ಮಾಗಡಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಹಗುರವಾಗಿ ಮಾತನಾಡುತ್ತಿದ್ದು, ರಾಮನಗರ ಜಿಲ್ಲೆಗೆ ದೇವೇಗೌಡರ ಕುಟುಂಬ ಬರದಿದ್ದರೆ ಡಿ.ಕೆ. ಸಹೋದರರು ರಾಜ್ಯಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮಾಜಿ ಶಾಸಕ ಎ.ಮಂಜುನಾಥ್ ಹೇಳಿದರು.
ಹೇಮಾವತಿ ಯೋಜನೆಯಲ್ಲೂ ನನ್ನ ಶ್ರಮವಿದೆ:
ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ಬಾಲಕೃಷ್ಣರವರು ಹೇಮಾವತಿ ವಿಚಾರವಾಗಿ ನನ್ನ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ನಾನು ಕೂಡ ಹೇಮಾವತಿ ಯೋಜನೆ ಹಿಂದೆ ಬಿದ್ದು 18 ಕಿಮೀ ಹಾಗೂ 15 ಕಿಲೋಮೀಟರ್ ಎರಡು ಭಾಗಗಳಲ್ಲಿ ಪೈಪ್‌ಲೈನ್ ಹಾಕಿಸಲು ಕಷ್ಟಪಟ್ಟಿದ್ದೇನೆ. ನೀವೇ ರೈತರನ್ನು ಎತ್ತಿಕಟ್ಟಿ ಪೈಪ್‌ಲೈನ್ ಹಾಕಿಸಲು ತೊಂದರೆ ಕೊಟ್ಟಿದ್ದೀರಾ?. ಶಾಸಕ ಬಾಲಕೃಷ್ಣ, ಸಂಸದ ಡಿ.ಕೆ.ಸುರೇಶ್ ಇಬ್ಬರೂ ಸ್ಥಳಕ್ಕೆ ಬರಲಿ, ನಾನು ಕೂಡ ಕಾಮಗಾರಿ ಎಷ್ಟು ನಡೆದಿದೆ ಎಂಬುದನ್ನು ತೋರಿಸುತ್ತೇನೆ ಎಂದು ಎ.ಮಂಜುನಾಥ್ ತಿರುಗೇಟು ನೀಡಿದರು.ಎಚ್.ಡಿ.ಕುಮಾರಸ್ವಾಮಿ ಸಿನಿಮಾ ನಿರ್ಮಾಪಕರು:
ಶಾಸಕ ಬಾಲಕೃಷ್ಣರವರು ಎಚ್.ಡಿ.ಕುಮಾರಸ್ವಾಮಿಯವರಿಗೆ ಕೋಟಿಗಟ್ಟಲೆ ಹಣ ಎಲ್ಲಿಂದ ಬರುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ, ಕುಮಾರಸ್ವಾಮಿಯವರು ರಾಜಕೀಯಕ್ಕೆ ಬರುವ ಮುನ್ನ ಸಿನಿಮಾ ವಿತರಕರು, ಸಿನಿಮಾ ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ. ಜೊತೆಗೆ ವ್ಯವಸಾಯದಲ್ಲೂ ಆದಾಯ ಗಳಿಸುತ್ತಿದ್ದು, ಅವರ ಮಗ ನಿಖಿಲ್ ಕುಮಾರಸ್ವಾಮಿ ಸಿನಿಮಾ ನಾಯಕ ನಟರಾಗಿ ಚಿತ್ರರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಎ.ಮಂಜುನಾಥ್ ಕಿಡಿಕಾರಿದರು.(ಫೋಟೊ ಕ್ಯಾಫ್ಷನ್)ಮಾಗಡಿಯಲ್ಲಿ ಮಾಜಿ ಶಾಸಕ ಎ.ಮಂಜುನಾಥ್ ಸುದ್ದಿಗಾರರೊಂದಿಗೆ ಮಾತನಾಡಿದರು.