ಅರಣ್ಯ ಭೂಮಿಯನ್ನು ಕಂದಾಯ ಭೂಮಿಯಾಗಿ ಮಾಡಿದರೆ ಹೆಚ್ಚು ಜನರಿಗೆ ಹಕ್ಕುಪತ್ರ ನೀಡಲು ಸಾಧ್ಯ: ಟಿ.ಡಿ. ರಾಜೇಗೌಡ

KannadaprabhaNewsNetwork |  
Published : Apr 06, 2025, 01:47 AM IST
ಹಕ್ಕುಪತ್ರ ವಿತರಣ ಮತ್ತು ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮ | Kannada Prabha

ಸಾರಾಂಶ

ಕೊಪ್ಪ, ಅರಣ್ಯ ಇಲಾಖೆ ೧೦,೦೦೦ ಎಕರೆ ಅರಣ್ಯ ಭೂಮಿಯನ್ನು ಕಂದಾಯ ಭೂಮಿಗೆ ವರ್ಗಾವಣೆ ಮಾಡಿದರೆ ಇನ್ನು ಹೆಚ್ಚು ಜನರಿಗೆ ಹಕ್ಕುಪತ್ರ ನೀಡಲು ಸಾಧ್ಯವಾಗುತ್ತದೆ. ಅರಣ್ಯ ಮತ್ತು ಕಂದಾಯ ಇಲಾಖೆ ಪರಸ್ಪರ ಒಮ್ಮತದಿಂದ ಜಂಟಿ ಸರ್ವೆ ಮಾಡುವ ಮೂಲಕ ಕಂದಾಯ ಭೂಮಿ ಗುರುತಿಸುವ ಕೆಲಸ ಮಾಡಬೇಕು ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.

ಹಕ್ಕುಪತ್ರ ವಿತರಣ ಮತ್ತು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ಕೊಪ್ಪ

ಅರಣ್ಯ ಇಲಾಖೆ ೧೦,೦೦೦ ಎಕರೆ ಅರಣ್ಯ ಭೂಮಿಯನ್ನು ಕಂದಾಯ ಭೂಮಿಗೆ ವರ್ಗಾವಣೆ ಮಾಡಿದರೆ ಇನ್ನು ಹೆಚ್ಚು ಜನರಿಗೆ ಹಕ್ಕುಪತ್ರ ನೀಡಲು ಸಾಧ್ಯವಾಗುತ್ತದೆ. ಅರಣ್ಯ ಮತ್ತು ಕಂದಾಯ ಇಲಾಖೆ ಪರಸ್ಪರ ಒಮ್ಮತದಿಂದ ಜಂಟಿ ಸರ್ವೆ ಮಾಡುವ ಮೂಲಕ ಕಂದಾಯ ಭೂಮಿ ಗುರುತಿಸುವ ಕೆಲಸ ಮಾಡಬೇಕು ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು. ಶುಕ್ರವಾರ ತಾಲೂಕು ಆಡಳಿತ ಸೌಧದಲ್ಲಿ ೯೪ಸಿ ಹಕ್ಕುಪತ್ರ ವಿತರಣ ಮತ್ತು ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ದಿನದ ೨೪ ಗಂಟೆ ವಿದ್ಯುತ್ ನೀಡುವ ಸಲುವಾಗಿ ನವೀಕರಿಸ ಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿದೇಶಗಳಿಗೆ ಭೇಟಿ ನೀಡಿ ಅಧ್ಯಯನ ಮಾಡಿರುತ್ತೇನೆ. ತಾನು ಎಲ್ಲೇ ಇದ್ದರೂ ಕ್ಷೇತ್ರ ಮತ್ತು ರಾಜ್ಯದ ಪರವಾಗಿ ಕಾರ್ಯನಿರ್ವಹಿಸುತ್ತಿದ್ದು ಸರ್ಕಾರ ನನಗೆ ನೀಡಿರುವ ಜವಾಬ್ದಾರಿ ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಹೇಳಿದರು.

ನನ್ನ ಬಗ್ಗೆ ಅಪಪ್ರಚಾರ ಮಾಡುವ ಬಿಜೆಪಿಯವರು ಆಡಳಿತದಲ್ಲಿದ್ದಾಗ ಕೊರೊನಾ ಸಮಯದಲ್ಲಿ ಯಾವ ರೀತಿ ರಾಜ್ಯ ಮತ್ತು ಕ್ಷೇತ್ರದಲ್ಲಿ ಜನರ ಪರ ಇದ್ದರೂ ಎನ್ನುವುದು ಎಲ್ಲರಿಗೂ ಗೊತ್ತಿದೆ. ಕೋವಿಡ್ 19 ಸಮಯದಲ್ಲಿ ಲಾಕ್‌ಡೌನ್ ಮಾಡಿದ್ದೊಂದು ಬಿಟ್ಟರೆ ಬೇರೇನು ಮಾಡಿಲ್ಲ. ಆ ಸಮಯದಲ್ಲಿ ಸಂಕಷ್ಟದಲ್ಲಿದ್ದ ಜನರನ್ನು ಕೇಳುವ ಗತಿಯೇ ಇರಲಿಲ್ಲ. ಕೂಲಿ ಕೆಲಸ, ದಿನಗೂಲಿ, ವ್ಯವಹಾರಸ್ಥರು ಸೇರಿದಂತೆ ಎಲ್ಲರ ಬದುಕು ಕೋವಿಡ್ ಸಮಯದಲ್ಲಿ ಹೇಗಿತ್ತು ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾಜ್‌ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಪಂಚ ಗ್ಯಾರಂಟಿ ಜಾರಿಗೆ ತಂದಿದೆ. ಶೃಂಗೇರಿ ಕ್ಷೇತ್ರಕ್ಕೆ ವರ್ಷಕ್ಕೆ ಸುಮಾರು ₹೨೫೫ ಕೋಟಿ ಈ ಯೋಜನೆಗಳಿಗೆ ವೆಚ್ಚವಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಬಳಸುವ ಹಣದಿಂದ ಈ ಬಾರಿ ಸಾಕಷ್ಟು ಅಭಿವೃದ್ಧಿ ಮಾಡುವ ಅವಕಾಶವಿತ್ತು. ಜನರು ಸಂಕಷ್ಟದಲ್ಲಿರುವುದರಿಂದ ಅವರಿಗೆ ಆರ್ಥಿಕ ಸ್ಥೈರ್ಯ ನೀಡುವ ಸಲುವಾಗಿ ಈ ಯೋಜನೆ ಜಾರಿಗೆ ತಂದಿದೆ. ಇದರ ಜೊತೆಜೊತೆಯಲ್ಲಿಯೇ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದು ಕಾನೂನಿನ ಅಡೆತಡೆ ಹೊರತುಪಡಿಸಿ ಅಭಿವೃದ್ಧಿ ಕೆಲಸದಲ್ಲಿ ನಾವು ಹಿಂದೆ ಬಿದ್ದಿಲ್ಲ. ರಸ್ತೆಗಳ ಅಭಿವೃದ್ಧಿ ಅತಿವೃಷ್ಠಿಯಲ್ಲಿ ಉಂಟಾದ ಹಾನಿಗೆ ಸಂಬಂಧಿಸಿದ ಎಲ್ಲಾ ಕಾಮಗಾರಿಗಳನ್ನು ಸರಿಪಡಿಸಲಾಗಿದೆ. ಭೂಕುಸಿತಕ್ಕೊಳಗಾದ ಕುಂಚೂರು ನಾರ್ವೆ ಘಾಟಿ ರಸ್ತೆಗೆ ₹೪.೮೫ ಕೋಟಿ ಬಿಡುಗಡೆ ಮಾಡಲಾಗಿದ್ದು ಕಾಮಗಾರಿಗೆ ಚಾಲನೆ ನೀಡಲಾಗಿದೆ. ₹೨.೫ ಕೋಟಿ ವೆಚ್ಚದಲ್ಲಿ ಕೊಪ್ಪದ ಆಡಳಿತ ಸೌಧ ಕಟ್ಟಡದ ಮುಂದುವರೆದ ಕಾಮಗಾರಿ ಶಂಕು ಸ್ಥಾಪನೆ ಮತ್ತು ಫಲಾನುಭವಿಗಳಿಗೆ ೯೪ಸಿ ಹಕ್ಕುಪತ್ರಗಳನ್ನು ವಿತರಿಸಲಾಯಿತು.ತಹಸೀಲ್ದಾರ್ ಲಿಖಿತ ಮೋಹನ್ ಮತ್ತು ಇತರೆ ಇಲಾಖಾಧಿಕಾರಿಗಳು ಕಾಂಗ್ರೆಸ್‌ನ ವಿವಿಧ ಘಟಕಗಳ ಅಧ್ಯಕ್ಷರು, ಸದಸ್ಯರು ಇದ್ದರು.

PREV

Recommended Stories

ಸರ್ಕಾರಿ ಯೋಜನೆ ತಲುಪಲು ‘ಅರಿವು’ ಕಾರ್ಯಕ್ರಮ ಸಹಕಾರಿ: ಯಶ್ಪಾಲ್‌ ಸುವರ್ಣ
ತಾಯಿ ಹೆಸರಿನಲ್ಲಿ ಒಂದು ಸಸಿ ಹಾಗೂ ಬೀಜದುಂಡೆ ಕಾರ್ಯಕ್ರಮಕ್ಕೆ ಚಾಲನೆ