ಸಿ.ಎಸ್‌.ನಾಡಗೌಡರು ಸಚಿವರಾದ್ರೆ ರಾಜ್ಯಕ್ಕೆ ಸಿಗಲಿದೆ ಉತ್ತಮ ನಾಯಕತ್ವ

KannadaprabhaNewsNetwork |  
Published : Jul 06, 2026, 03:00 AM IST
ತಾಳಿಕೋಟೆ, 1 | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ವಿಜಯಪುರ ಜಿಲ್ಲೆಯ ಹಿರಿಯ ಹಾಗೂ ಸರಳ-ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ಶಾಸಕ ಸಿ.ಎಸ್. ನಾಡಗೌಡ (ಅಪ್ಪಾಜಿ) ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಿದರೆ ವಿಜಯಪುರ ಜಿಲ್ಲೆ ಮಾತ್ರವಲ್ಲ, ಇಡೀ ಕರ್ನಾಟಕದ ಅಭಿವೃದ್ಧಿಗೆ ಅವರ ಅನುಭವ ಮತ್ತು ಸೇವೆ ಮತ್ತಷ್ಟು ಪರಿಣಾಮಕಾರಿಯಾಗಲಿದೆ ಎಂದು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ರಂಭಾಪುರಿ ಮಠದ ಜಗದ್ಗುರು ಶ್ರೀ ವೀರಸೋಮೇಶ್ವರ ಶಿವಾಚಾರ್ಯರು ಹೇಳಿದರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ವಿಜಯಪುರ ಜಿಲ್ಲೆಯ ಹಿರಿಯ ಹಾಗೂ ಸರಳ-ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ಶಾಸಕ ಸಿ.ಎಸ್. ನಾಡಗೌಡ (ಅಪ್ಪಾಜಿ) ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಿದರೆ ವಿಜಯಪುರ ಜಿಲ್ಲೆ ಮಾತ್ರವಲ್ಲ, ಇಡೀ ಕರ್ನಾಟಕದ ಅಭಿವೃದ್ಧಿಗೆ ಅವರ ಅನುಭವ ಮತ್ತು ಸೇವೆ ಮತ್ತಷ್ಟು ಪರಿಣಾಮಕಾರಿಯಾಗಲಿದೆ ಎಂದು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ರಂಭಾಪುರಿ ಮಠದ ಜಗದ್ಗುರು ಶ್ರೀ ವೀರಸೋಮೇಶ್ವರ ಶಿವಾಚಾರ್ಯರು ಹೇಳಿದರು.

ದೇವರಹಿಪ್ಪರಗಿ ಮತಕ್ಷೇತ್ರದ ಯಾಳವಾರ ಗ್ರಾಮದ ಸೋಮೇಶ್ವರ ಶಿಕ್ಷಣ ಸಂಸ್ಥೆಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಶರಣ ತತ್ವಗಳನ್ನು ತಮ್ಮ ಬದುಕಿನಲ್ಲಿ ಮೈಗೂಡಿಸಿಕೊಂಡಿರುವ ಅಪ್ಪಾಜಿ ಅವರು ಶುದ್ಧ ಹಸ್ತದ, ಜನಪರ ರಾಜಕಾರಣಿಯಾಗಿ ಹೆಸರುವಾಸಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಿ.ಎಸ್. ನಾಡಗೌಡರು ಪ್ರತಿಷ್ಠಿತ ಬಲದಿನ್ನಿ ರಾಜಮನೆತನದ ಕುಟುಂಬದವರಾಗಿದ್ದು, ಸಾರ್ವಜನಿಕ ಜೀವನದಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಇಂತಹ ಹಿರಿಯ ಹಾಗೂ ಅನುಭವಿ ನಾಯಕರಿಗೆ ಸಚಿವ ಸ್ಥಾನ ನೀಡಿದರೆ ಸಕಲ ಜನಾಂಗಕ್ಕೂ ನ್ಯಾಯ ದೊರೆಯುವ ರೀತಿಯ ಆಡಳಿತ ನೀಡಲು ಸಾಧ್ಯವಾಗುತ್ತದೆ ಎಂದು ಶ್ರೀಗಳು ಅಭಿಪ್ರಾಯಪಟ್ಟರು.

ಈ ಸಮಯದಲ್ಲಿ ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ, ವಿವಿಧ ಮಠಗಳ ಮಠಾಧೀಶರು, ಮಾಜಿ ಶಾಸಕರು, ರಾಜಕೀಯ ಮುಖಂಡರು, ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.

ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯ:

ಅಪ್ಪಾಜಿ ನಾಡಗೌಡ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಅವರು ಕೈಗೊಳ್ಳುವ ಜನಸ್ನೇಹಿ ಕಾರ್ಯಕ್ರಮಗಳ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಬಲಿಷ್ಠವಾಗಲು ನೆರವಾಗುತ್ತದೆ. ಆದ್ದರಿಂದ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ನಾನು ಒತ್ತಾಯಿಸುತ್ತೇನೆ ಎಂದು ಜಗದ್ಗುರುಗಳು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಳೆಗೆ ರೈತ ಸಂತಸ, ನಗರದಲ್ಲಿ ಅವಾಂತರ
ಮತದಾರರ ಪಟ್ಟಿವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ