ಮಾನಸಿಕ ಆರೋಗ್ಯ ಕಾಪಾಡಿಕೊಂಡರೆ ಎಲ್ಲ ಕೆಲಸಗಳು ಸುಸೂತ್ರ: ಸಂತೋಷ್ ಕುಮಾರ್

KannadaprabhaNewsNetwork |  
Published : Oct 18, 2024, 01:22 AM IST
ಕ್ಯಾಪ್ಷನಃ16ಕೆಡಿವಿಜಿ37ಃದಾವಣಗೆರೆಯಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಸಂತೋಷಕುಮಾರ ಉದ್ಘಾಟಿಸಿದರು. | Kannada Prabha

ಸಾರಾಂಶ

ಪ್ರಸ್ತುತ ಎಲ್ಲ ಕಾರ್ಯ ಕ್ಷೇತ್ರಗಳಲ್ಲಿ ದುಡಿಯುವ ಜನರಿಗೆ ಮಾನಸಿಕ ಆರೋಗ್ಯ ಪ್ರಮುಖವಾಗಿದೆ. ವ್ಯಕ್ತಿ ಮಾನಸಿಕವಾಗಿ ಆರೋಗ್ಯವಾಗಿದ್ದರೆ ಮಾತ್ರ ಕಾರ್ಯಕ್ಷೇತ್ರದಲ್ಲಿನ ಕಾರ್ಯವೈಖರಿಗಳು ಉನ್ನತಮಟ್ಟದಲ್ಲಿ ಇರಬಲ್ಲವು ಎಂದು ಮಾನಸಿಕ ಆರೋಗ್ಯ ಕಾರ್ಯಕ್ರಮದ ಸೈಕಿಯಾಟ್ರಿಕ್ ಸೋಶಿಯಲ್ ವರ್ಕರ್ ಸಂತೋಷ್ ಕುಮಾರ್ ದಾವಣಗೆರೆಯಲ್ಲಿ ಹೇಳಿದ್ದಾರೆ.

- ತುರ್ಚಘಟ್ಟದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ - - - ದಾವಣಗೆರೆ: ಪ್ರಸ್ತುತ ಎಲ್ಲ ಕಾರ್ಯ ಕ್ಷೇತ್ರಗಳಲ್ಲಿ ದುಡಿಯುವ ಜನರಿಗೆ ಮಾನಸಿಕ ಆರೋಗ್ಯ ಪ್ರಮುಖವಾಗಿದೆ. ವ್ಯಕ್ತಿ ಮಾನಸಿಕವಾಗಿ ಆರೋಗ್ಯವಾಗಿದ್ದರೆ ಮಾತ್ರ ಕಾರ್ಯಕ್ಷೇತ್ರದಲ್ಲಿನ ಕಾರ್ಯವೈಖರಿಗಳು ಉನ್ನತಮಟ್ಟದಲ್ಲಿ ಇರಬಲ್ಲವು ಎಂದು ಮಾನಸಿಕ ಆರೋಗ್ಯ ಕಾರ್ಯಕ್ರಮದ ಸೈಕಿಯಾಟ್ರಿಕ್ ಸೋಶಿಯಲ್ ವರ್ಕರ್ ಸಂತೋಷ್ ಕುಮಾರ್ ಹೇಳಿದರು.

ಇಲ್ಲಿಗೆ ಸಮೀಪದ ತುರ್ಚಘಟ್ಟ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರ ಆಶ್ರಯದಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿಗೆ ಬಹುತೇಕ ಕಾರ್ಯ ಕ್ಷೇತ್ರಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ. ಸಕಾರಾತ್ಮಕ ಚಿಂತನೆಯಿಂದ ಮಾನಸಿಕ ಆರೋಗ್ಯ ವ್ಯದ್ಧಿಸುವುದು. ಯಾರಲ್ಲಾದರೂ ಮಾನಸಿಕ ಕಿರಿಕಿರಿ, ವ್ಯಥೆ, ಚಿಂತೆ, ಆತ್ಮಹತ್ಯೆ ಯೋಚನೆ ಇನ್ನಿತರ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಟೆಲಿಮನಸ್ 14416 ಗೆ ಕರೆ ಮಾಡಿ ಆಪ್ತ ಸಮಾಲೋಚನೆ ಪಡೆದು, ಭವಿಷ್ಯ ಉಜ್ವಲಗೊಳಿಸಿಕೊಳ್ಳಲು ಪ್ರಯತ್ನಿಸಬೇಕಿದೆ ಎಂದರು.

ನಿರಾಶ್ರಿತರ ಕೇಂದ್ರದ ಅಧೀಕ್ಷಕ ಕಾಶಿನಾಥ್ ಅಧ್ಯಕ್ಷತೆ ವಹಿಸಿ, ಮಾನಸಿಕ ಆರೋಗ್ಯ ವೃದ್ಧಿಗೆ ಸಕಾರಾತ್ಮಕ ಯೋಚನೆ ಮಾಡುವುದು ರೂಢಿಸಿಕೊಳ್ಳಬೇಕು. ಪ್ರತಿನಿತ್ಯ ಯೋಗ, ಧ್ಯಾನ, ಮನರಂಜನೆ, ದೈನಂದಿನ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು. ಇದರಿಂದ ಮಾನಸಿಕ ಆರೋಗ್ಯ ವೃದ್ಧಿಸಲಿದೆ ಎಂದು ಹೇಳಿದರು.

ಈ ಸಂದರ್ಭ ಮಾನಸಿಕ ಆರೋಗ್ಯ ಕಾರ್ಯಕ್ರಮದ ನರ್ಸಿಂಗ್ ಅಧಿಕಾರಿ ಎಸ್.ನಾಗರಾಜ, ನಿರಾಶ್ರಿತರ ಕೇಂದ್ರದ ಅಣ್ಣೇಶ್, ಇನ್ನಿತರರು ಹಾಜರಿದ್ದರು.

- - - -16ಕೆಡಿವಿಜಿ37ಃ:

ದಾವಣಗೆರೆಯಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನ ಕಾರ್ಯಕ್ರಮವನ್ನು ಸಂತೋಷಕುಮಾರ ಉದ್ಘಾಟಿಸಿದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...