ಕನ್ನಡಪ್ರಭ ವಾರ್ತೆ ಸಿಂದಗಿ
ಪಟ್ಟಣದ ತಾಪಂ ಸಭಾಭವನದಲ್ಲಿ ಬುಧವಾರ ಸಾರ್ವಜನಿಕ ಅಹವಾಲು ಸ್ವೀಕಾರ ಹಾಗೂ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿಕ್ಷಣ ಇಲಾಖೆ, ಸಿಡಿಪಿಒ ಮತ್ತು ಸಮಾಜ ಕಲ್ಯಾಣ ಇಲಾಖೆ ಶಾಲಾ ಮಕ್ಕಳಿಗೆ ಶೌಚಾಲಯದ ಬಗ್ಗೆ ಮತ್ತು ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು. ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಗುಡ್ ಟಚ್ ಮತ್ತು ಬ್ಯಾಡ್ ಟಚ್ ಬಗ್ಗೆ ನುರಿತ ತಜ್ಞರಿಂದ ಅರಿವು ಮೂಡಿಸುವ ಕಾರ್ಯವಾಗಬೇಕು. ಡೆಂಘೀ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಈ ಮೂರು ತಾಲೂಕಿನಲ್ಲಿ ಬಹುತೇಕ ವಸತಿ ನಿಲಯದಲ್ಲಿ ನಿತ್ಯ ಸಮಸ್ಯೆಗಳನ್ನು ಮಕ್ಕಳು ಎದುರಿಸುತ್ತಿದ್ದಾರೆ. ಇಲ್ಲಿಯವರೆಗೂ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದರಿಂದ ಸಮಸ್ಯೆ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಸಮಸ್ಯೆಗಳು ಎದ್ದು ಕಂಡಲ್ಲಿ ನಾವೇ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದರು.ತಾಲೂಕುಗಳಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಅದರಲ್ಲಿ ಕೆಲವು ಆಡಳಿತಾತ್ಮಕ ತೊಂದರೆಗಳಿದ್ದರೆ ಅವುಗಳನ್ನು ಹೊರತುಪಡಿಸಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತಾಗಬೇಕು ಎಂದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಕಾರ್ಯಚಟುವಟಿಕೆಗಳ ಬಗ್ಗೆ ಸಮಗ್ರವಾಗಿ ಮಾಹಿತಿ ನೀಡಿದರು. ಅಹವಾಲು ಸ್ವೀಕಾರ:
ಅದರಲ್ಲಿ ಸುಮಾರು 5 ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಿದ ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶ ಮಾತನಾಡಿ, ಸಾರ್ವಜನಿಕರಿಗಾಗಿ ನಾವು ದುಡಿಯುತ್ತೇವೆ. ಅಧಿಕಾರಿಗಳು ಯಾವುದೇ ರೀತಿಯಲ್ಲಿ ಸಾರ್ವಜನಿಕರಿಗೆ ತೊಂದರೆ ಮಾಡುವುದು ಸರಿಯಲ್ಲ. ಗಂಭೀರ ಪ್ರಕರಣಗಳಿದ್ದರೆ ಅವುಗಳಿಗೆ ಸಮಯ ನೀಡಿ ಪರಿಹಾರ ನೀಡಲು ಮುಂದಾಗಬೇಕು. ಜನ ಸೇವೆಯೇ ಜನಾರ್ಧನ ಸೇವೆ ಎಂಬ ಭಾವದಿಂದ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.
-------
ಸಾರ್ವಜನಿಕರಿಗಾಗಿ ನಾವು ದುಡಿಯುತ್ತೇವೆ. ಅಧಿಕಾರಿಗಳು ಯಾವುದೇ ರೀತಿಯಲ್ಲಿ ಸಾರ್ವಜನಿಕರಿಗೆ ತೊಂದರೆ ಮಾಡುವುದು ಸರಿಯಲ್ಲ. ಗಂಭೀರ ಪ್ರಕರಣಗಳಿದ್ದರೆ ಅವುಗಳಿಗೆ ಸಮಯ ನೀಡಿ ಪರಿಹಾರಕ್ಕೆ ಮುಂದಾಗಬೇಕು. ಜನ ಸೇವೆಯೇ ಜನಾರ್ಧನನ ಸೇವೆ ಎಂಬ ಭಾವದಿಂದ ಅಧಿಕಾರಿಗಳು ಕೆಲಸ ಮಾಡಬೇಕು.