)
ಕನ್ನಡಪ್ರಭ ವಾರ್ತೆ ಬೆಂಗಳೂರು
ಕಸದ ಲಾರಿಯಿಂದ ಅಪಘಾತವಾಗಿದೆ ಎನ್ನುವ ಕಾರಣಕ್ಕೆ ಹೀಗೆ ಮಾಡುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿ, ಅಪಘಾತ ಆಗಬಾರದಿತ್ತು ಆಗಿದೆ. ಅದಕ್ಕೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಕಸ ವಿಲೇವಾರಿ ನಿಲ್ಲಿಸಿರುವುದು ಸರಿಯಲ್ಲ. ಎಸ್.ಟಿ. ಸೋಮಶೇಖರ್, ಶಿವಣ್ಣ, ಕೃಷ್ಣ ಬೈರೇಗೌಡ ಅವರ ಕ್ಷೇತ್ರಗಳಲ್ಲೂ ಕಸ ವಿಲೇವಾರಿ ಮಾಡಲಾಗುತ್ತಿದೆ. ಈಗ ಹೊಸದಾಗಿ ಎರಡು ಜಾಗಗಳನ್ನು ಖರೀದಿ ಮಾಡಲಾಗಿದೆ. ಅಲ್ಲಿ ಕಸ ವಿಲೇವಾರಿಗೆ ಕಾನೂನಿನ ಪ್ರಕಾರ ಟೆಂಡರ್ ಕರೆಯಲಾಗಿದೆ. ಒಂದಷ್ಟು ಕಾನೂನಾತ್ಮಕ ವಿಚಾರಗಳನ್ನು ಬಗೆಹರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.ಅನುದಾನ ಅಲಭ್ಯತೆಗೆ ಬಿಜೆಪಿ ಕಾರಣ:ಹಿಂದಿನ ಸರ್ಕಾರಕ್ಕಿಂತ ಈಗಿನ ಸರ್ಕಾರದಲ್ಲಿ ಕಮಿಷನ್ ಹೆಚ್ಚಿದೆ ಎಂದು ಗುತ್ತಿಗೆದಾರರ ಸಂಘದ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಅದರ ಬಗ್ಗೆ ಗುತ್ತಿಗೆದಾರರು ದೂರು ನೀಡಲಿ. ಅವರು ಮೊದಲು ಕಾಮಗಾರಿ ನಿಲ್ಲಿಸಲಿ. ಯಡಿಯೂರಪ್ಪ ಅವರ ಸರ್ಕಾರ ಇದ್ದಾಗ ಅನುದಾನವಿಲ್ಲ, ಕೆಲಸ ತೆಗೆದುಕೊಳ್ಳಬೇಡಿ ಎಂದು ಹೇಳಿದ್ದೀವಲ್ಲ. ಆದರೂ ಅವರು ಏಕೆ ಕೆಲಸಗಳನ್ನು ತೆಗೆದುಕೊಂಡರು. ಅನುದಾನ ಲಭ್ಯತೆ ಇಲ್ಲದಿದ್ದರೂ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ಕೆಲಸಗಳನ್ನು ತೆಗೆದುಕೊಳ್ಳಲಾಯಿತು. ಬೆಂಗಳೂರು ನಗರದಲ್ಲಿ ಎಷ್ಟು ಹೊಂದಿಸಬೇಕೋ ಆ ಕೆಲಸವನ್ನು ನಾನು ಮಾಡಿದ್ದೇನೆ ಎಂದರು.
ಉದಾಹರಣೆಗೆ 10 ಸಾವಿರ ಕೋಟಿ ರು. ಅನುದಾನವಿದ್ದರೆ 30ರಿಂದ 40 ಸಾವಿರ ಕೋಟಿ ರು. ಟೆಂಡರ್ ಕರೆದಿದ್ದಾರೆ. ಇದೆಲ್ಲದಕ್ಕೂ ಬಿಜೆಪಿ ಸರ್ಕಾರವೇ ಕಾರಣ. ಈಗ ಬಿಲ್, ಬಿಲ್ ಎಂದರೆ ಏನು ಮಾಡುವುದು. ನಾವು ಹೇಳಿದಾಗ ಕೇಳದೆ ಕೆಲಸಗಳನ್ನು ಏತಕ್ಕಾಗಿ ತೆಗೆದುಕೊಂಡರು. ನನ್ನ ಇಲಾಖೆಯ ದಾಖಲೆಗಳನ್ನೇ ನೀಡುತ್ತೇನೆ. ಹಣ ಇಲ್ಲ ಎಂದು ಗೊತ್ತಿದ್ದರೂ ಕೆಲಸಗಳನ್ನು ಪ್ರಾರಂಭಿಸಿದ್ದಾದರೂ ಏಕೆ ಎಂದು ಪ್ರಶ್ನಿಸಿದರು.ಕೆಲಸ ನಿಲ್ಲಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಕೆಲಸ ನಿಲ್ಲಿಸಬೇಕೆಂದವರು ನಿಲ್ಲಿಸಲಿ. ಏನು ಬೇಕಾದರೂ ಮಾಡಿಕೊಳ್ಳಲಿ. ನಮ್ಮ ಸರ್ಕಾರ ಬಜೆಟ್ ಪ್ರಕಾರ ಹಣ ನೀಡುತ್ತದೆ. ಎಷ್ಟು ಆಗುತ್ತದೋ ಅಷ್ಟು ಹಣವನ್ನು ಕೊಡುತ್ತೇವೆ. ಬಜೆಟ್ ಆದ ನಂತರ ಏನಾದರೂ ಮಾಡೋಣ. ನಮಗೂ ಮಾನವೀಯತೆಯಿದೆ. ಬ್ಲ್ಯಾಕ್‌ಮೇಲ್ ಮಾಡುತ್ತೇವೆ ಎನ್ನುವವರೆಲ್ಲಾ ಮಾಡಿಕೊಳ್ಳಲಿ ಎಂದರು.