ಮಕ್ಕಳ ಕಲಿಕೆಗೆ ಒತ್ತು ನೀಡಿದರೆ ಫಲಿತಾಂಶ ವೃದ್ದಿ ಸಾಧ್ಯ: ಶಾಸಕ ಜಿ.ಎಚ್.ಶ್ರೀನಿವಾಸ್

KannadaprabhaNewsNetwork | Published : Jan 28, 2025 12:45 AM

ಸಾರಾಂಶ

ತರೀಕೆರೆ, ಶಾಲೆ ಮುಖ್ಯ ಶಿಕ್ಷಕರು ಮಕ್ಕಳ ಕಲಿಕೆಗೆ ಒತ್ತು ನೀಡಿದರೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದಲ್ಲಿ ಪಡೆಯಲು ಸಾಧ್ಯವಾಗುತ್ತದೆ ಎಂದು ಶಾಸಕಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಎಸ್.ಎಸ್.ಎಲ್.ಸಿ.ಪರೀಕ್ಷಾ ಫಲಿತಾಂಶ ವೃದ್ದಿಗೆ ಇ-ಕಲಿಕಾ ಸಾಮಗ್ರಿ ವಿತರಣೆ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ತರೀಕೆರೆ

ಶಾಲೆ ಮುಖ್ಯ ಶಿಕ್ಷಕರು ಮಕ್ಕಳ ಕಲಿಕೆಗೆ ಒತ್ತು ನೀಡಿದರೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದಲ್ಲಿ ಪಡೆಯಲು ಸಾಧ್ಯವಾಗುತ್ತದೆ ಎಂದು ಶಾಸಕಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.ಸೋಮವಾರ ಶಾಲಾ ಶಿಕ್ಷಣ ಇಲಾಖೆ, ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಟ್ಟಣದ ತಾಪಂ ಸಭಾಂಗಣದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ವೃದ್ದಿಗೆ ಇ-ಕಲಿಕಾ ಸಾಮಗ್ರಿ ವಿತರಣೆ ಕುರಿತು ತರೀಕೆರೆ-ಅಜ್ಜಂಪುರ ತಾಲೂಕುಗಳ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ, ವಸತಿ ಶಾಲೆ, ಖಾಸಗಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತರೀಕೆರೆ ಮತ್ತು ಅಜ್ಜಂಪುರ ತಾಲೂಕುಗಳಲ್ಲಿ ಈ ಬಾರಿ ಎಸ್.ಎಸ್.ಎಲ್.ಸಿ.ಪರೀಕ್ಷೆ ಫಲಿತಾಂಶದಲ್ಲಿ ಸುಧಾರಣೆ ತಂದು ಉತ್ತಮ ಫಲಿತಾಂಶ ಪಡೆಯಲು ಅನುಸರಿಸ ಬೇಕಾದ ಕ್ರಮಗಳನ್ನು ಮುಖ್ಯ ಶಿಕ್ಷಕರು ಕೈಗೊಳ್ಳಬೇಕು. ಶಿಕ್ಷಕರಲ್ಲಿ ಕಲಿಸುವ ಸಾಮರ್ಥ್ಯ ಚೆನ್ನಾಗಿದ್ದರೆ ಮಕ್ಕಳು ಹೆಚ್ಚು ಉತ್ಸಾಹದಿಂದ ಪಾಠ ಕಲಿಯುತ್ತಾರೆ. ಶಿಕ್ಷಣದ ಅಭಿವೃದ್ದಿಗೆ ಉಚಿತ ಸಮವಸ್ತ್ರ, ಶೂ, ಸಾಕ್ಸ್ ವಿತರಣೆ, ಅಕ್ಷರ ದಾಸೋಹ, ಇತ್ಯಾದಿ ಹಲವಾರು ಸೌಲಭ್ಯ ಸರ್ಕಾರ ನೀಡುತ್ತಿದೆ ಎಂದು ಹೇಳಿದರು.

ಉತ್ತಮ ಫಲಿತಾಂಶ ತರುವುದನ್ನು ಸವಾಲಾಗಿ ಸ್ವೀಕರಿಸಿ, ವಿದ್ಯಾರ್ಥಿಗಳು ಶಾಲೆಗೆ ತಪ್ಪದೆ ಬರುವಂತೆ ಕ್ರಮವಹಿಸಿ, ವಿಶೇಷ ತರಗತಿಗಳು, ಗುಂಪು ಅಧ್ಯಯನದ ಮೂಲಕ ಪಾಸಿಂಗ್ ಪ್ಯಾಕೇಜ್, ಹಾರ್ಡ್ ಡಿಸ್ಕ್ ನಲ್ಲಿ ನೀಡಿರುವ ಇ-ಕಲಿಕಾ ಸಾಮಗ್ರಿಗಳನ್ನು್ ಉಪಯೋಗಿಸಿ ಫಲಿತಾಂಶ ವೃದ್ಧಿಗೊಳಿಸಬೇಕು ಎಂದು ಹೇಳಿದರು.

ಬಾವಿಕೆರೆ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಗಣೇಶ್ ಮಾತನಾಡಿ ಈಗಿನ ದಿನಮಾನಗಳಲ್ಲಿ ಫಲಿತಾಂಶ ಉತ್ತಮಗೊಳಿಸಿಕೊಳ್ಳುವಲ್ಲಿ ಇ-ಕಲಿಕಾ ಸಾಮಗ್ರಿಗಳುಹೆಚ್ಚು ಉಪಯುಕ್ತ. ಎಲ್ಲಾ ವಿಷಯಗಳನ್ನು ಕುರಿತು ಇ-ಸಂಪನ್ಮೂಲಗಳ ಹಾರ್ಡ್ ಡಿಸ್ಕ್ ಒಳಗೊಂಡಿದ್ದು ಅವುಗಳನ್ನು ಬಳಸಿ ಎಂದು ಸಲಹೆ ನೀಡಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿಜಯಕುಮಾರ್ ಮಾತನಾಡಿ ಮುಖ್ಯ ಶಿಕ್ಷಕರು ಉತ್ತಮ ಯೋಜನೆಯೊಂದಿಗೆ ಫಲಿತಾಂಶ ವೃದ್ಧಿಗೆ ಶ್ರಮವಹಿಸಿಬೇಕು ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಪರುಶುರಾಮಪ್ಪ ಎಚ್.ಎ. ಅವರು ಎಸ್.ಎಸ್.ಎಲ್.ಸಿ.ಪರೀಕ್ಷಾ ಫಲಿತಾಂಶದ ಅಂಕಿ ಅಂಶಗಳ ವಿವರ ನೀಡಿ ಉತ್ತಮ ಮಾರ್ಗದರ್ಶನ ನೀಡಿದರು.

ಪರೀಕ್ಷಾ ಸ್ಪೂರ್ತಿ ಕೈಪಿಡಿ ಬಿಡುಗಡೆ ನೆರವೇರಿಸಲಾಯಿತು. ಇ-ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ತರೀಕೆರೆ ತಾಲೂಕು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್, ಅಜ್ಜಂಪುರ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ದೇವೇಂದ್ರಪ್ರ, ತರೀಕೆರೆ ಮತ್ತು ಅಜ್ಜಂಪುರ ತಾಲೂಕು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

27ಕೆಟಿಆರ್.ಕೆ.1ಃ

ತರೀಕೆರೆಯಲ್ಲಿ ಎಸ್.ಎಸ್.ಎಲ್.ಸಿ.ಪರೀಕ್ಷಾ ಫಲಿತಾಂಶ ವೃದ್ದಿಗೆ ಇ-ಕಲಿಕಾ ಸಾಮಗ್ರಿ ವಿತರಣೆ ಕಾರ್ಯಕ್ರಮವನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಪರುಶುರಾಮಪ್ಪ ಎಚ್.ಎ. ತರೀಕೆರೆ ತಾಲೂಕು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್, ಅಜ್ಜಂಪುರ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ದೇವೇಂದ್ರಪ್ರ ಮತ್ತಿತರರು ಇದ್ದರು.

Share this article