ಮಕ್ಕಳು ಇಷ್ಟಪಟ್ಟು ಓದಿದರೆ ಒಳ್ಳೆಯ ಭವಿಷ್ಯ: ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್

KannadaprabhaNewsNetwork |  
Published : Jun 02, 2025, 12:56 AM IST
ಇಷ್ಟಪಟ್ಟು ಓದಿದರೆ ಒಳ್ಳೆಯ ಭವಿಷ್ಯ: ಸಿ.ಡಿ. ಗಂಗಾಧರ್ | Kannada Prabha

ಸಾರಾಂಶ

ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಭೆಗಳು ಜಗತ್ತಿನ ಎಲ್ಲಾ ಕಡೆ ಹಂಚಿಹೋಗಿವೆ. ಜಗತ್ತಿನ ಎಲ್ಲಾ ದೇಶಗಳಲ್ಲೂ ಭಾರತೀಯರು ಸಾಧನೆ ಸಾಧಿಸುತ್ತಿದ್ದಾರೆ. ಪ್ರಪಂಚದ ವಿವಿಧ ದೇಶಗಳಲ್ಲಿ ಭಾರತೀಯರು ನೊಬೆಲ್ ಅವಾರ್ಡ್ ತೆಗೆದುಕೊಂಡಿದ್ದಾರೆ. ಆ ರೀತಿ ದೇಶದ ಕೀರ್ತಿ ಪತಾಕೆ ಹಾರಿಸುವ ಮಕ್ಕಳು ನೀವಾಗಿ.

ಕನ್ನಡಪ್ರಭ ವಾರ್ತೆ ಮಂಡ್ಯ

ವಿದ್ಯಾರ್ಥಿಗಳು ಇಷ್ಟಪಟ್ಟು ಓದಿದರೆ ಒಳ್ಳೆಯ ಭವಿಷ್ಯವಿದೆ ಎಂದು ಜಿಲ್ಲಾ ಕಾಂಗ್ರೆಸ್ ಹಾಗೂ ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಹೇಳಿದರು.

ನಗರದ ಲಕ್ಷ್ಮಿಜನಾರ್ಧನ ಪ್ರೌಢಶಾಲೆ ಸಭಾಂಗಣದಲ್ಲಿ ಮಂಡ್ಯ ಜಿಲ್ಲಾ ಎನ್.ಚಲುವರಾಯಸ್ವಾಮಿ ಅಭಿಮಾನಿ ಬಳಗದಿಂದ ಏರ್ಪಡಿಸಿದ್ದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬದ ಪ್ರಯುಕ್ತ 2024-25ನೇ ಸಾಲಿನಲ್ಲಿ ಮಂಡ್ಯ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ನೂರು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಭೆಗಳು ಜಗತ್ತಿನ ಎಲ್ಲಾ ಕಡೆ ಹಂಚಿಹೋಗಿವೆ. ಜಗತ್ತಿನ ಎಲ್ಲಾ ದೇಶಗಳಲ್ಲೂ ಭಾರತೀಯರು ಸಾಧನೆ ಸಾಧಿಸುತ್ತಿದ್ದಾರೆ. ಪ್ರಪಂಚದ ವಿವಿಧ ದೇಶಗಳಲ್ಲಿ ಭಾರತೀಯರು ನೊಬೆಲ್ ಅವಾರ್ಡ್ ತೆಗೆದುಕೊಂಡಿದ್ದಾರೆ. ಆ ರೀತಿ ದೇಶದ ಕೀರ್ತಿ ಪತಾಕೆ ಹಾರಿಸುವ ಮಕ್ಕಳು ನೀವಾಗಿ ಎಂದ ಅವರು, ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಏಕಾಗ್ರತೆ ರೂಢಿಸಿಕೊಂಡು ಫಲಿತಾಂಶ ತೆಗೆದುಕೊಳ್ಳಿ ಎಂದು ಸಲಹೆ ನೀಡಿದರು.

ಸಚಿವ ಚಲುವರಾಯಸ್ವಾಮಿ ಹೆಸರಿನಲ್ಲಿ ಅವರ ಹುಟ್ಟು ಹಬ್ಬದ ಅಂಗವಾಗಿ ನೂರು ಮಂದಿ ವಿದ್ಯಾರ್ಥಿಗಳಿಗೆ ಅಭಿನಂದಿ ಸುತ್ತಿದ್ದು, ನಾಡಿಗೆ ಕೀರ್ತಿ ತರುವ ಮಕ್ಕಳಾಗಿ ಎಂದರು.

ನಿವೃತ್ತ ಪ್ರಾಂಶುಪಾಲ ಎಸ್‌.ಬಿ.ಶಂಕರಗೌಡ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿ, ಮಕ್ಕಳು ಸಾಧಕರಾಗಬೇಕಾದರೆ ಬಡತನದ ಅನುಭವವನ್ನು ಪೋಷಕರು ಅವರಿಗೆ ತಿಳಿಸಿ. ಬಡತನ ಸಾಧಕರನ್ನಾಗಿ ಮಾಡುತ್ತದೆ. ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು ಎಂದರು.

ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮದ್ದೂರು ಮಹಿಳಾ ಸರ್ಕಾರಿ ಕಾಲೇಜು ಪ್ರಾಂಶುಪಾಲ

ಕೆ.ಬಿ.ನಾರಾಯಣ, ಮಮತೆಯ ಮಡಿಲು ಅನ್ನದಾಸೋಹ ಕೇಂದ್ರದ ಮಂಗಲ ಎಂ.ಯೋಗೀಶ್, ಸಾವಯವ ಕೃಷಿಕ ಕೆ.ಜಿ ಅನಂತರಾವ್, ಚಿಕ್ಕ ಕೊತ್ತಗೆರೆ ಸುಕನ್ಯಾದೇವಿ ಅವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸುಂಡಹಳ್ಳಿ ಮಂಜುನಾಥ್, ವಿಜಯಲಕ್ಷ್ಮಿ ರಘುನಂದನ್, ಅಂಜನಾ ಶ್ರೀಕಾಂತ್, ಸಿ.ಎಂ.ದ್ಯಾವಪ್ಪ, ಕಿರಣ್ ಕುಮಾರ್, ಸಾತನೂರು ಕೃಷ್ಣ, ಚಂದಗಾಲು ವಿಜಯಕುಮಾರ್, ಗುರುರಾಜ್, ಎಚ್.ವಿ.ನಾಗರಾಜು ಸೇರಿದಂತೆ ಇತರರು ಹಾಜರಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ