್ನೋವೇಟಿವ್ ಪಬ್ಲಿಕ್ ಸ್ಕೂಲ್‌ನ ಅಧ್ಯಕ್ಷ ಪಿ.ಒ.ತೇಜಸ್ ತಿಳಿಸಿದರು.
ಕಡೂರು-ಬೀರೂರು ನಡುವೆ ಇರುವ ಪರಿವರ್ತನಾ ಇನ್ನೋವೇಟಿವ್ ಪಬ್ಲಿಕ್ ಸ್ಕೂಲ್‌ನಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳು ಕಲಿಕಾ ಹಂತದಲ್ಲಿ ಪಠ್ಯಪುಸ್ತಕದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ವಿಷಯಗಳ ಸ್ಪರ್ಧೆಗಳಲ್ಲಿ ಹೆಚ್ಚು ಹೆಚ್ಚು ಪಾಲ್ಗೊಳ್ಳುವುದರಿಂದ ಸಮಗ್ರ ಶಿಕ್ಷಣ ಪಡೆಯಬಹುದು. ಪ್ರತಿಭಾ ಕಾರಂಜಿ ಅಂತಹ ಕಾರ್ಯಕ್ರಮಗಳು ಪ್ರಶಸ್ತಿ ಪಡೆಯಲು ಮಾತ್ರ ಸೀಮಿತವಲ್ಲದೆ ಮಕ್ಕಳಲ್ಲಿ ಸ್ಪರ್ಧಾತ್ಮಕ ಬೆಳವಣಿಗೆಯನ್ನು ರೂಪಿಸುತ್ತದೆ. ಪ್ರಾಥಮಿಕ ಶಾಲಾ ಹಂತದಿಂದಲೇ ಮಕ್ಕಳು ಸ್ಪರ್ಧೆಗಳಲ್ಲಿ ಪಾಲ್ಗೊಂಡು ಉತ್ತಮ ಪ್ರತಿಭೆಯನ್ನು ರೂಪಿಸಿಕೊಳ್ಳಬೇಕು ಎಂದರು. ಮುಖ್ಯ ಶಿಕ್ಷಕ ನವೀ ನ್ ಬಾಬು ಮಾತನಾಡಿ, ಸ್ಪರ್ಧೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಬಹಳ ಮುಖ್ಯ. ಪ್ರತಿಭಾ ಕಾರಂಜಿ ಅಂತಹ ವೇದಿಕೆಗಳು ಸೂಕ್ತ ಪ್ರತಿಭೆಯನ್ನು ಗುರುತಿಸಿಕೊಳ್ಳಲು ಒಂದು ದೊಡ್ಡ ವೇದಿಕೆ ಎಂದರು. ಈ ಸಂದರ್ಭದಲ್ಲಿ ಕಿರಣ್ ಕುಮಾರ್, ರಾಕೇಶ್, ಮೈಲಾರಪ್ಪ, ಉಮಾ ಮಹೇಶ್, ಸೀತಾ ಲಕ್ಷ್ಮಿ, ನಾಗರತ್ನ, ಜ್ಯೋತಿ, ಅರುಣ್, ಸತ್ಯಬಾಯಿ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.