ಪತ್ರಕರ್ತರು ಒಗ್ಗಟ್ಟಾದರೆ ಕ್ಷೇತ್ರದ ಸುಧಾರಣೆ

KannadaprabhaNewsNetwork | Published : Mar 12, 2025 12:47 AM

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಪತ್ರಕರ್ತರು ಜವಾಬ್ಧಾರಿಯುತವಾಗಿ ಕೆಲಸ ಮಾಡಬೇಕು. ಕೆಲ ಪತ್ರಕರ್ತರಿಂದ ಇಡೀ ಪತ್ರಕರ್ತರ ಸಮೂಹಕ್ಕೆ ಕಪ್ಪು ಚುಕ್ಕೆ ತಗಲುತ್ತಿದೆ. ಇದನ್ನು ನಿವಾರಿಸಲು ಪತ್ರಕರ್ತರ ಸಂಘಟನೆಗಳು ಕೆಲಸ ಮಾಡಬೇಕು ಎಂದು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಹೇಳಿದ್ದಾರೆ. ಅವರು ಹೇಳಿದ್ದರ ಬಗ್ಗೆ ನಾವೆಲ್ಲರೂ ಗಂಭೀರವಾಗಿ ಚಿಂತಿಸಬೇಕಾದ ಅಗತ್ಯವಿದೆ ಎಂದು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ, ಹಿರಿಯ ಪತ್ರಕರ್ತ ರಫೀ ಭಂಡಾರಿ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಪತ್ರಕರ್ತರು ಜವಾಬ್ಧಾರಿಯುತವಾಗಿ ಕೆಲಸ ಮಾಡಬೇಕು. ಕೆಲ ಪತ್ರಕರ್ತರಿಂದ ಇಡೀ ಪತ್ರಕರ್ತರ ಸಮೂಹಕ್ಕೆ ಕಪ್ಪು ಚುಕ್ಕೆ ತಗಲುತ್ತಿದೆ. ಇದನ್ನು ನಿವಾರಿಸಲು ಪತ್ರಕರ್ತರ ಸಂಘಟನೆಗಳು ಕೆಲಸ ಮಾಡಬೇಕು ಎಂದು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಹೇಳಿದ್ದಾರೆ. ಅವರು ಹೇಳಿದ್ದರ ಬಗ್ಗೆ ನಾವೆಲ್ಲರೂ ಗಂಭೀರವಾಗಿ ಚಿಂತಿಸಬೇಕಾದ ಅಗತ್ಯವಿದೆ ಎಂದು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ, ಹಿರಿಯ ಪತ್ರಕರ್ತ ರಫೀ ಭಂಡಾರಿ ಹೇಳಿದರು.

ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕೆಯುಡಬ್ಲುಜೆ ವತಿಯಿಂದ ಏರ್ಪಡಿಸಿದ್ದ ಸಾಧಕರಿಗೆ ಅಭಿನಂದನಾ ಸಮಾರಂಭ, ಕಾನಿಪ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ ಉದ್ಘಾಟಿಸಿ ಮಾತನಾಡಿದರು. ಕಾರ್ಯನಿತರ ಪತ್ರಕರ್ತರು ಕ್ರಿಯಾಶೀಲರಾಗಬೇಕು. ವೃತ್ತಿ ಮೌಲ್ಯ ಕಾಪಾಡಲು ಮುಂದಾಗಬೇಕು. ಪತ್ರಕರ್ತರಲ್ಲದವರೂ ಪತ್ರಕರ್ತರೆಂದು ಹೇಳಿಕೊಳ್ಳುತ್ತಿರುವುದು, ಇವರಿಗೆ ಕೆಲವರು ಪ್ರೋತ್ಸಾಹ ನೀಡುವುದು ನಿಲ್ಲಬೇಕು. ಎಲ್ಲರೂ ಒಗ್ಗಟ್ಟಿನಿಂದ ಇದ್ದರೆ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸುಧಾರಣೆ ತರುವುದು ಸಾಧ್ಯ ಎಂದು ಅಭಿಪ್ರಾಯಪಟ್ಟರು.ಹಿರಿಯ ಪತ್ರಕರ್ತ ಸುಶೀಲೇಂದ್ರ ನಾಯಕ, ಐಎಫ್‌ಡಬ್ಲುಜೆ ರಾಷ್ಟ್ರೀಯ ಸಮಿತಿ ಸದಸ್ಯ ಮಹೇಶ ಶಟಗಾರ, ಪತ್ರಕರ್ತರಾದ ಶಶಿಕಾಂತ ಮೆಂಡೆಗಾರ, ಇರ್ಫಾನ್ ಶೇಖ್, ಅಧ್ಯಕ್ಷತೆ ವಹಿಸಿದ್ದ ಸಂಘದ ಹಂಗಾಮಿ ಅಧ್ಯಕ್ಷ ಪ್ರಕಾಶ ಬೆಣ್ಣೂರ ಇನ್ನಿತರರು ಮಾತನಾಡಿದರು.

ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಸುಶಿಲೇಂದ್ರ ನಾಯಕ, ಮಹೇಶ ಶಟಗಾರ, ಕೆಯುಡಬ್ಲುಜೆ ಪ್ರಶಸ್ತಿ ಪುರಸ್ಕೃತರಾದ ಶಶಿಕಾಂತ ಮೆಂಡೆಗಾರ, ಅಲ್ಲಮಪ್ರಭು ಮಲ್ಲಿಕಾರ್ಜುನಮಠ, ರಾಣಿ ಚನ್ನಮ್ಮ ವಿವಿಯ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡ ರಫೀ ಭಂಡಾರಿ, ಕಾರ್ಯನಿರತ ಸಂಪಾದಕರ ಸಂಘದ ನೂತನ ಜಿಲ್ಲಾ ಅಧ್ಯಕ್ಷ ಇರ್ಫಾನ್ ಶೇಖ್ ಅವರಿಗೆ ಅಭಿನಂದನಾ ಪತ್ರ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಇದೇ ವೇಳೆ ಧರ್ಮರಾಯ ಮಮದಾಪುರ ಸ್ನೇಹಿತರ ಬಳಗದಿಂದ ಮಹೇಶ ಶಟಗಾರ ಅವರನ್ನು ಪ್ರತ್ಯೇಕವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ್ ಕುಲಕರ್ಣಿ, ಕಾರ್ಯದರ್ಶಿ ಅವಿನಾಶ ಬಿದರಿ, ರಾಜ್ಯ ಕಾರ್ಯಕಾರಿ ನಾಮನಿರ್ದೇಶಿತ ಸದಸ್ಯ ಕೆ.ಕೆ.ಕುಲಕರ್ಣಿ, ರಾಜ್ಯ ಸಮಿತಿ ವಿಶೇಷ ಆಹ್ವಾನಿತರಾದ ಕೌಶಲ್ಯ ಪನಾಳಕರ, ಖಜಾಂಚಿ ರಾಹುಲ್ ಆಪ್ಟೆ ಇನ್ನಿತರರು ವೇದಿಕೆಯಲ್ಲಿದ್ದರು. ಬಾಬುರಾವ್ ಕುಲಕರ್ಣಿ ಪ್ರಾರ್ಥಿಸಿದರು. ಸಂಘದ ಉಪಾಧ್ಯಕ್ಷ ಇಂದುಶೇಖರ ಮಣೂರ ಸ್ವಾಗತಿಸಿದರು. ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ.ಬಿ.ವಡವಡಗಿ ವರದಿ ವಾಚಿಸಿದರು. ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಬಸವರಾಜ ಉಳ್ಳಾಗಡ್ಡಿ ವಂದಿಸಿದರು.

ವಿಜಯಪುರ ನಗರ ಸೇರಿ ಜಿಲ್ಲೆಯ ಎಲ್ಲ ತಾಲೂಕು ಘಟಕಗಳ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.

Share this article