ಮಕ್ಕಳ ದೌರ್ಜನ್ಯ ಪ್ರಕರಣ ಕಂಡುಬಂದರೆ ಎಫ್‌ಐಆರ್ ದಾಖಲಿಸಿ: ನ್ಯಾ. ರಾಜೇಶ್ ಎನ್.ಹೊಸಮನಿ

KannadaprabhaNewsNetwork |  
Published : Aug 26, 2025, 01:04 AM IST
ಮಕ್ಕಳ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಒಂದು ದಿನದ ಸಮಾಲೋಚನಾ ಸಭೆಯನ್ನು ಜಿ.ಪಂ.ಸಿಇಒ ಮಹಮ್ಮದ್ ಹಾರಿಸ್ ಸುಮೇರ್  ಉದ್ಘಾಟಿಸಿದರು.  | Kannada Prabha

ಸಾರಾಂಶ

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ವಿವಿಧ ಇಲಾಖೆಗಳ ಪರಸ್ಪರ ಸಹಕಾರ ಮತ್ತು ಸಹಯೋಗದೊಂದಿಗೆ ಕಾರ್ಯನಿರ್ವಹಿಸಬೇಕಿದೆ.

ಸಮಾಲೋಚನಾ ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ

ಕನ್ನಡಪ್ರಭ ವಾರ್ತೆ ಬಳ್ಳಾರಿ

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ವಿವಿಧ ಇಲಾಖೆಗಳ ಪರಸ್ಪರ ಸಹಕಾರ ಮತ್ತು ಸಹಯೋಗದೊಂದಿಗೆ ಕಾರ್ಯನಿರ್ವಹಿಸಬೇಕಿದೆ ಎಂದು ಜಿಪಂ ಸಿಇಒ ಮಹಮ್ಮದ್ ಹಾರಿಸ್ ಸುಮೇರ್ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿಯ ನಜೀರ್ ಸಾಬ್ ಸಭಾಂಗಣದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವಾಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಳ್ಳಾರಿ ಹಾಗೂ ಎನ್‍ಪೋಲ್ಡ್ ಪ್ರೋಅಕ್ಟಿವ್ ಹೆಲ್ತ್ ಟ್ರಸ್ಟ್, ಬೆಂಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು, ವಿಶೇಷ ಮಕ್ಕಳ ಪೊಲೀಸ್ ಘಟಕ, ಸರ್ಕಾರಿ ಅಭಿಯೋಜಕರು, ವೈದ್ಯಾಧಿಕಾರಿಗಳು, ಬಾಲಮಂದಿರದ ಅಧೀಕ್ಷಕರು, ಕಾನೂನು ಪರಿವೀಕ್ಷಾಣಾಧಿಕಾರಿಗಳು, ಬೆಂಬಲ ವ್ಯಕ್ತಿಗಳು ಮತ್ತು ಸ್ವಯಂಸೇವಾ ಸಂಸ್ಥೆಯ ಮುಖ್ಯಸ್ಥರಿಗೆ ಹಮ್ಮಿಕೊಂಡಿದ್ದ ಒಂದು ದಿನದ ಸಮಾಲೋಚನಾ ಸಭೆ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ರಕ್ಷಣೆಗೆ ಹಲವಾರು ಇಲಾಖೆಗಳು ಸಹಭಾಗಿದಾರರಾಗಿ ಕಾರ್ಯನಿರ್ವಹಿಸುತ್ತಿವೆ. ಗ್ರಾಪಂ ಮಟ್ಟದಲ್ಲಿ ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿಗಳು ರಚಿಸಿದ್ದು, ಅವುಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದರು.

ಸ್ಥಳೀಯ ಪಂಚಾಯಿತಿಯ ಸಂಬಂಧಿತ ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡುವ ಮೂಲಕ ಮಕ್ಕಳ ಹಾಜರಾತಿ ಮತ್ತು ಸುರಕ್ಷತೆ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿಶೇಷ ಮಕ್ಕಳ ಪೊಲೀಸ್ ಘಟಕ, ಶಿಕ್ಷಣ ಇಲಾಖೆ ಜೊತೆಗೂಡಿ ಶಾಲೆಯಲ್ಲಿರುವ ಸೌಲಭ್ಯಗಳನ್ನು ಬಳಸಿಕೊಂಡು ಆನ್‍ಲೈನ್ ಮೂಲಕ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನಿ ಮಾತನಾಡಿ, ಮಕ್ಕಳ ಮೇಲೆ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣಗಳು ಕಂಡುಬಂದ ಕೂಡಲೇ ಅಧಿಕಾರಿಗಳು ಎಫ್‌ಐಆರ್ ದಾಖಲಿಸಬೇಕು. ಪೋಕ್ಸೋ ಕಾಯ್ದೆಯು ಒಂದು ವಿಶಿಷ್ಟ ಕಾಯ್ದೆಯಾಗಿದ್ದು, ಈ ಕಾಯ್ದೆಯಡಿ ಅಪರಾಧಿಗಳಿಗೆ 3 ವರ್ಷದಿಂದ ಜೀವಾವಧಿ ಶಿಕ್ಷೆಗೆ ಅವಕಾಶವಿದೆ. ಪೋಕ್ಸೋ ಕಾಯ್ದೆಯ ಕುರಿತು ಜನರಿಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರಾದೇವಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಎನ್‍ಪೋಲ್ಡ್ ಸಂಸ್ಥೆಯ ಮುಖ್ಯಸ್ಥರಾದ ಖುಷಿ ಕುಶಲಪ್ಪ ಮತ್ತು ಪೊಲೀಸ್ ತರಬೇತಿ ಸಂಪನ್ಮೂಲ ವ್ಯಕ್ತಿ ರೋಹಿತ್‍ ಕಾರ್ಯಕ್ರಮದ ಧ್ಯೇಯೋದ್ದೇಶ ತಿಳಿಸಿಕೊಟ್ಟರು. ಮಹಿಳಾ ಮತ್ತು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್ ಎಂ. ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ ನಿರೂಪಿಸಿದರು. ಈಶ್ವರ್ ರಾವ್ ಸ್ವಾಗತಿಸಿದರು. ಚನ್ನಬಸಪ್ಪ ವಂದಿಸಿದರು.

ಈ ಸಂದರ್ಭ ಉಪ ಪೊಲೀಸ್ ವರಿಷ್ಠಾಧಿಕಾರಿ ನವೀನ್‍ಕುಮಾರ್, ಉಪ ಪೊಲೀಸ್ ಅಧೀಕ್ಷಕ ಚಂದ್ರಕಾಂತ್ ನಂದಾರೆಡ್ಡಿ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ವಿಜಯಲಕ್ಷ್ಮೀ ಮೈದೂರು, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಯಲ್ಲಾ ರಮೇಶ್‍ಬಾಬು ಸೇರಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿ ಸಿಬ್ಬಂದಿ, ಎನ್‍ಫೋಲ್ಡ್ ಸಂಸ್ಥೆಯ ಸಿಬ್ಬಂದಿ, ಸ್ವಯಂಸೇವಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 80ಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

PREV

Recommended Stories

ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ