ನನ್ನನ್ನು ಗೆಲ್ಲಿಸಿದರೆ ಮೋದಿ ಜತೆ ಕೆಲಸ ಮಾಡುವೆ; ಶ್ರೀರಾಮುಲು

KannadaprabhaNewsNetwork |  
Published : Mar 30, 2024, 12:52 AM ISTUpdated : Mar 30, 2024, 12:21 PM IST
456 | Kannada Prabha

ಸಾರಾಂಶ

ಸಿಎಂ ಸಿದ್ದರಾಮಯ್ಯನವರ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ನನ್ನನ್ನು ಲೋಕಸಭೆ ಚುನಾವಣೆಯಲ್ಲಿ ಆಯ್ಕೆ ಮಾಡಿ ಕಳುಹಿಸದರೆ, ನರೇಂದ್ರ ಮೋದಿ ಜೊತೆ ಕೈಜೋಡಿಸಿ ದುಡಿಯುತ್ತೇನೆ.

ಹಗರಿಬೊಮ್ಮನಹಳ್ಳಿ: ಜನಪರ ಆಡಳಿತ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ ಎಂದು ಬಳ್ಳಾರಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ತಿಳಿಸಿದರು.ತಾಲೂಕಿನ ಸೊನ್ನ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.ಸಿಎಂ ಸಿದ್ದರಾಮಯ್ಯನವರ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ನನ್ನನ್ನು ಲೋಕಸಭೆ ಚುನಾವಣೆಯಲ್ಲಿ ಆಯ್ಕೆ ಮಾಡಿ ಕಳುಹಿಸದರೆ, ನರೇಂದ್ರ ಮೋದಿ ಜೊತೆ ಕೈಜೋಡಿಸಿ ದುಡಿಯುತ್ತೇನೆ ಎಂದರು.ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಮಾಜಿ ಅಧ್ಯಕ್ಷ ಮುಟುಗನಹಳ್ಳಿ ಕೊಟ್ರೇಶ್ ಮಾತನಾಡಿ, ದೇಶದ ಅಭಿವೃದ್ಧಿಗೆ ಪೂರಕವಾಗಿ ಬಿಜೆಪಿಗೆ ಮತ ನೀಡಿದರೆ ಸಾರ್ಥಕವಾಗಲಿದೆ. ಬಿಜೆಪಿ ಪಕ್ಷ ಹಿಂದುಳಿದ ವರ್ಗಗಳಿಗೆ ವಿಶೇಷ ಆಧ್ಯತೆ ನೀಡುತ್ತದೆ ಎಂದು ತಿಳಿಸಿದರು.ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸನಗೌಡ ಪಾಟೀಲ್ ಮಾತನಾಡಿ, ವ್ಯಾಪಕವಾಗಿ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೂ ಕೂಡ ಸರ್ಕಾರ ಗಾಢ ನಿದ್ರೆಗೆ ಜಾರಿದೆ. ಗ್ಯಾರಂಟಿಗಳ ನಿರ್ವಹಣೆಯಲ್ಲಿ ಅಭಿವೃದ್ಧಿ ಸಂಪೂರ್ಣ ಮರೆತಿದೆ. ಶ್ರೀರಾಮುಲು ಅವರನ್ನು ಸಂಸದರನ್ನಾಗಿ ಆಯ್ಕೆ ಮಾಡಿ ಕಳುಹಿಸಿದರೆ ನರೇಂದ್ರ ಮೋದಿಯವರ ಕೈಬಲಪಡಿಸಿದಂತಾಗುತ್ತದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಹೂವಿನಹಡಗಲಿ ಶಾಸಕ ಕೃಷ್ಣನಾಯ್ಕ, ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಎಸ್ಟಿ ಮೋರ್ಚಾ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರಿ ಹನುಮಂತು, ಜಿಪಂ ಮಾಜಿ ಸದಸ್ಯ ಬೋರ್‌ವೆಲ್ ಗುರುಸಿದ್ದಪ್ಪ, ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂಜೀವರೆಡ್ಡಿ, ಮುಖಂಡರಾದ ಕೊಟ್ರಗೌಡ, ವೀರಯ್ಯ, ಕೊಟ್ರೇಶನಾಯ್ಕ, ಹಂಪಸಾಗರ ವೆಂಕಟೇಶ, ದೊಡ್ಡಬಸಪ್ಪ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ