ಸರ್ಕಾರ ರೈತರಿಗೆ ಬೆಲೆ ಕೊಡದಿದ್ದರೆ ದೇಶದ ಅಭಿವೃದ್ಧಿ ಅಸಾಧ್ಯ

KannadaprabhaNewsNetwork |  
Published : Apr 02, 2024, 01:00 AM IST
1ಎನ್.ಆರ್.ಡಿ1 ಮಹದಾಯಿ ಹೋರಾಟ ವೇದಿಕೆಯಲ್ಲಿ ರೈತ ಮುಖಂಡ ಹನಮಂತ ಸರನಾಯ್ಕರ ಮಾತನಾಡುತ್ತಿದ್ದಾರೆ. | Kannada Prabha

ಸಾರಾಂಶ

ಸರ್ಕಾರ ದೇಶದಲ್ಲಿ ರೈತರ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶಕ್ಕೆ ಗಂಡಾಂತರ ತಪ್ಪಿದ್ದಲ್ಲ

ನರಗುಂದ: ದೇಶಕ್ಕೆ ಅನ್ನ ನೀಡುವ ರೈತನಿಗೆ ಸರ್ಕಾರಗಳು ಬೆಲೆ ನೀಡದಿದ್ದರೆ, ಈ ದೇಶ ಅಭಿವೃದ್ಧಿಯಾಗಲು ಸಾಧ್ಯವಿಲ್ಲ ಎಂದು ರೈತ ಸೇನೆ ಸದಸ್ಯ ಹನುಮಂತ ಸರನಾಯ್ಕರ ಹೇಳಿದರು.

ಅವರು 3161ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ಹೋರಾಟ ವೇದಿಕೆಯಲ್ಲಿ ಮಾತನಾಡಿ, ರೈತರು, ಕೃಷಿ ಕೂಲಿ ಕಾರ್ಮಿಕರ ಸಮುದಾಯಕ್ಕೆ ಸರ್ಕಾರಗಳು ಬೆಲೆ ನೀಡುತ್ತಿಲ್ಲ ಎಂದು ಆರೋಪಿಸಿದರು.

ಬೆಳೆಗೆ ಬೆಂಬಲ ಬೆಲೆ, ಸರಿಯಾದ ಸಮಯಕ್ಕೆ ಬೆಳೆವಿಮೆ ನೀಡುವುದು, ಕೃಷಿ ಕಾನೂನು ತಿದ್ದುಪಡಿ ವಾಪಸ್‌ ಪಡೆಯುವುದು, ರೈತರ ಸಾಲ ಮನ್ನಾ ಇನ್ನಿತರ ಬೇಡಿಕೆ ಈಡೇರಿಸಬೇಕು ಎಂದು ಪಂಜಾಬ, ಹರಿಯಾಣ, ಉತ್ತರ ಪ್ರದೇಶದ ರೈತರು ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಈ ರೈತರ ಬೇಡಿಕೆ ಈಡೇರಿಸದೇ ಅನ್ಯಾಯ ಮಾಡುತ್ತಿದೆ ಎಂದರು.

ಮಹದಾಯಿ, ಕಳಸಾ-ಬಂಡೂರಿ ಯೋಜನೆ ಜಾರಿಗಾಗಿ ರೈತರು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಹಲವು ಬಾರಿ ಸರ್ಕಾರಗಳಿಗೆ ಮನವಿ ನೀಡಲಾಗಿದೆ. ಆದರೆ ಪ್ರಯೋಜನವಾಗುತ್ತಿಲ್ಲ. ಸರ್ಕಾರ ದೇಶದಲ್ಲಿ ರೈತರ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶಕ್ಕೆ ಗಂಡಾಂತರ ತಪ್ಪಿದ್ದಲ್ಲ ಎಂದು ಎಚ್ಚರಿಕೆ ನೀಡಿದರು.

ಈಗಲೂ ಕಾಲ ಮಿಂಚಿಲ್ಲ. ದೇಶದ ನೂರಾರು ನದಿಗಳ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿವೆ. ಆ ನೀರನ್ನು ಕೃಷಿ ಕಾರ್ಯಕ್ಕೆ ಉಪಯೋಗಿಸುವ ಯೋಜನೆ ರೂಪಿಸಬೇಕು. ಬಂಡವಾಳಶಾಹಿಗಳಿಂದ ದೇಶದ ಉದ್ಧಾರವಾಗುತ್ತದೆ ಎಂದು ತಿಳಿದಿದ್ದರೆ ತಪ್ಪು. ಕೃಷಿಯಿಂದಲೇ ದೇಶದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ವೀರಭಸಪ್ಪ ಹೂಗಾರ, ಪರಶುರಾಮ ಜಂಬಗಿ, ಎಸ್.ಬಿ. ಜೋಗಣ್ಣವರ, ಸುಭಾಸ ಗಿರಿಯಣ್ಣವರ, ಸೋಮಲಿಂಗಪ್ಪ ಆಯಿಟ್ಟಿ, ಶಂಕ್ರಪ್ಪ ಜಾಧವ, ಮಲ್ಲೇಶ ಅಬ್ಬಗೇರಿ, ಯಲ್ಲಪ್ಪ ಚಲವಣ್ಣವರ, ಅನಸವ್ವ ಶಿಂದೆ, ನಾಗರತ್ನಾ ಸವಳಭಾವಿ, ವಾಸು ಚವ್ಹಾಣ, ವಿಜಯಕುಮಾರ ಹೂಗಾರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಲಕ್ಷ್ಮೀ
ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ!