ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, 2013 ಮತ್ತು 2018ರ ಅವಧಿಯಲ್ಲಿ ಮುಖಂಡರ ಸಹಕಾರದಿಂದ ಎರಡು ಬಾರಿ ನಮ್ಮುಲ್ ನಿರ್ದೇಶಕರಾಗುವ ಜೊತೆಗೆ ಒಂದು ಭಾರಿ ಕೆಎಂಎಫ್ ನಿರ್ದೇಶಕರಾಗಿ ಆಯ್ಕೆ ಮಾಡಲಾಯಿತು ಎಂದರು.
ನನ್ನ ಅಧಿಕಾರದ ಅವಧಿಯಲ್ಲಿ ರೈತರಿಗಾಗಿ ನಿರಂತರವಾಗಿ ದುಡಿದಿದ್ದೇನೆ. ಮೊದಲ ಬಾರಿ ನಿರ್ದೇಶಕರಾಗಿ ಆಯ್ಕೆಯಾದಾಗ ತಾಲೂಕಿನಲ್ಲಿ 105 ಹಾಲು ಉತ್ಪಾದಕರ ಸಹಕಾರ ಸಂಘಗಳು ಮಾತ್ರ ಇದ್ದವು. ನನ್ನ ಪರಿಶ್ರಮದಿಂದ 155 ಸಂಘಗಳನ್ನಾಗಿ ಮಾಡಲು ಶ್ರಮಿಸಿದ್ದೇನೆ ಎಂದರು.ತಾಲೂಕಿನ ಸಹಕಾರ ಸಂಘಗಳಿಗೆ ಕೆಟ್ಟ ಹೆಸರು ಬಾರದಂತೆ ಪ್ರಾಮಾಣಿಕವಾಗಿ ದುಡಿದಿದ್ದೇನೆ. ನಾಯಕರು ಹಾಗೂ ರೈತರ ಗೌರವವನ್ನು ಹೆಚ್ಚಿಸುವ ರೀತಿಯಲ್ಲಿ ಕೆಲಸ ನಿರ್ವಹಿಸಿದ್ದೇನೆ. ಫೆ.2ರಂದು ಐದು ವರ್ಷದ ಅವಧಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠರು ಸ್ಪರ್ಧಿಸಲು ಅವಕಾಶ ನೀಡಿದರೇ ಗೆದ್ದು ಮತ್ತಷ್ಟು ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇನೆ ಎಂದರು.
ಮಾಜಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿ, ಫೆ.2ರಂದು ನಡೆಯುತ್ತಿರುವ ಮನ್ಮುಲ್ ಚುನಾವಣೆಯಲ್ಲಿ ಮಳವಳ್ಳಿ ತಾಲೂಕಿನಿಂದ ಸ್ಪರ್ಧೆ ಮಾಡುವ ಅಭ್ಯರ್ಥಿಯನ್ನು ಜೆಡಿಎಸ್ ವರಿಷ್ಠರು ಘೋಷಣೆ ಮಾಡಲಿದ್ದಾರೆ. ಯಾರೇ ಅಭ್ಯರ್ಥಿಯಾದರೂ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕೆಂದರು.
ಸಭೆಯಲ್ಲಿ ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ, ಉಪಾಧ್ಯಕ್ಷ ಬಸವರಾಜು, ಸದಸ್ಯರಾದ ನಂದಕುಮಾರ್, ಸಿದ್ದರಾಜು, ಪ್ರಶಾಂತ್, ಮುಖಂಡರಾದ ಹನುಮಂತು ಸಿದ್ದಚಾರಿ, ನಾಗರಾಜು, ಮೇಹಬೂಬ್‌ಪಾಷ ಸೇರಿದಂತೆ ಇತರರು ಇದ್ದರು.