ಭಕ್ತರು ದೇವರ ದರ್ಶನ, ಸೇವೆ ನಡೆಸಿದರೆ ಕ್ಷೇತ್ರಕ್ಕೆ ಶಕ್ತಿ ಬರುತ್ತದೆ: ಡಾ.ಹೆಗ್ಗಡೆ

KannadaprabhaNewsNetwork |  
Published : May 04, 2025, 01:33 AM IST
ಇಟಲ ಸೋಮನಾಥೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಭಕ್ತರು ದೇವರ ದರ್ಶನ, ಸೇವೆ ನಡೆಸಿದರೆ ಕ್ಷೇತ್ರಕ್ಕೆ ಶಕ್ತಿ ಬರುತ್ತದೆ - ಹೆಗ್ಗಡೆ  | Kannada Prabha

ಸಾರಾಂಶ

ದರೆಗುಡ್ಡೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಿನ್ನೆಲೆ ನಡೆದ ಧಾರ್ಮಿಕ ಸಭೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿದರು.

ಇಟಲ ಸೋಮನಾಥೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಭಕ್ತರು ತಮಗೆ ಸೇರಿದ ದೇವಾಲಯಗಳನ್ನು ಸುಸಜ್ಜಿತವಾಗಿಸಿಕೊಳ್ಳಬೇಕು. ದೇವರ ದರ್ಶನ, ಸೇವೆ ನಿರಂತರವಾಗಿದ್ದಾಗ ಕ್ಷೇತ್ರಕ್ಕೆ ಹೆಚ್ಚು ಶಕ್ತಿ ಬರುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ದರೆಗುಡ್ಡೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ದೇವರು ಎಲ್ಲೆಡೆಯೂ ಇದ್ದಾನೆ. ಆದರೆ ದೇವರ ಸಾನ್ನಿಧ್ಯವಿದ್ದರೆ ಅಲ್ಲಿ ಎಲ್ಲರೂ ಒಗ್ಗೂಡಲು ಸಾಧ್ಯ. ದೇವರ ಸಾನ್ನಿಧ್ಯವನ್ನು ಉಳಿಸುವ ಜವಾಬ್ದಾರಿ ಭಕ್ತರ ಮೇಲಿದೆ ಎಂದರು.ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಆಶೀರ್ವಚನ ನೀಡಿದರು.ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರದ್ಧಾ ಅಮಿತ್, ಉದ್ಯಮಿಗಳಾದ ಶಶಿಧರ ಶೆಟ್ಟಿ, ಕೆ. ಶ್ರೀಪತಿ ಭಟ್, ನ್ಯಾಯವಾದಿ ಎಂ.ಕೆ. ವಿಜಯಕುಮಾರ್, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್, ದರೆಗುಡ್ಡೆ ಗ್ರಾ.ಪಂ. ಅಧ್ಯಕ್ಷ ಅಶೋಕ ಶೆಟ್ಟಿ, ಉದ್ಯಮಿ ಗೋಪಾಲ ಶೆಟ್ಟಿ, ನವೀನ್ ಶೆಟ್ಟಿ ರೆಂಜಾಳ, ಬಸದಿಗಳ ಮೊಕ್ತೇಸರ ಆನಡ್ಕ ದಿನೇಶ್ ಕುಮಾರ್, ಪಣಪಿಲ ಅರಮನೆಯ ಭರತ್ ಕುಮಾರ್, ಆನುವಂಶೀಯ ಆಡಳಿತ ಮೊಕ್ತೇಸರ ಬಿ. ವಿಮಲ್‌ ಕುಮಾರ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ, ಕಾರ್ಯಾಧ್ಯಕ್ಷ ಸಂತೋಷ್ ಕೆ. ಪೂಜಾರಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಕೇಶ್ ಶೆಟ್ಟಿ, ಪೂರನ್‌ ವರ್ಮ, ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಕೋಟ್ಯಾನ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕ ಪ್ರಮೋದ ಆರಿಗ ಸ್ವಾಗತಿಸಿದರು. ನಿರಂಜನ ಎ. ಕಾರ್ಯಕ್ರಮ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ