ಎಚ್ಡಿಕೆ ಸಂಸದರಾದರೆ ಮಂಡ್ಯಕ್ಕೆ ಕೇಂದ್ರ ಸಚಿವ ಸ್ಥಾನ: ಮಾಜಿ ಸಚಿವ ಎಸ್.ಸುರೇಶ್ ಕುಮಾರ್

KannadaprabhaNewsNetwork |  
Published : Apr 19, 2024, 01:02 AM IST
18ಕೆಎಂಎನ್ ಡಿ18 | Kannada Prabha

ಸಾರಾಂಶ

ವಕೀಲರು ಪ್ರಭಾವಶಾಲಿಯಾಗಿರುವರು, ಚಿಂತನಶಕ್ತಿ ಇದೆ, ಚುನಾವಣೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬಹುಮತದಿಂದ ಆಯ್ಕೆ ಮಾಡಲು ಸಹಕರಿಸಬೇಕು.

ಮಂಡ್ಯ: ಜಿಲ್ಲೆಯ ಮತದಾರರು ಎನ್ ಡಿಎ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಂಸತ್ ಗೆ ಆಯ್ಕೆ ಮಾಡಿದರೆ, ಬಹು ವರ್ಷಗಳ ನಂತರ ಮಂಡ್ಯಕ್ಕೆ ಕೇಂದ್ರ ಸಚಿವ ಸ್ಥಾನ ಸಿಗುವ ಅವಕಾಶವಿದೆ ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು. ನಗರದ ವಕೀಲರ ಸಂಘದಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರ ವಕೀಲರ ಬಳಿ ಮತಯಾಚನೆ ಮಾಡಿ ಮಾತನಾಡಿ, ವಕೀಲರು ಪ್ರಭಾವಶಾಲಿಯಾಗಿರುವರು, ಚಿಂತನಶಕ್ತಿ ಇದೆ, ಚುನಾವಣೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬಹುಮತದಿಂದ ಆಯ್ಕೆ ಮಾಡಲು ಸಹಕರಿಸಬೇಕು ಎಂದು ಹೇಳಿದರು. ಜನಸಾಮಾನ್ಯರ ಹಿತಕ್ಕೆ ಇರುವ ಗ್ಯಾರಂಟಿ ನರೇಂದ್ರ ಮೋದಿ ಗ್ಯಾರಂಟಿ. ರಾಷ್ಟ್ರೀಯ ಹಿತ ದೃಷ್ಟಿಯಿಂದ ಈ ಚುನಾವಣೆ ಮಹತ್ವದ ಚುನಾವಣೆಯಾಗಿದೆ. ದೇಶದ ಹಿತದೃಷ್ಟಿಯಿಂದ ನಿರ್ಣಾಯಕ ಹೆಜ್ಜೆ ಇಡುವ ನಾಯಕನೆಂದರೆ ಅದು ಮೋದಿ ಮಾತ್ರ. ಎಚ್.ಡಿ.ಕುಮಾರಸ್ವಾಮಿ ಅವರು ಎರಡು ಬಾರಿ ಸಿಎಂ ಆಗಿ ಗ್ರಾಮ ವಾಸ್ತವ್ಯದ ಮೂಲಕ ರಾಷ್ಟ್ರಮಟ್ಟದಲ್ಲಿ ಹೆಸರುವಾಸಿಯಾಗಿದ್ದಾರೆ ಎಂದು ಹೇಳಿದರು. ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್, ಉಪಾಧ್ಯಕ್ಷ ಕೆ.ಎಂ.ಬಸವರಾಜು, ಮನ್ಮುಲ್ ಉಪಾಧ್ಯಕ್ಷ ಎಂ.ಎಸ್.ರಘು ನಂದನ್, ಸಿದ್ದರಾಜು, ಮಹೇಶ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ
ನಾಳೆ ಸಿದ್ದರಾಮಯ್ಯ ಬಜೆಟ್‌ : ವಲಯವಾರು ನಿರೀಕ್ಷೆಗಳೇನು?