ಹುಬ್ಬಳ್ಳಿ: ಬಿಜೆಪಿಯವರು ಅಧಿಕಾರದಲ್ಲಿದ್ದ ನಾಲ್ಕು ವರ್ಷದ ಅವಧಿಯಲ್ಲಿ ಒಂದೇ ಒಂದು ಮನೆ ಕೊಟ್ಟಿದ್ದರೆ ನಾನು ರಾಜಕೀಯ ನಿವೃತ್ತಿ ನೀಡುತ್ತೇನೆ. ಈ ಕುರಿತು ಚರ್ಚಿಸಲು ನಾನು ಸಿದ್ಧ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸವಾಲು ಹಾಕಿದರು.
ಅವರು ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರಿಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು ಎಂಬುದಿಲ್ಲ. ಬದಲಿಗೆ ಹಿಂದು- ಮುಸ್ಲಿಂ ಎಂದು ಹೇಳಿ ಅವರು ಮತಗಳನ್ನು ಪಡೆದರೆ, ನಾವು ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಮತಗಳನ್ನು ಕೇಳುತ್ತೇವೆ ಎಂದರು.5-6 ದಿನ ವಿಳಂಬ
ಜಾತಿಗಣತಿ ವರದಿ ಬಗ್ಗೆ ಯಾವುದೇ ರೀತಿ ಚರ್ಚೆಯಾಗಿಲ್ಲ. ಈ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳು ಕ್ಯಾಬಿನೆಟ್ ಸಭೆ ಕರೆಯುತ್ತಾರೆ. ವರದಿಯ ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಲು ತಿಳಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಎಚ್‌ಡಿಕೆ ಒಂದೆಡೆ ಇರಲ್ಲಬಿಜೆಪಿಯ ಜನಾಕ್ರೋಶ ಯಾತ್ರೆ ಹಾಗೂ ಜೆಡಿಎಸ್‌ನ ಸಾಕಪ್ಪ ಸಾಕು ಯಾತ್ರೆ ಮಾಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅವರ ಪಕ್ಷದ ತೀರ್ಮಾನದ ಬಗ್ಗೆ ನಾನು ಮಾತನಾಡುವುದಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ನಡುವೆ ಒಡಕು ಮೂಡಿದೆಯೇ ಎಂದು ಪ್ರಶ್ನಿಸಿದಾಗ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಯಾವತ್ತೂ ಒಂದೇ ಕಡೆ ಇರುವುದಿಲ್ಲ ಎಂದರು.