ನಾನು ಸಂಸದನಾದರೆ ಆರ್ಥಿಕ ವಲಯಕ್ಕೆ ಬಲ ತುಂಬುವೆ: ಡಾ.ಕೆ. ಸುಧಾಕರ್

KannadaprabhaNewsNetwork |  
Published : Apr 08, 2024, 01:07 AM IST
3: ಹೊಸಕೋಟೆ ತಾಲೂಕಿನ ನಂದಗುಡಿ ಖಾಸಗಿ ಸಭಾಭವನದಲ್ಲಿ ನಡೆದ ನಂದಗುಡಿ ಹಾಗೂ ಸೂಲಿಬೆಲೆ ಹೋಬಳಿ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್, ಮಾಜಿ ಸಚಿವ ಎಂಟಿಬಿ ನಾಗರಾಜ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಕಾಯಕ ಯೋಗಿ ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಭಾರತದ ನೋಟವನ್ನೇ ಬದಲಾಯಿಸಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಭಾರತವು ಶಕ್ತಿಯಾಗಿ ಹೊರಹೊಮ್ಮುವಂತೆ ಅವರು ಮಾಡಿರುವುದು ದೊಡ್ಡ ಹೆಮ್ಮೆ. ಅವರ ಆಡಳಿತವನ್ನು ಮಾದರಿಯಾಗಿಟ್ಟುಕೊಂಡಿರುವ ನಾನು ಕಳೆದ 10 ವರ್ಷಗಳಿಂದ ನಿರಂತರವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದೇನೆ.

ಕನ್ನಡಪ್ರಭ ವಾರ್ತೆ ಹೊಸಕೋಟೆ

ನಂದಗುಡಿ ಹೋಬಳಿಯಲ್ಲಿ ಕಳೆದ 25 ವರ್ಷಗಳಿಂದ ನೆನೆಗುದಿಗೆ ಬಿದ್ದು ಅತಂತ್ರ ಸ್ಥಿತಿಯಲ್ಲಿರುವ ವಿಶೇಷ ಆರ್ಥಿಕ ವಲಯಕ್ಕೆ ನಾನು ಸಂಸದನಾದ ಕೆಲವೇ ತಿಂಗಳುಗಳಲ್ಲಿ ಪರಿಹಾರ ಕೊಡುವ ಕಾರ್ಯ ಮಾಡಲಾಗುವುದು ಎಂದು ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ತಿಳಿಸಿದರು.

ತಾಲೂಕಿನ ನಂದಗುಡಿ ಗ್ರಾಮದಲ್ಲಿ ಖಾಸಗಿ ಸಭಾಭವನದಲ್ಲಿ ನಡೆದ ನಂದಗುಡಿ ಹಾಗೂ ಸೂಲಿಬೆಲೆ ಹೋಬಳಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಕಾಯಕ ಯೋಗಿ ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಭಾರತದ ನೋಟವನ್ನೇ ಬದಲಾಯಿಸಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಭಾರತವು ಶಕ್ತಿಯಾಗಿ ಹೊರಹೊಮ್ಮುವಂತೆ ಅವರು ಮಾಡಿರುವುದು ದೊಡ್ಡ ಹೆಮ್ಮೆ. ಅವರ ಆಡಳಿತವನ್ನು ಮಾದರಿಯಾಗಿಟ್ಟುಕೊಂಡಿರುವ ನಾನು ಕಳೆದ 10 ವರ್ಷಗಳಿಂದ ನಿರಂತರವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದರು.

ಈಗ ನನ್ನ ಸೇವೆಯನ್ನು ಇಡೀ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾತರ ಜಿಲ್ಲೆಗೆ ವಿಸ್ತರಿಸುವ ಅವಕಾಶ ದೊರೆತಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿಯ ಕೆಲಸಗಳನ್ನು ಇಡೀ ದೇಶವೇ ಗೌರವಿಸುತ್ತಿದೆ. ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗುವುದು ನಿಶ್ಚಿತ. ಆದ್ದರಿಂದ ಅವರ ಜೊತೆ ಕೆಲಸ ಮಾಡಲು ಒಂದು ಅವಕಾಶ ಕೊಡಿ ಎಂದರು.

ಎಂಟಿಬಿ ಎರಡು ಬಾರಿ ಸೋತಿದ್ದರಿಂದ ಬೇಜಾರಾಯ್ತು:

ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ಹಾಗೂ ಚಿಕ್ಕಬಳ್ಳಾಪುರದಲ್ಲಿ ನಾನು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆವು. ಪ್ರಮುಖವಾಗಿ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜನ್ನು ಘಟಾನುಘಟಿಗಳ ನಡುವೆ ಕಿತ್ತಾಡಿ ತಂದೆನು. ಆದರೂ ಎಂಟಿಬಿ ಎರಡು ಬಾರಿ, ನಾನು ಒಂದು ಬಾರಿ ಸೋಲಬೇಕಾಯಿತು. ಇದರಿಂದ ಸಾಕಷ್ಟು ಬೇಜಾರು ನಮ್ಮಿಬ್ಬರಿಗೆ ಆಗಿದೆ. ಆದರೆ ನಾನು ಸಂಸದನಾದರೆ ಎಂಟಿಬಿಗೂ ಬಲ ಬರುತ್ತದೆ. ನಮ್ಮ ಪಕ್ಷದ ಕಾರ್ಯಕರ್ತರಿಗೂ ಶಕ್ತಿ ಬರುತ್ತದೆ ಎಂದು ಡಾ.ಕೆ.ಸುಧಾಕರ್ ತಿಳಿಸಿದರು.

ಮಾಜಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ದೇಶದಲ್ಲಿ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗುವ ಯೋಗ ಇರುವುದು ನರೇಂದ್ರ ಮೋದಿಯವರಿಗೆ ಮಾತ್ರ. ನರೇಂದ್ರ ಮೋದಿಯವರ ಅಭಿವೃದ್ಧಿ ಮೆಚ್ಚಿ ಜೆಡಿಎಸ್ ಪಕ್ಷವು ಈ ಬಾರಿ ಲೋಕಸಭಾ ಚುನಾವಣೆಗೆ ಹೊಂದಾಣಿಕೆ ಮಾಡಿಕೊಂಡು ಚುನಾವಣೆಗೆ ನಿಂತಿದೆ. ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳನ್ನು ನಂಬಿ ಮತ ಹಾಕಿದ್ರಿ. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬರಗಾಲ ಬಂದು ಮಳೆ ಇಲ್ಲದಂತಾಗಿದೆ. ಯಾವುದೇ ಅಭಿವೃದ್ಧಿ ಸಹ ಆಗುತ್ತಿಲ್ಲ. ಆದ್ದರಿಂದ ಮತದಾರರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಅವರಿಗೆ ಮತ ಹಾಕುವ ಮೂಲಕ ನರೇಂದ್ರ ಮೋದಿ ಕೈ ಬಲಪಡಿಸಬೇಕು ಎಂದರು.

ತಾಲೂಕು ಬಿಜೆಪಿ ಅಧ್ಯಕ್ಷ ಕೆ. ಸತೀಶ್, ಉಪಾಧ್ಯಕ್ಷ ಎಂ. ಚಂದ್ರಪ್ಪ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಅನುರೆಡ್ಡಿ, ಜಿಪಂ ಮಾಜಿ ಅಧ್ಯಕ್ಷ ಬಿ. ಎಂ. ನಾರಾಯಣಸ್ವಾಮಿ, ಜಿಪಂ ಮಾಜಿ ಸದಸ್ಯ ಸಿ. ನಾಗರಾಜ್, ಮುಖಂಡರಾದ ವೈಎಸ್‌ಎಂ ಮಂಜು, ರಘುವೀರ್ ಖಿಜರ್ ಅಹಮದ್, ಬಾಲಚಂದ್ರ, ಕೆ. ಸುರೇಶ್, ಚಂದ್ರ ಮೋಹನ್, ಹನುಮಂತೆಗೌಡ, ಸುಜಾತ ನಾಗರಾಜ್ ಇದ್ದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ