ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ಡಿಜಿಸಿಎ ಕಳೆದ ಬಾರಿ ಒಂದು ವರ್ಷದ ಅವಧಿಗೆ ಲೈಸೆನ್ಸ್ ನೀಡಿತ್ತು. ಈ ಅವಧಿ ಆಗಸ್ಟ್ 23ಕ್ಕೆ ಮುಕ್ತಾಯಗೊಂಡಿದೆ. ಒಂದು ವರ್ಷದ ಅವಧಿಗೆ ಲೈಸೆನ್ಸ್ ಅವಧಿ ವಿಸ್ತರಿಸಬೇಕಿದ್ದ ಡಿಜಿಸಿಎ ಈ ಬಾರಿ ಕೇವಲ 1 ತಿಂಗಳ ಅವಧಿಗೆ ಮಾತ್ರ ಲೈಸೆನ್ಸ್ ಅವಧಿ ವಿಸ್ತರಿಸಿದೆ. ಲೈಸೆನ್ಸ್ ಅವಧಿ ಪೂರ್ಣಗೊಳ್ಳುವುದಕ್ಕೆ ಇನ್ನು 20 ದಿನಗಳು ಮಾತ್ರ ಬಾಕಿ ಉಳಿದಿದೆ.
ಲೈಸೆನ್ಸ್ ನವೀಕರಣದ ವೇಳೆ ಕೆಲವು ಕಾರಣ ನೀಡಿ ಲೈಸೆನ್ಸ್ ಅವಧಿಯನ್ನು ಕೇವಲ ಒಂದು ತಿಂಗಳಿಗೆ ವಿಸ್ತರಣೆ ಮಾಡಿದೆ. ಸೆ.23ಕ್ಕೆ ಈ ಅವಧಿ ಮುಗಿಯಲಿದೆ. ವಿಮಾನ ನಿಲ್ದಾಣ ಲೈಸೆನ್ಸ್ ಈ ತಿಂಗಳ 23ಕ್ಕೆ ಕೊನೆಯಾಗುತ್ತದೆ. ಸಣ್ಣಪುಟ್ಟ ತಾಂತ್ರಿಕ ತೊಂದರೆಗಳನ್ನು ಈಗಾಗಲೇ ಸರಿ ಪಡಿಸಲಾಗಿದೆ. ನೈಟ್ ಲ್ಯಾಂಡಿಂಗ್‌ಗೂ ಅನುಮತಿ ಸಿಕ್ಕಿದೆ. ರಾಜ್ಯ ಸರ್ಕಾರ ಈ ಬಗ್ಗೆ ಗಮನಹರಿಸಬೇಕಾಗಿದೆ. ಯಾವುದೇ ವಿಮಾನ ನಿಲ್ದಾಣ ಪ್ರಾರಂಭವಾದಾಗ ಈ ರೀತಿಯ ಲೈಸೆನ್ಸ್ ನವೀಕರಣಗೊಳಿಸುವುದು ಸ್ವಾಭಾವಿಕ ಕ್ರಿಯೆಯಾಗಿದೆ ಎಂದರು.ರಾಜ್ಯ ಸರ್ಕಾರದ ಕೈಗಾರಿಕಾ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ನಿಗಮವು (ಕೆಎಸ್‌ಐಐಡಿಸಿ) ಶಿವಮೊಗ್ಗ ವಿಮಾನ ನಿಲ್ದಾಣ ವನ್ನು ನಿರ್ವಹಿಸುತ್ತಿದೆ. ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ಡಿಜಿಸಿಎ ಪರವಾನಗಿ ನೀಡುವಾಗ ಸುರಕ್ಷತೆ ಮತ್ತು ಭದ್ರತೆ ವಿಚಾರಗಳ ಬಗ್ಗೆ ಕೆಲವು ಷರತ್ತು ವಿಧಿಸಿತ್ತು. ಕೆಎಸ್‌ಐಐಡಿಸಿ ಸಂಸ್ಥೆಯು ಈ ಷರತ್ತುಗಳನ್ನು ಪೂರ್ತಿಯಾಗಿ ಪೂರೈ ಸಿಲ್ಲ. ಇದೇ ಕಾರಣಕ್ಕೆ ಈಗ ಡಿಜಿಸಿಎ ಶಿವಮೊಗ್ಗ ವಿಮಾನ ನಿಲ್ದಾಣದ ಲೈಸೆನ್ಸ್ ಅವಧಿಯನ್ನು ಕೇವಲ ಒಂದು ತಿಂಗಳಿಗೆ ನವೀಕರಿಸಿದೆ.
ವಿಮಾನ ನಿಲ್ದಾಣದ ರನ್‌ವೇ ಸುರಕ್ಷತಾ ಪ್ರದೇಶವು ಮಾನದಂಡಕ್ಕೆ ಅನುಗುಣವಾಗಿಲ್ಲ. ರಕ್ಷಣಾ ಸಾಧನಗಳ ಖರೀದಿ ವಿಳಂಬ ವಾಗಿದೆ. ಫೈರ್ ಸೇಫ್ಟಿ ನೋಡಿಕೊಳ್ಳುವ ಸಿಬ್ಬಂದಿ ಕೊರತೆ ಇದೆ. ತ್ವರಿತ ಪ್ರತಿಕ್ರಿಯೆ ತಂಡ (ಕ್ಯೂಆರ್‌ಟಿ) ಇಲ್ಲ. ಭದ್ರತಾ ಸಿಬ್ಬಂದಿ ಸಂಖ್ಯೆ ಕಡಿಮೆ ಇದೆ. ಇವುಗಳನ್ನು ಪೂರೈಸಿದರೆ ಲೈಸೆನ್ಸ್ ನವೀಕರಣ ಮಾಡಲಾಗುತ್ತದೆ ಎಂದು ಡಿಜಿಸಿಎ ತಿಳಿಸಿದೆ ಎಂದು ತಿಳಿದು ಬಂದಿದೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶಿವಮೊಗ್ಗದಲ್ಲಿ ಈಗಾಗಲೇ ಮೈಕ್ರೋ ಸಣ್ಣ ಕೈಗಾರಿಕೆಗಳ ಉದ್ಯಮ ಆರಂಭವಾಗಿದೆ. ಸುಮಾರು 21 ಸಾವಿರಕ್ಕೂ ಹೆಚ್ಚು ಸಣ್ಣ ಉದ್ಯಮಗಳಿಗೆ ಸುಮಾರು 2782 ಕೋಟಿ ರು. ಬಂಡವಾಳ ಹೂಡ ಲಾಗಿದೆ. 1.17 ಲಕ್ಷ ಜನರಿಗೆ ಉದ್ಯೋಗ ದೊರೆತಿದೆ. ಇದನ್ನು ಮತ್ತು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಎಸ್.ಐ.ಡಿ.ಬಿ.ಐ. ಬ್ಯಾಂಕ್ ಶಾಖೆಯನ್ನು ಆರಂಭಿಸಲಾಗುವುದು. ಇದರಿಂದ ಹೊಸದಾಗಿ ಉದ್ಯಮ ಪ್ರಾರಂಭಿಸುವವರಿಗೆ ಹಣಕಾಸಿನ ನೆರವು ಸುಲಭವಾಗಿ ಸಿಗುತ್ತದೆ ಎಂದರು.
ಪ್ರಮಾಣ ಮಾಡಲೂ ಸಿದ್ಧ