ನಂಜೇಗೌಡ ಗೆದ್ದರೆ ತಾವು ಮಾಲೂರಿನತ್ತ ತಲೆ ಹಾಕೋಲ್ಲ

KannadaprabhaNewsNetwork |  
Published : Jul 13, 2025, 01:18 AM IST
೧೨ಎಂಎಲ್‌ಆರ್-೩ಮಾಲೂರು ಪಟ್ಟಣದ ಮಾಲೂರು ಹೊಸೂರು ರಸ್ತೆಯ ಆರ್ ಜಿ ಕಲ್ಯಾಣ ಮಂಟಪದಲ್ಲಿ ಜನರೊಂದಿಗೆ ಜನತಾದಳ ಹಾಗೂ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಜಾತ್ಯತೀತ ಜನತಾದಳ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಚಾಲನೆ ನೀಡಿದರು. | Kannada Prabha

ಸಾರಾಂಶ

ರಾಜ್ಯದಲ್ಲಿ ಭ್ರಷ್ಟ ಶಾಸಕರು ಹೆಚ್ಚಾಗಿರೋದಕ್ಕೆ ಜನತೆ ಕಷ್ಟ ಅನುಭವಿಸುವಂತಾಗಿದೆ, ಭೂಹಗರಣ, ಡೇರಿ ನೇಮಕಾತಿಯಲ್ಲಿ ಅವ್ಯವಹಾರ, ಹೈಕೋರ್ಟ್‌ನಲ್ಲಿ ನಂಜೇಗೌಡರ ವಿರುದ್ಧ ಪ್ರಕರಣಗಳಿವೆ, ಇಲ್ಲಿನ ತಾಲೂಕು ಆಡಳಿತ ಭ್ರಷ್ಟಾಚಾರದಿಂದ ಕೂಡಿದೆ, ಭ್ರಷ್ಟ ಶಾಸಕರನ್ನು ಮಾಜಿ ಶಾಸಕರನ್ನಾಗಿ ಮಾಡಿ.

ಕನ್ನಡಪ್ರಭ ವಾರ್ತೆ ಮಾಲೂರುಇಲ್ಲಿನ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ.ನಂಜೇಗೌಡ ಜನತಾದಳದಿಂದ ಬೆಳೆದವರು, ಈಗ ಜನತಾದಳ ಎಲ್ಲಿದೆ ಎಂದು ಕೇಳುತ್ತಾರೆ, ೨೦೨೮ರ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿನ ಜನತೆ ತಕ್ಕ ಪಾಠ ಕಲಿಸಿ ಮನೆಗೆ ಕಳುಹಿಸಲಿದ್ದಾರೆ. ಒಂದು ವೇಳೆ ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಅವರೇ ಆಯ್ಕೆಯಾದರೆ ತಾವು ಮಾಲೂರಿನತ್ತ ತಲೆ ಹಾಕುವುದಿಲ್ಲ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಶಪಥ ಮಾಡಿದರು. ಇಲ್ಲಿಯ ಮಾಲೂರು- ಹೊಸೂರು ರಸ್ತೆಯ ಆರ್.ಜಿ ಕಲ್ಯಾಣ ಮಂಟಪದಲ್ಲಿ ಜನರೊಂದಿಗೆ ಜನತಾದಳ ಹಾಗೂ ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಭ್ರಷ್ಟ ಶಾಸಕರನ್ನು ಮಾಜಿ ಮಾಡಿ

ರಾಜ್ಯದಲ್ಲಿ ಇಂತಹ ಶಾಸಕರು ಹೆಚ್ಚಾಗಿರೋದಕ್ಕೆ ಜನತೆ ಕಷ್ಟ ಅನುಭವಿಸುವಂತಾಗಿದೆ, ಭೂಹಗರಣ, ಡೇರಿ ನೇಮಕಾತಿಯಲ್ಲಿ ಅವ್ಯವಹಾರ, ಹೈಕೋರ್ಟ್‌ನಲ್ಲಿ ನಂಜೇಗೌಡರ ವಿರುದ್ಧ ಪ್ರಕರಣಗಳಿವೆ, ಇಲ್ಲಿನ ತಾಲೂಕು ಆಡಳಿತ ಭ್ರಷ್ಟಾಚಾರದಿಂದ ಕೂಡಿದೆ, ಭ್ರಷ್ಟ ಶಾಸಕರನ್ನು ಮಾಜಿ ಶಾಸಕರನ್ನಾಗಿ ಮಾಡಿ ಮನೆಗೆ ಕಳುಹಿಸುವ ಕೆಲಸ ಮಾಡಬೇಕು ಎಂದರು. ಕೋವಿಡ್ ಸಂಕಷ್ಟ ಎದುರಿಸಿದ ಸಂದರ್ಭದಲ್ಲಿ ಇಲ್ಲಿನ ವಿಧಾನಸಭಾ ಕ್ಷೇತ್ರದಲ್ಲಿ ಜಿ.ಇ.ರಾಮೇಗೌಡರು ತಾಲೂಕಿನ ಜನರಿಗೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ, ಚುನಾವಣೆ ಫಲಿತಾಂಶ ಅವರಿಗೆ ಆಘಾತ, ನೋವು ಆಗಿದೆ. ಸೋಲಿನ ನೋವು ನನಗೂ ಅರ್ಥ ಆಗುತ್ತದೆ ಎಂದರು.

ಕುರ್ಚಿಗಾಗಿ ದೇಹಲಿ ಯಾತ್ರೆರಾಜ್ಯ ಸರ್ಕಾರ ಸುಳ್ಳು ಭರವಸೆ ನೀಡಿದೆ ಪ್ರಸ್ತುತ ರಾಜ್ಯದ ನಾಯಕರಿಗೆ ರುಚಿ ಉಳಿಸಿಕೊಳ್ಳುವ ಚಿಂತೆಯಾಗಿದೆ, ಒಬ್ಬರು ಸಿಎಂ ಕುರ್ಚಿಗಾಗಿ, ಇನ್ನೊಬ್ಬರು ಡಿಸಿಎಂ ಕುರ್ಚಿಗಾಗಿ, ಮತ್ತೊಬ್ಬರು ಅಧ್ಯಕ್ಷ ಸ್ಥಾನ ಉಳಿಸಿಕೊಳ್ಳಲು ದೆಹಲಿಗೆ ಹೋಗ್ತಾರೆ, ನಮ್ಮ ನಾಡಿನ ಸಂಪತ್ತನ್ನು ನಾಡಿನ ಅಭಿವೃದ್ಧಿಗೆ ಬಳಸದೆ ಗ್ಯಾರಂಟಿಯ ಸುಳ್ಳು ಭರವಸೆ ನೀಡುತ್ತಿದ್ದಾರೆ.ಇಂತಹ ಸಂದರ್ಭಗಳಲ್ಲಿ ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮ ಆರಂಭಿಸಿದ್ದೇವೆ. ಜನತಾದಳ ಹುಟ್ಟಿದ್ದೆ ಜನರಿಗಾಗಿ. ಅಧಿಕಾರ ಇರಲಿ ಇಲ್ಲದಿರಲಿ ನಾವು ಜನರ ಪರ ಮಾಜಿ ಸಿಎಂ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೊಟ್ಟ ಕಾರ್ಯಕ್ರಮಗಳು ಜನರ ಮನಸ್ಸಿನಲ್ಲಿ ಉಳಿದಿವೆ, ಕುಮಾರಣ್ಣ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಎಂಬ ಚರ್ಚೆ ಜನರಲ್ಲಿ ಆರಂಭವಾಗಿದೆ. ಜನತಾದಳ ರಾಜ್ಯದಲ್ಲಿ ಮತ್ತೊಮ್ಮೆ ಗಟ್ಟಿಗೊಳಿಸಬೇಕು ಇದಕ್ಕೆ ಕಾರ್ಯಕರ್ತರು ಶಪಥ ಮಾಡಬೇಕು ಎಂದರು.ತಾಲೂಕಿನಲ್ಲಿ ಭ್ರಷ್ಟಾಚಾರಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ, ತಾಲೂಕು ಆಡಳಿತ ಭ್ರಷ್ಟಾಚಾರದಿಂದ ಕೂಡಿದೆ ಇಲ್ಲಿನ ಸರ್ಕಾರಿ ಕಚೇರಿಗಳಲ್ಲಿ ಹಣ ನೀಡದೆ ಯಾವುದೇ ಕೆಲಸವಾಗುತ್ತಿಲ್ಲ, ಶಾಸಕರು ತಾಲೂಕಿನ ಅಭಿವೃದ್ಧಿ ಮಾಡುವುದನ್ನು ಬಿಟ್ಟು ಅಭಿವೃದ್ಧಿಯಾಗುವುದರಲ್ಲಿ ನಿರತರಾಗಿದ್ದಾರೆ ಎಂದು ಟೀಕಿಸಿದರು. ಜೆಡಿಎಸ್‌ಗೇ ಗೆಲುವು ಖಚಿತ

ಜೆಡಿಎಸ್ ಮುಖಂಡ ಜಿ.ಇ.ರಾಮೇಗೌಡ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತಗಳ ಅಂತರದಿಂದ ಸೋತಿದ್ದೇನೆ. ಕ್ಷೇತ್ರದಲ್ಲಿ ಮುಂಬರುವ ೨೦೨೮ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯೇ ಶಾಸಕರಾಗಿ ಆಯ್ಕೆಯಾಗುವುದು ಖಚಿತ, ನಿಷ್ಟಾವಂತ ಕಾರ್ಯಕರ್ತರು ಮತ್ತು ಮುಖಂಡರು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ, ಮಹಿಳಾ ಘಟಕದ ರಾಜ್ಯಾಧ್ಯಕ್ಷ ರಶ್ಮಿ ರಾಮೇಗೌಡ, ಎಂಎಲ್ಸಿ ಇಂಚರ ಗೋವಿಂದರಾಜು, ಜೆಡಿಎಸ್ ರಾಜ್ಯ ಎಸ್ಸಿ ಘಟಕದ ಅಧ್ಯಕ್ಷ ಅನ್ನದಾನಿ, ರಾಜ್ಯ ಎಸ್‌ಟಿ ಘಟಕದ ಅಧ್ಯಕ್ಷ ಮಾಜಿ ಶಾಸಕರಾದ ರಾಜವೆಂಕಟಪ್ಪ ನಾಯಕ್, ಶಾಸಕ ಸುರೇಶ್ ಗೌಡ, ಕೋಮುಲ್ ನಿರ್ದೇಶಕ ಹರೀಶ್ ಗೌಡ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷ ಗಾಯತ್ರಿ ಮುತ್ತಪ್ಪ, ರಾಜ್ಯ ಮಹಿಳಾ ಘಟಕದ ಲತಾ, ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ಕೆ.ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಹರೀಶ್, ತಾಪಂ ಮಾಜಿ ಅಧ್ಯಕ್ಷ ತ್ರಿವರ್ಣ ರವಿ ಮತ್ತಿತರರು ಇದ್ದರು.

PREV

Recommended Stories

ಕಾರ್ಮಿಕರು ಒಪ್ಪಿದ್ರೆ 10 ಗಂಟೆ ಕೆಲಸಕ್ಕೆ ಓಕೆ : ಲಾಡ್‌
‘ಸಾವಿರಾರು ಶವ ಹೂಳಲು ಧರ್ಮಸ್ಥಳ ಗ್ರಾಮದಲ್ಲಿ ಮಹಾಭಾರತ ಯುದ್ಧ ನಡೆದಿಲ್ಲ’