ವೈದ್ಯರು ನಾರಾಯಣರಾದರೆ ನರ್ಸಿಂಗ್ ವಿದ್ಯಾರ್ಥಿಗಳು ಸಂಜೀವಿನಿ ಇದ್ದಂತೆ

KannadaprabhaNewsNetwork |  
Published : Jun 15, 2026, 02:15 AM IST
ಪೋಟೋ 14hsd2: ಪಟ್ಟಣದ ಲೇಪಾಕ್ಷಿ ಸ್ವಾಮಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ದೀಪ ಬೆಳಗಿಸುವ ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. | Kannada Prabha

ಸಾರಾಂಶ

ಹೊಸದುರ್ಗ ಪಟ್ಟಣದ ಲೇಪಾಕ್ಷಿ ಸ್ವಾಮಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಕನ್ನಡಪ್ರಭ ವಾರ್ತೆ ಹೊಸದುರ್ಗ

ವೈದ್ಯರು ನಾರಾಯಣರಾದರೆ ನರ್ಸಿಂಗ್ ವಿದ್ಯಾರ್ಥಿಗಳು ಸಂಜೀವಿನಿ ಇದ್ದ ಹಾಗೆ, ಡಾಕ್ಟರ್ ನೇಮಿಸಿದ ಮಾತ್ರೆ ಇಂಜಕ್ಷನ್ ಸರಿಯಾದ ರೀತಿಯಲ್ಲಿ ನಿರ್ವಹಿಸದೆ ಇದ್ದರೆ ರೋಗಿಗಳಿಗೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಬ್ರಹ್ಮವಿದ್ಯಾನಗರದ ಭಗೀರಥ ಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಹೇಳಿದರು.

ಪಟ್ಟಣದ ಲೇಪಾಕ್ಷಿ ಸ್ವಾಮಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ದೀಪ ಬೆಳಗಿಸುವ ಮತ್ತು 3ನೇ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ನರ್ಸಿಂಗ್ ವಿದ್ಯಾರ್ಥಿಗಳು ಮತ್ತು ನರ್ಸ್‌ಗಳು ರೋಗಿಗಳ ಚಿಕಿತ್ಸೆಯನ್ನು ನಿಷ್ಪಕ್ಷಪಾತವಾಗಿ ನಿಭಾಯಿಸಿದರೆ ಅದು ಡಾಕ್ಟರ್‌ಗೆ ತಂದು ಕೊಟ್ಟ ಗೌರವವಾಗುತ್ತದೆ. ಪ್ರಥಮ ವರ್ಷದ ವಿದ್ಯಾರ್ಥಿಗಳು ಶಿಕ್ಷಕರು ಹೇಳಿದ ಹಾಗೆ ಕೇಳಿ ಉತ್ತಮ ವಿದ್ಯಾಭ್ಯಾಸ ಮಾಡಿ ಮೂರನೇ ವರ್ಷದ ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ವಿದ್ಯಾಭ್ಯಾಸವನ್ನು ಮುಗಿಸಿರುವದರಿಂದ ನಿಮ್ಮ ಜೀವನದ ರೂಪರೇಷೆಗಳನ್ನ ತಯಾರು ಮಾಡಿಕೊಳ್ಳಿ ನಿಮಗೆ ಆ ದೇವರು ಒಳ್ಳೆಯದನ್ನು ಮಾಡಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಭಗೀರಥ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎ.ಮಲ್ಲಣ್ಣ, ಮುಖಂಡ ಬಾ ಮೈಲಾರಪ್ಪ, ಮದುರೆ ನಟರಾಜ್, ಸಿ ತಿಪ್ಪೇಶಪ್ಪ, ನರ್ಸಿಂಗ್ ಕಾಲೇಜಿನ ಪ್ರಿನ್ಸಿಪಾಲರು ಶಿಕ್ಷಕರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನ ಮೂಲಗಳಲಿಲ್ಲದ ರೈತರ ಬದುಕು ಬರಡು
ಮಣ್ಣಿನ ಸಂರಕ್ಷಣೆಯಿಂದ ಅನ್ನದ ಭದ್ರತೆ ಖಾತ್ರಿ