ಗೆದ್ರೆ ಮಿನಿಸ್ಟರ್ ಆಗ್ತೀನಿ, ಚಂದ್ರಪ್ಪಗೆಲ್ಲಿದೆ ಅವಕಾಶ

KannadaprabhaNewsNetwork |  
Published : Apr 15, 2024, 01:17 AM IST
ಚಿತ್ರದುರ್ಗ ಮೂರನೇ ಪುಟದ ಲೀಡ್(ಕಡ್ಡಾಯ) | Kannada Prabha

ಸಾರಾಂಶ

ಲೋಕಸಭೆ ಚುನಾವಣೆಯಲ್ಲಿ ನಾನು ಗೆದ್ರೆ ಕೇಂದ್ರದಲ್ಲಿ ಸಚಿವನಾಗಿ ಮೋದಿ ಜೊತೆ ಕುಳಿತುಕೊಳ್ಳುವೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುಂದಾಗುವೆ. ಕಾಂಗ್ರೆಸ್ ಅಧಿಕಾರಕ್ಕೆ ಬರೋಲ್ಲ ಅಂದ ಮೇಲೆ ಚಂದ್ರಪ್ಪಗೆ ಇಂತಹ ಅವಕಾಶಗಳು ಇವೆಯಾ ಎಂದು ಗೋವಿಂದ ಕಾರಜೋಳ ಪ್ರಶ್ನಿಸಿದರು

ಚಿತ್ರದುರ್ಗ: ಲೋಕಸಭೆ ಚುನಾವಣೆಯಲ್ಲಿ ನಾನು ಗೆದ್ರೆ ಕೇಂದ್ರದಲ್ಲಿ ಸಚಿವನಾಗಿ ಮೋದಿ ಜೊತೆ ಕುಳಿತುಕೊಳ್ಳುವೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುಂದಾಗುವೆ. ಕಾಂಗ್ರೆಸ್ ಅಧಿಕಾರಕ್ಕೆ ಬರೋಲ್ಲ ಅಂದ ಮೇಲೆ ಚಂದ್ರಪ್ಪಗೆ ಇಂತಹ ಅವಕಾಶಗಳು ಇವೆಯಾ ಎಂದು ಗೋವಿಂದ ಕಾರಜೋಳ ಪ್ರಶ್ನಿಸಿದರು.

ಚಳ್ಳಕೆರೆ ಟೋಲ್‍ಗೇಟ್ ಸಮೀಪವಿರುವ ಈಡಿಗರ ಹಾಸ್ಟೆಲ್ ಹಿಂಭಾಗದಲ್ಲಿ ಭಾನುವಾರ ಮನೆ ಮನೆಗೆ ತೆರಳಿ ಮತಯಾಚಿಸಿ ನಂತರ ಮಾತನಾಡಿದ ಕಾರಜೋಳ, ಕಳೆದ ಬಾರಿ ನಾರಾಯಣಸ್ವಾಮಿ ಇಲ್ಲಿಂದ ಗೆದ್ದು ಹೋಗಿ ಕೇಂದ್ರದಲ್ಲಿ ಸಚಿವರಾಗಿದ್ದರು. ಈ ಪರಂಪರೆಯ ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಚಿತ್ರದುರ್ಗದ ಜನರ ಮೇಲಿದೆ. ದೇಶದ ಅಭಿವೃದ್ಧಿ, ರಕ್ಷಣೆ, ವಿಶ್ವದ ಬೇರೆ ಬೇರೆ ದೇಶಗಳ ಜೊತೆ ಸ್ನೇಹ ಸಂಬಂಧ, ವ್ಯಾಪಾರವಹಿವಾಟಿಗೆ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಬೇಕಾಗಿದೆ. ಹಾಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸುವಂತೆ ವಿನಂತಿಸಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 19ರಂದು ಪ್ರಚಾರಕ್ಕಾಗಿ ಬರುತ್ತಿದ್ದಾರೆ. ಅನೇಕ ನಾಯಕರು ಈಗಾಗಲೇ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ನನ್ನ ಪರ ಮತಯಾಚನೆ ಆರಂಭಿಸಿದ್ದಾರೆ. ಕಾಂಗ್ರೆಸ್‍ನಲ್ಲಿ ದೇಶದ ಪ್ರಧಾನಿಯಾಗುವ ಅರ್ಹತೆ ಯಾರಿಗೂ ಇಲ್ಲದಂತಾಗಿದೆ. ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ ಭಾರತ 5ನೇ ಸ್ಥಾನದಲ್ಲಿದ್ದು, ಇನ್ನು 3 ವರ್ಷಗಳಲ್ಲಿ ಭಾರತ 3ನೇ ಸ್ಥಾನಕ್ಕೆ ಬರಲಿದೆ ಎಂದು ಹೇಳಿದರು.

ಚಿತ್ರದುರ್ಗ ವಿಧಾನಸಭೆ ಚುನಾವಣೆಯಲ್ಲಿ ಜಿ.ಎಚ್.ತಿಪ್ಪಾರೆಡ್ಡಿ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಸೋತಿಲ್ಲ. ಕಾಂಗ್ರೆಸ್‍ನ ಕುತಂತ್ರದಿಂದ ಸೋತಿದ್ದಾರೆ. ಹಾಗಾಗಿ ಚುನಾವಣೆಯಲ್ಲಿ ಆಸೆ ಆಮಿಷಗಳಿಗೆ ಬಲಿಯಾಗದೆ ಬಿಜೆಪಿಗೆ ಮತಚಲಾಯಿಸಿ ಬಹುಮತಗಳಿಂದ ಗೆಲ್ಲಿಸಿ ಎಂದು ಗೋವಿಂದ ಕಾರಜೋಳ ಜನತೆಯಲ್ಲಿ ವಿನಂತಿಸಿದ ಮಾಜಿ ಶಾಸಕ ತಿಪ್ಪಾರೆಡ್ಡಿ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರದಲ್ಲಿ ಗೋವಿಂದ ಕಾರಜೋಳ ಅವರು ಮಂತ್ರಿಯಾಗಿ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಲೋಕೋಪಯೋಗಿ, ಸಮಾಜ ಕಲ್ಯಾಣ, ನೀರಾವರಿ ಹೀಗೆ ಹತ್ತು ಹಲವಾರು ಖಾತೆಗಳಲ್ಲಿದ್ದಾಗ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೈಗೊಂಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಐದು ಸಾವಿರದ ಮುನ್ನೂರು ಕೋಟಿ ರು. ಅನುದಾನ ಕಾಯ್ದಿರಿಸುವಲ್ಲಿ ಇವರ ಪಾತ್ರ ಸಾಕಷ್ಟಿದೆ ಎಂದರು.ಜಗತ್ತಿನಲ್ಲಿ ಮೋದಿ ನಂ.1 ಪ್ರಧಾನಿ ಎನಿಸಿಕೊಂಡಿದ್ದಾರೆ. ಉಕ್ರೇನ್-ರಷ್ಯಾ ನಡುವೆ ಯುದ್ಧ ನಡೆದಾಗ ದೇಶದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತಂದ ಕೀರ್ತಿ ನರೇಂದ್ರ ಮೋದಿಗೆ ಸಲ್ಲುತ್ತದೆ. ಹಾಗಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಗೋವಿಂದ ಕಾರಜೋಳ ಅವರನ್ನು ಅತ್ಯಧಿಕ ಮತಗಳ ಅಂತರದಿದ ಗೆಲ್ಲಿಸುವಂತೆ ಜನತೆಯಲ್ಲಿ ಮನವಿ ಮಾಡಿದರು.

ಶಕ್ತಿ ಕೇಂದ್ರದ ಚುನಾವಣಾ ಉಸ್ತುವಾರಿ ಡಾ.ಸಿದ್ಧಾರ್ಥ, ಬಿಜೆಪಿ ನಗರಾಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ವಕ್ತಾರ ನಾಗರಾಜ್‍ ಬೇದ್ರೆ, ಮಹಿಳಾ ಮೋರ್ಚಾದ ಕವನ, ಪೂರ್ಣಿಮ, ದಿಶಾ, ಧನಂಜಯ, ಕೃಷ್ಣ ಸೇರಿದಂತೆ ಇತರೆ ಪದಾಧಿಕಾರಿಗಳು ಮತಯಾಚನೆಯಲ್ಲಿ ಪಾಲ್ಗೊಂಡಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ