ಸಿದ್ದರಾಮಯ್ಯ ಮೀಸಲು ಕೊಡದಿದ್ರೆ ಮುಂದೆ ಇನ್ನೊಬ್ಬ ಸಿಎಂರಿಂದ ಪಡಿತೀವಿ : ಕೂಡಲ ಶ್ರೀ ಎಚ್ಚರಿಕೆ

KannadaprabhaNewsNetwork |  
Published : Dec 13, 2024, 12:48 AM ISTUpdated : Dec 13, 2024, 07:46 AM IST
12ಡಿಡಬ್ಲೂಡಿ1ಪಂಚಮಸಾಲಿ ಮೀಸಲಾತಿಗೋಸ್ಕರ ಗುರುವಾರ ಧಾರವಾಡದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.  | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಂಚಮಸಾಲಿ ಸಮಾಜಕ್ಕೆ ‘2ಎ’ ಮೀಸಲಾತಿ ಕೊಡದೇ ಇದ್ದರೆ ಏನಂತೆ, ಮುಂದೆ ಇನ್ನೊಬ್ಬ ಮುಖ್ಯಮಂತ್ರಿ ಬರುತ್ತಾರೆ. ಅವರಿಂದಲೇ ನಾವು ಮೀಸಲಾತಿ ಪಡೆಯುತ್ತೇವೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.

 ಧಾರವಾಡ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಂಚಮಸಾಲಿ ಸಮಾಜಕ್ಕೆ ‘2ಎ’ ಮೀಸಲಾತಿ ಕೊಡದೇ ಇದ್ದರೆ ಏನಂತೆ, ಮುಂದೆ ಇನ್ನೊಬ್ಬ ಮುಖ್ಯಮಂತ್ರಿ ಬರುತ್ತಾರೆ. ಅವರಿಂದಲೇ ನಾವು ಮೀಸಲಾತಿ ಪಡೆಯುತ್ತೇವೆ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಷಯವಾಗಿ ಸುವರ್ಣಸೌಧದ ಎದುರು ನಡೆದ ಪ್ರತಿಭಟನೆ ವೇಳೆ ನಡೆದ ಲಾಠಿಚಾರ್ಜ್‌ ವಿರೋಧಿಸಿ ಗುರುವಾರ ಇಲ್ಲಿಯ ಜ್ಯೂಬಿಲಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪಂಚಮಸಾಲಿ ಹೋರಾಟ ಅಸಂವಿಧಾನಿಕ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸ್ವಾಮೀಜಿ, ನಮ್ಮ ಬೇಡಿಕೆ ಸಂವಿಧಾನ ಬದ್ಧವಾಗಿದೆ. ಆದರೆ, ಮುಖ್ಯಮಂತ್ರಿಯವರು ನಮ್ಮ ಬೇಡಿಕೆಯೇ ಸಂವಿಧಾನ ವಿರೋಧಿ ಎಂದಿದ್ದು ಖಂಡನೀಯ. ಡಾ.ಬಿ.ಆರ್‌. ಅಂಬೇಡ್ಕರ್‌ ಅವರು ಬರೀ ಇವರ ಸ್ವತ್ತಲ್ಲ. ಅಂಬೇಡ್ಕರ್‌ ಹಾಗೂ ಅವರ ಸಂವಿಧಾನ ನಮಗೂ ಅನ್ವಯ ಆಗುತ್ತದೆ. ಹೋರಾಟದಿಂದಲೇ ನಮ್ಮ ಸಮಾಜ 2ಎ ಮೀಸಲಾತಿ ಪಡೆದುಕೊಳ್ಳಲು ಪ್ರಯತ್ನಿಸುತ್ತದೆ ಎಂದರು.

ಸಿದ್ದರಾಮಯ್ಯನವರು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡದೇ ಇದ್ದರೆ ಏನಂತೆ, ಮುಂದೆ ಇನ್ನೊಬ್ಬ ಮುಖ್ಯಮಂತ್ರಿ ಬರುತ್ತಾರೆ. ಅವರಿಂದಲೇ ನಾವು ಮೀಸಲಾತಿ ಪಡೆಯುತ್ತೇವೆ ಎಂದು ಮಾರ್ಮಿಕವಾಗಿ ನುಡಿದರು.

ಮುಖ್ಯಮಂತ್ರಿಯವರು ಸುಳ್ಳು ಹೇಳಿ ಪಂಚಮಸಾಲಿ ಮೀಸಲಾತಿ ಹೋರಾಟದ ಹಾದಿ ತಪ್ಪಿಸುತ್ತಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡದಿದ್ದರೆ ಹೇಗೆ ಪಡೆಯಬೇಕು ಎಂಬುವುದು ನಮಗೂ ಗೊತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ, ಲಿಂಗಾಯತ ಪಂಚಮಸಾಲಿ ಸಮಾಜದ ಶಾಸಕರು, ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಮೀಸಲಾತಿ ಹೋರಾಟದಲ್ಲಿ ಭಾಗವಹಿಸುವಂತೆ ಅವರು ಕರೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಿಲ್ಲಿಯಲ್ಲಿ ಡಿಕೆಶಿ ರಾಜ್ಯ ನೀರಾವರಿ ಸಭೆ
ಗ್ಯಾಸ್ ಇಲ್ಲದೇ ಬೆಳಗಾವಿಯ 60 + ಕೈಗಾರಿಕೆ ಬಂದ್‌ ಹಂತಕ್ಕೆ