ಕನ್ನಡಪ್ರಭ ವಾರ್ತೆ ಅರಸೀಕೆರೆ
2023ರಿಂದಲೂ ಕುಮಾರಸ್ವಾಮಿ ಅವರು ವಿವಿಧ ವಿಚಾರಗಳ ಕುರಿತು ಹಲವು ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ. ಪೆನ್‌ಡ್ರೈವ್ ಸೇರಿದಂತೆ ಹಲವು ವಿಚಾರಗಳಲ್ಲಿ ಅವರು ನೀಡಿದ್ದ ಹೇಳಿಕೆಗಳ ಪೈಕಿ ಎಷ್ಟು ಪರಿಣಾಮ ಬೀರಿವೆ ಎಂಬುದನ್ನು ಪರಿಶೀಲಿಸಬೇಕಿದೆ ಎಂದು ಚಲುವರಾಯಸ್ವಾಮಿ ಹೇಳಿದರು. ದೇಶವೇ ಅಲ್ಲೋಲಕಲ್ಲೋಲವಾಗಲಿದೆ, ಸರ್ಕಾರವೇ ಅಲುಗಾಡಲಿದೆ ಎನ್ನುವಷ್ಟು ಮಹತ್ವದ ದಾಖಲೆಗಳು ತಮ್ಮ ಬಳಿ ಇದ್ದರೆ, ಅವುಗಳನ್ನು ಬಿಡುಗಡೆ ಮಾಡುವುದಕ್ಕೆ ಯಾರೂ ತಡೆಯೊಡ್ಡಿಲ್ಲ. ಅಂತಹ ದಾಖಲೆಗಳಿದ್ದ ಸಂದರ್ಭದಲ್ಲಿ ವಿದೇಶ ಪ್ರವಾಸ ಕೈಗೊಳ್ಳುವ ಬದಲು ಅವುಗಳನ್ನು ಇಲ್ಲಿಂದಲೇ ಬಿಡುಗಡೆ ಮಾಡಿ ಮಾತನಾಡಬಹುದಿತ್ತಲ್ಲವೇ ಎಂದು ಪ್ರಶ್ನಿಸಿದರು.ಕುಮಾರಸ್ವಾಮಿ ಅವರು ವಿದೇಶ ಪ್ರವಾಸಕ್ಕೆ ತೆರಳಿರುವ ಸಂದರ್ಭದಲ್ಲೇ ಇಂತಹ ಹೇಳಿಕೆ ನೀಡಿರುವುದರ ಹಿಂದಿನ ಕಾರಣವೇನು ಎಂಬುದನ್ನು ಅವರ ರಾಜಕೀಯ ಇತಿಹಾಸ ಗಮನಿಸಿದರೆ ಅರ್ಥವಾಗಲಿದೆ ಎಂದು ಸಚಿವರು ಹೇಳಿದರು. ಪದೇಪದೇ ಇದೇ ವಿಚಾರವನ್ನು ಕೇಳುವುದರಿಂದ ತಮಗೂ ಮುಜುಗರವಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.''''''''ದಾಖಲೆ ಬಿಡುಗಡೆಗೆ ಯಾರ ತಡೆ?’
ಕುಮಾರಸ್ವಾಮಿ ಅವರ ಬಳಿ ದಾಖಲೆಗಳಿದ್ದರೆ ಅವುಗಳನ್ನು ಬಿಡುಗಡೆ ಮಾಡಲು ಯಾರೂ ಅಡ್ಡಿಪಡಿಸುತ್ತಿಲ್ಲ. ದಾಖಲೆಗಳನ್ನು ಬಿಡುಗಡೆ ಮಾಡಬಾರದು ಎಂದು ಸರ್ಕಾರವಾಗಲಿ, ನ್ಯಾಯಾಲಯವಾಗಲಿ ಯಾವುದೇ ತಡೆಯಾಜ್ಞೆ ನೀಡಿಲ್ಲ. ಹಾಗಿದ್ದರೆ ದಾಖಲೆಗಳನ್ನು ಬಿಡುಗಡೆ ಮಾಡದೇ ಇರುವುದಕ್ಕೆ ಕಾರಣವೇನು ಎಂದು ಚಲುವರಾಯಸ್ವಾಮಿ ಸರಣಿ ಪ್ರಶ್ನೆಗಳನ್ನು ಹಾಕಿದರು.ಮಾಧ್ಯಮದವರು ಯಾರ ಪರವಾಗಿಯೂ ಇರಬೇಕು ಎಂದು ತಾವು ಎಂದಿಗೂ ಹೇಳುವುದಿಲ್ಲ. ಆದರೆ ತಮ್ಮ ವಿಚಾರಗಳಿಗೂ ಮಾಧ್ಯಮದಲ್ಲಿ ಅವಕಾಶ ನೀಡಬೇಕು ಎಂದು ಮನವಿ ಮಾಡಿದ ಅವರು, ಕುಮಾರಸ್ವಾಮಿ ಅವರ ಹೇಳಿಕೆಗಳಿಗೆ ನೀಡುವಷ್ಟೇ ಗಮನವನ್ನು ಇತರರ ಹೇಳಿಕೆಗಳಿಗೂ ನೀಡಬೇಕು ಎಂದರು. ಇದೇ ವಿಚಾರವನ್ನು ಪದೇಪದೇ ಪ್ರಶ್ನಿಸಬಾರದು ಎಂದು ಮಾಧ್ಯಮದವರಿಗೆ ಕೈಮುಗಿದು ಮನವಿ ಮಾಡಿದ ಸಚಿವರು, ‘‘ಈ ವಿಚಾರವನ್ನು ಮತ್ತೆ ಮತ್ತೆ ರಿಪೀಟ್ ಮಾಡಬೇಡಿ’’ ಎಂದು ಹೇಳಿದರು.ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಸೂಚನೆ:
==ಬಾಕ್ಸ್:::: ನೂರು ದಿನದಲ್ಲಿ ತುಮಕೂರಿಗೆ ಎತ್ತಿನಹೊಳೆ ನೀರು: ಶಿವಲಿಂಗೇಗೌಡ
ತಾಲೂಕಿನ ತಳಲುತೊರೆಯಲ್ಲಿ ಎತ್ತಿನಹೊಳೆ ಯೋಜನೆಯ ಗುರುತ್ವ ಕಾಲುವೆ ಪ್ಯಾಕೇಜ್-8ರ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಅವರು, ಯೋಜನೆ ಪೂರ್ಣಗೊಂಡ ಬಳಿಕ ಅರಸೀಕೆರೆ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಿಗೂ ಕುಡಿಯುವ ನೀರಿನ ಲಭ್ಯತೆ ಹೆಚ್ಚಾಗಲಿದೆ. ಕೆರೆಗಳು ತುಂಬುವುದರಿಂದ ಅಂತರ್ಜಲ ಮಟ್ಟವೂ ಸುಧಾರಿಸಲಿದ್ದು, ಕೊಳವೆಬಾವಿಗಳಲ್ಲಿ ನೀರು ದೊರೆಯುವ ನಿರೀಕ್ಷೆಯಿದೆ ಎಂದರು. ಯೋಜನೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ನದಿ ನೀರು ಹರಿಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಹಂತದಲ್ಲೂ ಕಾಮಗಾರಿ ವಿಳಂಬವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಫೊಟೋ: