ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ, ಸಾಮಾಜಿಕ ಮೌಲ್ಯ

KannadaprabhaNewsNetwork |  
Published : Oct 19, 2026, 02:15 AM IST
ಹರಿಹರ | Kannada Prabha

ಸಾರಾಂಶ

ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ, ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಡಾ. ಎ.ಬಿ. ರಾಮಚಂದ್ರಪ್ಪ ಹೇಳಿದ್ದಾರೆ.

- “ಕನ್ನಡ ಸಾಹಿತ್ಯದಲ್ಲಿ ಸಾಂಸ್ಕೃತಿಕ ಅಸ್ಮಿತೆ” ವಿಶೇಷ ಉಪನ್ಯಾಸದಲ್ಲಿ ಡಾ.ರಾಮಚಂದ್ರಪ್ಪ- - -

ಕನ್ನಡಪ್ರಭ ವಾರ್ತೆ ಹರಿಹರ

ಕನ್ನಡ ಸಾಹಿತ್ಯದಲ್ಲಿ ವೈಚಾರಿಕ, ಸಾಂಸ್ಕೃತಿಕ, ಸಾಮಾಜಿಕ ಮೌಲ್ಯಗಳ ಸಮನ್ವಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಡಾ. ಎ.ಬಿ. ರಾಮಚಂದ್ರಪ್ಪ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಪರಸ್ಪರ ಬಳಗ ಸಹಯೋಗದಲ್ಲಿ ಆಯೋಜಿಸಿದ್ದ “ಕನ್ನಡ ಸಾಹಿತ್ಯದಲ್ಲಿ ಸಾಂಸ್ಕೃತಿಕ ಅಸ್ಮಿತೆ” ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಸ್ಮಿತೆ ಎನ್ನುವುದು ಕೇವಲ ಗುರುತಿನ ಸಂಕೇತವಲ್ಲ, ಅದು ನಮ್ಮ ಬದುಕಿನ ಅವಿಭಾಜ್ಯ ಭಾಗವಾಗಿದೆ. ಕನ್ನಡ ಭಾಷೆಯ ವೈಶಿಷ್ಟ್ಯವನ್ನು ಅದರ ಸಹಿಷ್ಣುತೆ, ವಿಶಾಲ ಮನೋಭಾವ ಮತ್ತು ವಿವಿಧ ಸಂಸ್ಕೃತಿಗಳನ್ನು ಒಳಗೊಳ್ಳುವ ಗುಣಗಳಲ್ಲಿ ಗುರುತಿಸಬಹುದು. ಕನ್ನಡದ ನೈಜ ಸೊಗಡು ಮತ್ತು ಜೀವಂತಿಕೆಯನ್ನು ಗ್ರಾಮೀಣ ಪ್ರದೇಶಗಳಲ್ಲಿ ಕಾಣಬಹುದು. ಭಾಷೆಗೂ ಧರ್ಮಕ್ಕೂ ಯಾವುದೇ ಸಂಬಂಧ ಕಲ್ಪಿಸಬಾರದು. ಭಾಷೆಯನ್ನು ಕೋಮುವಾದದ ದೃಷ್ಟಿಯಿಂದ ಬಳಸದೇ, ಜನರನ್ನು ಬೆಸೆಯುವ ಹಾಗೂ ಸಾಂಸ್ಕೃತಿಕ ಸಾಮರಸ್ಯ ಬೆಳೆಸುವ ಮಾಧ್ಯಮವಾಗಿ ನೋಡಬೇಕು ಎಂದರು.

ಶ್ರೀಗುರು ತಿಪ್ಪೇರುದ್ರಸ್ವಾಮಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಬಿ.ಬಿ.ರೇವಣನಾಯ್ಕ ಮಾತನಾಡಿ, ಕನ್ನಡ ಸಾಹಿತ್ಯವು ಕೇವಲ ಭಾಷೆ ಮತ್ತು ಅಭಿವ್ಯಕ್ತಿಗೆ ಸೀಮಿತವಾಗದೆ, ವೈಚಾರಿಕ, ಸಾಂಸ್ಕೃತಿಕ, ಸಾಮಾಜಿಕ ಹಾಗೂ ಮಾನವೀಯ ಮೌಲ್ಯಗಳ ಚಿಂತನೆ ಗಳನ್ನು ಒಳಗೊಂಡಿದೆ. ಸಮಾಜದ ಸುಧಾರಣೆ, ಧಾರ್ಮಿಕ ಸಾಮರಸ್ಯ ಹಾಗೂ ಸಮ ಸಮಾಜ ನಿರ್ಮಾಣಕ್ಕೆ ಕನ್ನಡ ಸಾಹಿತ್ಯ ಮಹತ್ವದ ಕೊಡುಗೆ ನೀಡಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ| ಶಕುಂತಲಾ ಎನ್. ಮಾತನಾಡಿ, ಕನ್ನಡ ಭಾಷೆಯ ಬೆಳವಣಿಗೆ, ಸಾಹಿತ್ಯದ ಸಾಮಾಜಿಕ ಹೊಣೆಗಾರಿಕೆ ಹಾಗೂ ಸಾಂಸ್ಕೃತಿಕ ಅಸ್ಮಿತೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ನಾಡು ನುಡಿಯ ಬಗೆಗಿನ ಅಭಿಮಾನ ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದರು.

ಸಾಹಿತಿ ಎಚ್.ಕೆ. ಕೊಟ್ರಪ್ಪ, ಕಾಳಿದಾಸ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಬಿ. ರಾಜಶೇಖರ್, ಯಶಸ್ವಿನಿ ವಿದ್ಯಾಸಂಸ್ಥೆಯ ಅಧ್ಯಕ್ಷ ವೈ. ಕೃಷ್ಣಮೂರ್ತಿ, ಎಚ್.ನಿಜಗುಣ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಎಂ. ಮಂಜುನಾಥಯ್ಯ, ಕನ್ನಡ ಜಾಗೃತಿಯ ಸದಸ್ಯರಾದ ಡಾ. ಮಂಜಣ್ಣ ಮಲ್ಲಯ್ಯ, ಎ.ರಿಯಾಜ್ ಅಹ್ಮದ್, ಕೆ.ಎಸ್. ವೀರೇಶ್ ಪ್ರಸಾದ್, ಎಲ್.ಬಿ. ಮಧುಕುಮಾರ್, ಎಸ್. ಸೌಮ್ಯ ಹಾಗೂ ರುದ್ರಾಕ್ಷಿಬಾಯಿ ಉಪಸ್ಥಿತರಿದ್ದರು.

ಜನಪದ ಗಾಯಕ ಪರಮೇಶ್ವರಪ್ಪ ಕತ್ತಿಗೆ ಪ್ರಾರ್ಥಿಸಿದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಗೌರಮ್ಮ ಎಸ್.ಎಂ. ಸ್ವಾಗತಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಮಮತಾ ಸಾವಕಾರ್ ಕಾರ್ಯಕ್ರಮ ನಿರ್ವಹಿಸಿದರು. ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಯಶೋಧ .ಆರ್ ವಂದಿಸಿದರು.

- - -

(ಕೋಟ್‌)

ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಮೀಸಲಾತಿ ಕಲ್ಪಿಸಬೇಕೆಂಬ ಬೇಡಿಕೆಯೂ ಇದೆ. ಕನ್ನಡ ಭಾಷೆ, ಕನ್ನಡ ಮಾಧ್ಯಮದ ಶಿಕ್ಷಣ ಹಾಗೂ ಕನ್ನಡಿಗರ ಹಿತಾಸಕ್ತಿಗಳ ರಕ್ಷಣೆಗೆ ಅಗತ್ಯವಾದ ಕ್ರಮಗಳಿಗೆ ಆದ್ಯತೆ ನೀಡಬೇಕಿದೆ.

- ಡಾ.ಎ.ಬಿ. ರಾಮಚಂದ್ರಪ್ಪ, ಸದಸ್ಯ, ಕ.ಅ.ಪ್ರಾ.

- - -

-16ಎಚ್.ಆರ್.ಆರ್.2:

ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಡಾ. ಎ.ಬಿ. ರಾಮಚಂದ್ರಪ್ಪ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿ
ರೈತನ ಬೇಡಿಕೆ ಈಡೇರುವವರೆಗೂ ಮಠಾಧೀಶರ ಬೆಂಬಲ ಇರುತ್ತದೆ-ಸ್ವಾಮೀಜಿ