ಕಮಲನಗರ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು 5 ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಅದರಂತೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಪಕ್ಷ ದೇಶದ ಜನತೆಗೆ ನೀಡಿರುವ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಲಾಗುತ್ತದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆಯವರ ತಾಯಿ ಡಾ.ಗೀತಾ ಖಂಡ್ರೆ ಭರವಸೆ ನೀಡಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಾದ ಪ್ರತಿ ಕುಟುಂಬಕ್ಕೆ 1 ಲಕ್ಷ ರುಪಾಯಿ, ನಿರುದ್ಯೋಗಿಗಳಿಗೆ ಉದ್ಯೋಗ, ರೈತರ ಸಮಸ್ಯೆಗಳಿಗೆ ಸ್ವಾಮಿನಾಥನ್ ವರದಿ ಜಾರಿ ಮಾಡಲಾಗುವುದು. ಹೀಗಾಗಿ ಸಾಗರ ಖಂಡ್ರೆಗೆ ಮತ ನೀಡಿ ಪ್ರಚಂಡ ಬಹುಮತದೊಂದಿಗೆ ಗೆಲ್ಲಿಸಬೇಕೆಂದು ಮನವಿ ಮಾಡಿಕೊಂಡರು.
ಕಾಂಗ್ರೆಸ್ ಮುಖಂಡ ಪ್ರವೀಣ ಪಾಟೀಲ್, ಬಾಬುರಾವ ಪಾಟೀಲ್ ಹೊರಂಡಿ, ಶಾಂತಕುಮಾರ ಬಿರಾದಾರ, ಪ್ರವೀಣ ಕದಮ, ಮಹಾದೇವ ಪಾಟೀಲ್ ಹಾಗೂ ಅನೇಕ ಮಹಿಳೆಯರು, ಮಕ್ಕಳು ಇದ್ದರು.