ನನ್ನ ಗೆಲ್ಲಿಸಿದರೆ ಪದವೀಧರರ ಆಶಯ ಈಡೇರಿಸುವೆ: ಕೆ.ಎಂ. ಸುರೇಶ್

KannadaprabhaNewsNetwork |  
Published : Oct 19, 2026, 01:15 AM IST
೧೮ಶಿರಾ೧: ಶಿರಾ ನಗರದ ಸಿರಿಗಂಧ ಪ್ಯಾಲೇಸ್‌ನಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾ ಪ್ರಚಾರಸಭೆ ನಡೆಯಿತು. | Kannada Prabha

ಸಾರಾಂಶ

ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಎನ್‌ಡಿಎ ಮೈತ್ರಿಕೂಟದಿಂದ ಸ್ಪರ್ಧಿಸಿರುವ ನನಗೆ ಅ. ೨೩ರಂದು ನಡೆಯುವ ಚುನಾವಣೆಯಲ್ಲಿ ನನ್ನ ಕ್ರಮ ಸಂಖ್ಯೆ ೨ಕ್ಕೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿದರೆ ಪದವೀಧರರ ಧ್ವನಿಯಾಗಿ, ನಿಮ್ಮ ಆಶಯಗಳನ್ನು ಈಡೇರಿಸುವ ಕೆಲಸ ಮಾಡುತ್ತೇನೆ ಎಂದು ಆಗ್ನೇಯ ಪದವೀಧರರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಭರವಸೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಶಿರಾ

ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಎನ್‌ಡಿಎ ಮೈತ್ರಿಕೂಟದಿಂದ ಸ್ಪರ್ಧಿಸಿರುವ ನನಗೆ ಅ. ೨೩ರಂದು ನಡೆಯುವ ಚುನಾವಣೆಯಲ್ಲಿ ನನ್ನ ಕ್ರಮ ಸಂಖ್ಯೆ ೨ಕ್ಕೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿದರೆ ಪದವೀಧರರ ಧ್ವನಿಯಾಗಿ, ನಿಮ್ಮ ಆಶಯಗಳನ್ನು ಈಡೇರಿಸುವ ಕೆಲಸ ಮಾಡುತ್ತೇನೆ ಎಂದು ಆಗ್ನೇಯ ಪದವೀಧರರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಭರವಸೆ ನೀಡಿದ್ದಾರೆ.

ಶಿರಾ ನಗರದ ಸಿರಿಗಂಧ ಪ್ಯಾಲೇಸ್‌ನಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾ ಪ್ರಚಾರಸಭೆಯಲ್ಲಿ ಮಾತನಾಡಿ, ಕಳೆದ ಭಾರಿಯೂ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಅದೇ ರೀತಿ ಈ ಬಾರಿ ಎನ್.ಡಿ.ಎ. ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ನನ್ನನ್ನು ಗೆಲ್ಲಿಸುವ ಮೂಲಕ ಪದವೀಧರರ ಧ್ವನಿಯಾಗಿ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿ ಕೊಡಿ. ಪದವೀಧರರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಲು ನಾನು ಬದ್ಧ ಎಂದು ತಿಳಿಸಿದರು.ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಮಾತನಾಡಿ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಂ. ಸುರೇಶ್ ಅವರು ಶಿಕ್ಷಣ, ಆರೋಗ್ಯ ಸೇರಿ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಾಮಾಜಿಕ ಸೇವೆ ಸಲ್ಲಿಸಿದ್ದಾರೆ. ಪದವೀಧರರ ಸಮಸ್ಯೆಗಳನ್ನು ಅರಿತುಕೊಂಡಿರುವ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡುವ ಮೂಲಕ ಗೆಲವಿಗೆ ಸಹಕರಿಸಬೇಕು ಎಂದು ಕೋರಿದರು.

ತೆಂಗು ಮತ್ತು ನಾರು ನಿಗಮದ ಮಾಜಿ ಅಧ್ಯಕ್ಷ ಬಿ.ಕೆ. ಮಂಜುನಾಥ್ ಮಾತನಾಡಿ ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಈ ಹಿಂದೆ ನಡೆದ ಹತ್ತು ಚುನಾವಣೆಗಳಲ್ಲಿ ಬಿಜೆಪಿ ಎಂಟು ಬಾರಿ ಗೆಲುವು ಸಾಧಿಸಿದೆ. ಈ ಬಾರಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಎನ್‌ಡಿಎ ಅಭ್ಯರ್ಥಿಯಾಗಿ ಕೆ.ಎಂ. ಸುರೇಶ್ ಕಣದಲ್ಲಿರುವುದರಿಂದ ಅವರ ಗೆಲುವು ಖಚಿತ ಎಂದು ಹೇಳಿದರು. ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್. ಗೌಡ ಮಾತನಾಡಿ ಬಡತನದಲ್ಲಿ ಬೆಳೆದು ಬಿಜೆಪಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿರುವ ಕೆ.ಎಂ. ಸುರೇಶ್ ಅವರು ಜನಮನ್ನಣೆ ಗಳಿಸಿದ್ದಾರೆ. ಅವರ ಗೆಲುವು ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳ ಗೆಲುವಾಗಿದ್ದು, ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಎನ್. ರವಿಕುಮಾರ್ ಮತ್ತು ಕೆ.ಎಫ್. ನವೀನ್, ಮಾಜಿ ಬಿಜೆಪಿ ಮಧುಗಿರಿ ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷ ಹನುಮಂತೇಗೌಡ, ಬಿ.ಕೆ. ಮಂಜುನಾಥ್, ಎಸ್.ಆರ್. ಗೌಡ, ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ಮುದಿಮಡು ಮಂಜುನಾಥ್, ಶಿರಾ ನಗರ ಮಂಡಲ ಅಧ್ಯಕ್ಷ ಗಿರಿಧರ್, ಗ್ರಾಮಾಂತರ ಅಧ್ಯಕ್ಷ ಈರಣ್ಣ ಪಟೇಲ್, ಜಿಲ್ಲಾ ಉಪಾಧ್ಯಕ್ಷ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ಪುನೀತ್ ಗೌಡ, ನಗರಸಭೆ ಸದಸ್ಯೆ ಉಮಾ ವಿಜಯರಾಜ್, ಮಾಜಿ ನಗರ ಮಂಡಲ ಅಧ್ಯಕ್ಷ ಡಾ. ಬಿ. ಗೋವಿಂದಪ್ಪ, ಶಿರಾ ಘಟಕದ ಮಹಿಳಾ ಅಧ್ಯಕ್ಷೆ ರತ್ನಮ್ಮ, ಪದ್ಮಾ ಮಂಜುನಾಥ್, ಶಿವಪ್ರಸಾದ್, ಬರಗೂರು ಶಿವಕುಮಾರ್, ಮುದ್ದೆವಳ್ಳಿ ರಾಮಕೃಷ್ಣ, ಬಸವರಾಜ್, ಕರಿಯಣ್ಣ ಸೇರಿ ಹಲವು ಮುಖಂಡರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅರಸೀಕೆರೆಯಲ್ಲಿ ಬೀದಿ ವ್ಯಾಪಾರದ ವಿಚಾರಕ್ಕೆ ಗಲಾಟೆ
ಗ್ಯಾರಂಟಿಗಾಗಿ ರೈತರ ಸಾಲಮನ್ನಾ, ಹಳೇ ಪಿಂಚಣಿ ಜಾರಿಯಿಲ್ಲ: ಬಿಕೆ ಹರಿಪ್ರಸಾದ್‌