ಕನ್ನಡಪ್ರಭ ವಾರ್ತೆ ಹಾಸನ
ಕೆಲ ಮನೆಗಳ ಗೋಡೆಗಳನ್ನು ಕೆಡವಲಾಗಿದ್ದು, ಕೆಲವು ಮನೆಗಳನ್ನು ತೆರವುಗೊಳಿಸಲು ಯತ್ನಿಸಲಾಗಿದೆ. ಇದರಿಂದ ಕುಟುಂಬಗಳು ಆತಂಕದ ವಾತಾವರಣದಲ್ಲಿ ದಿನ ಕಳೆಯುವಂತಾಗಿದೆ ಎಂದರು. ತಾಲೂಕು ಆಡಳಿತವು ಪ್ರಭಾವಿ ವ್ಯಕ್ತಿಗಳ ಒತ್ತಡಕ್ಕೆ ಮಣಿದು ಹಕ್ಕುಪತ್ರದಾರರ ಮೇಲೆ ಅನ್ಯಾಯ ಮಾಡುತ್ತಿದೆ. ಅತಿಕ್ರಮಣಕಾರರ ವಿರುದ್ಧ ಕ್ರಮ ಕೈಗೊಳ್ಳದೇ, ಅವರಿಗೆ ಸಹಕಾರ ನೀಡುತ್ತಿರುವುದು ಅಸಂವಿಧಾನಿಕ ನಡೆ ಎಂದು ಕಿಡಿಕಾರಿದರು. ಜಾಗದ ಸರಿಯಾದ ಅಳತೆ ಹಾಗೂ ಗುರುತುಪಡಿಸುವ ಕೆಲಸ ಮಾಡದೇ, ನಿಜವಾದ ಹಕ್ಕುದಾರರನ್ನು ತೊಂದರೆಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು.
ಈ ಘಟನೆ ನಮ್ಮ ಮೂಲಭೂತ ಹಕ್ಕುಗಳ ಮೇಲಿನ ಸ್ಪಷ್ಟ ಹಲ್ಲೆಯಾಗಿದ್ದು, ಬಡ ಕುಟುಂಬಗಳನ್ನು ಅನಾಥರನ್ನಾಗಿ ಮಾಡುವ ಪ್ರಯತ್ನವಾಗಿದೆ. ತಕ್ಷಣವೇ ಸರ್ಕಾರ ಹಾಗೂ ಜಿಲ್ಲಾಡಳಿತ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಮನೆಗಳ ಧ್ವಂಸ ಕಾರ್ಯವನ್ನು ತಕ್ಷಣ ನಿಲ್ಲಿಸಲು ಆದೇಶ ನೀಡಬೇಕು, ಈಗಾಗಲೇ ಹಾನಿಗೊಳಿಸಿದ ಮನೆಗಳಿಗೆ ಸಮರ್ಪಕ ಪರಿಹಾರ ನೀಡಬೇಕು, ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಕ್ಕುಪತ್ರದ ಆಧಾರದ ಮೇಲೆ ವಾಸಸ್ಥಳವನ್ನು ರಕ್ಷಣೆ ಮಾಡಬೇಕು, ಯಾವುದೇ ಸಾರ್ವಜನಿಕ ಯೋಜನೆಗಾಗಿ ಜಾಗ ಬೇಕಾದಲ್ಲಿ ಕಾನೂನುಬದ್ಧ ಪರಿಹಾರ ಹಾಗೂ ಪುನರ್ವಸತಿ ಒದಗಿಸಬೇಕು ಎಂದು ಆಗ್ರಹಿಸಿದರು. ನಮ್ಮ ನ್ಯಾಯಯುತ ಬೇಡಿಕೆ ಈಡೇರದಿದ್ದರೇ ಕೆಲ ದಿನಗಳಲ್ಲೆ ರೈತ ಸಂಘದ ರಾಜ್ಯಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್ ಜೊತೆ ಸಭೆ ಸೇರಿ ಇಲ್ಲಿಂದ ವಿಧಾನಸೌಧದವರೆಗೂ ಪಾದಯಾತ್ರೆ ಹಮ್ಮಿಕೊಳ್ಳುವ ನಿರ್ಧಾರ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡರಾದ ಪವಿತ್ರ, ಅದರ ಅಕ್ಮಲ್ ಪಾಷಾ, ವಿಠ್ಠಲ್ ಸೇರಿದಂತೆ ಹಲವಾರು ರೈತರು ಹಾಗೂ ಮಹಿಳೆಯರು ಭಾಗವಹಿಸಿದ್ದರು.