ಕನ್ನಡಪ್ರಭ ವಾರ್ತೆ ಕಲಬುರಗಿವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಲಬುರಗಿ ಪ್ರಾದೇಶಿಕ ಕೇಂದ್ರದ ಮಾಜಿ ನಿರ್ದೇಶಕ ಪ್ರೊ. ಬಸವರಾಜ ಗದಗೆ ಅವರು ಪ್ರತಿಷ್ಠಿತ ಇನ್‍ಸ್ಟಿಟ್ಯೂಷನ್ ಆಫ್ ಎಲೆಕ್ಟ್ರಾನಿಕ್ಸ್ ಆ್ಯಂಡ್ ಟೆಲಿಕಮ್ಯುನಿಕೇಷನ್ ಇಂಜಿನಿಯರ್ಸ್ (ಐಇಟಿಇ)ನ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಎಲೆಕ್ಟ್ರಾನಿಕ್ಸ್, ಟೆಲಿಕಮ್ಯುನಿಕೇಷನ್ ಹಾಗೂ ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಭಾರತದ ಪ್ರಮುಖ ವೃತ್ತಿಪರ ಸಂಸ್ಥೆಯಾಗಿರುವ ಐಇಟಿಇಯ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಆಡಳಿತ ಮಂಡಳಿಗೆ ಆಯ್ಕೆಯಾದ ಸದಸ್ಯರ ಪಟ್ಟಿಯನ್ನು ಐಇಟಿಇ ಅಧ್ಯಕ್ಷ ಡಾ.ಡಿ.ಸಿ.ಪಾಂಡೆ ಸೆ.26ರಂದು ಕೋಲ್ಕತ್ತಾದಲ್ಲಿ ನಡೆದ ಸಂಸ್ಥೆಯ 69ನೇ ವಾರ್ಷಿಕ ಸಮಾವೇಶದಲ್ಲಿ ಪ್ರಕಟಿಸಿದರು.ಇದೇ ವೇಳೆ, ವಿಟಿಯು ಕಲಬುರಗಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಡಾ. ಶುಭಾಂಗಿ ಡಿ.ಸಿ. ಅವರು ಐಇಟಿಇಯ ಆಡಳಿತ ಮಂಡಳಿಗೆ ಆಯ್ಕೆಯಾಗಿರುವುದು ಮತ್ತೊಂದು ಗಮನಾರ್ಹ ಸಾಧನೆಯಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದಿಂದ ಐಇಟಿಇ ಆಡಳಿತ ಮಂಡಳಿಗೆ ಆಯ್ಕೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಡಾ. ಶುಭಾಂಗಿ ಪಾತ್ರರಾಗಿದ್ದಾರೆ.ಪತೊ.ಬಸವರಾಜ ಗದಗೆ ಅವರು ವಿಟಿಯು ಕಲಬುರಗಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರಾಗಿ ಸುಮಾರು ಹತ್ತು ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅವರು ಕಲಬುರಗಿಯ ವಿಟಿಯು ಪಿಜಿ ಕೇಂದ್ರದ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಅನಿಲಕುಮಾರ ಬಿಡವೆ, ನಿರ್ದೇಶಕ ವಿ.ಡಿ. ಮೈತ್ರಿ, ಕುಲಸಚಿವೆ ಡಾ. ಲಕ್ಷ್ಮೀ ಪಾಟೀಲ್ ಮಕಾ, ಮೌಲ್ಯಮಾಪನ ಕುಲಸಚಿವ ಡಾ. ಎಸ್. ಎಚ್. ಹೊನ್ನಳ್ಳಿ, ಡೀನ್ ಡಾ. ಶಿವಕುಮಾರ್ ಜವಳಿಗಿ ಹಾಗೂ ಸಂಶೋಧನಾ ವಿಭಾಗದ ಡೀನ್ ಡಾ. ಸುಜಾತಾ ಮಲ್ಲಾಪುರ ಸೇರಿದಂತೆ ಹಲವರು ಪ್ರೊ. ಗದಗೆ ಹಾಗೂ ಡಾ. ಶುಭಾಂಗಿ ಅವರನ್ನು ಅಭಿನಂದಿಸಿದ್ದಾರೆ.