ಕನ್ನಡಪ್ರಭ ವಾರ್ತೆ ಮದ್ದೂರು
ಮದ್ದೂರು ನಗರಸಭೆ ವ್ಯಾಪ್ತಿಗೆ ಗೆಜ್ಜಲಗೆರೆ ಸೇರಿದಂತೆ ನಾಲ್ಕು ಗ್ರಾಮ ಪಂಚಾಯ್ತಿಗಳನ್ನು ಸೇರ್ಪಡೆ ವಿರೋಧಿಸಿ ಜನಪ್ರತಿನಿಧಿಗಳು, ರೈತರು ಮತ್ತು ಗ್ರಾಮಸ್ಥರೊಂದಿಗೆ ಕಳೆದ 69 ದಿನಗಳಿಂದ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಬೆಂಬಲಿಸಿ ಪಾಲ್ಗೊಂಡು ಮಾತನಾಡಿದರು.
ಮದ್ದೂರು ನಗರಸಭೆ ವ್ಯಾಪ್ತಿಗೆ ನಾಲ್ಕು ಗ್ರಾಪಂಗಳನ್ನು ಸೇರ್ಪಡೆ ಮಾಡಿರುವುದು ಸರಿಯಾದ ಕ್ರಮವಲ್ಲ. ರಾಜ್ಯ ಸರ್ಕಾರ ಈ ಕೂಡಲೇ ನಿರ್ಧಾರದಿಂದ ವಾಪಸ್ಸು ಪಡೆದಿದ್ದರೆ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದರು.ಅನಾರೋಗ್ಯ ನಿಮಿತ್ತ ಪೂರ್ಣ ಪ್ರಮಾಣದ ಪಾದಯಾತ್ರೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಸ್ವಲ್ಪ ದೂರ ನಿಮ್ಮೊಂದಿಗೆ ಹೆಜ್ಜೆ ಹಾಕುತ್ತೇನೆ. ಪಾದಯಾತ್ರೆ ಸಂಪೂರ್ಣ ಜವಾಬ್ದಾರಿಯನ್ನು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಜವಾಬ್ದಾರಿಗೆ ವಹಿಸುತ್ತೇನೆ ಎಂದರು.
ಶಾಸಕರಾಗಿ ಮುಂದೆ ಉಳಿಯಬೇಕಾದರೆ ಇನ್ನೂ ಕಾಲ ಮಿಂಚಿಲ್ಲ. ಮತದಾರರ ಮನಸ್ಸಿಗೆ ನೋವು ಮಾಡಿದರೆ ಜನಪ್ರತಿನಿಧಿಯಾಗಲು ನೈತಿಕತೆ ಇರುವುದಿಲ್ಲ. ಮತದಾರರು ದೇವರ ಸಮಾನ ಎನ್ನುವುದನ್ನು ಅರಿತುಕೊಳ್ಳಿ. ದುರಂಕಾರ ಮನೋಭಾವ ಇದ್ದರೆ ಅದನ್ನು ಬಿಡಬೇಕು. ಇಲ್ಲವಾದರೆ ಜನರೇ ತಕ್ಕ ಪಾಠ ಕಲಿಸುವ ಮೂಲಕ ಚುನಾವಣೆಯಲ್ಲಿ ತಮ್ಮನ್ನು ಧೂಳೀಪಟ ಮಾಡುತ್ತಾರೆ ಎಂದು ಶಾಸಕ ಉದಯ್ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು.
ಗೆಜ್ಜಲಗೆರೆ ಗ್ರಾಮಕ್ಕೆ ತನ್ನದೇ ಆದ ಇತಿಹಾಸ ಇದೆ. ಈ ಗ್ರಾಮದ ಜನರು ಗೌರವ ಕೊಟ್ಟರೆ, ಗೌರವ ನೀಡಿದ ವ್ಯಕ್ತಿಯನ್ನು ಮೆರೆಸುತ್ತಾರೆ. ತಮ್ಮ ವಿರುದ್ಧ ಸೆಟೆದು ನಿಂತರೆ ಅವರಿಗೆ ತಕ್ಕ ಪಾಠ ಕಲಿಸುವುದೂ ಸಹ ಈ ಗ್ರಾಮದ ಜನರಿಗೆ ಗೊತ್ತು. ಹಿಂದಿನ ಹೋರಾಟದ ಇತಿಹಾಸಗಳನ್ನು ಗಮನಿಸಿ ನಿರ್ಧಾರ ಕೈಗೊಳ್ಳಬೇಕು. ಯಡವಟ್ಟು ಮಾಡಿಕೊಂಡರೆ ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದು ಎಚ್ಚರಿಸಿದರು.
ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಮಹಿಳಾ ಘಟಕದ ಅಧ್ಯಕ್ಷ ದಿವ್ಯ ರಾಮಚಂದ್ರಶೆಟ್ಟಿ, ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ತಾಲೂಕು ಘಟಕದ ಅಧ್ಯಕ್ಷ ಎಚ್.ಎಲ್. ತಿಮ್ಮೇಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿಳಿಯಪ್ಪ, ಮುಖಂಡರಾದ ರಾಜಣ್ಣ, ಪುರಸಭೆ ಮಾಜಿ ಸದಸ್ಯ ಮಹೇಶ್, ಸುನಂದಾ ಜಯರಾಂ ಸೇರಿದಂತೆ ಹಲವರು ಇದ್ದರು.