ಕಾಡಾನೆ ಹಾವಳಿ ತಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

KannadaprabhaNewsNetwork |  
Published : Oct 26, 2026, 01:30 AM IST
25ಎಚ್ಎಸ್ಎನ್9 : ತಾಲೂಕಿನ ಕೋಗಿಲೆಮನೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಳೆಗೆರೆ   ಗ್ರಾಮದ ಸುತ್ತ ಮುತ್ತ ರೈತರು ಹೈರಾಣಾಗಿದ್ದು   ಶಾಶ್ವತ ಪರಿಹಾರ ಸಿಗದಿದ್ದರೆ 'ವಿಧಾನಸೌಧ ಮುತ್ತಿಗೆ' ಹಾಕುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. | Kannada Prabha

ಸಾರಾಂಶ

ಕುಡಿಯಲು ನೀರಿಲ್ಲದೆ, ಜಾನುವಾರುಗಳಿಗೆ ಮೇವಿಲ್ಲದೆ ಪರದಾಡುತ್ತಿರುವಾಗ ಕಾಡಾನೆಗಳ ಹಾವಳಿ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹಗಲು-ರಾತ್ರಿ ಎನ್ನದೆ ಆನೆಗಳು ಓಡಾಡುತ್ತಿರುವುದರಿಂದ ರೈತರು ಜಮೀನುಗಳಿಗೆ ಹೋಗಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ಶಾಸಕರು, ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಬಂದು ಆನೆಗಳನ್ನು ತಾತ್ಕಾಲಿಕವಾಗಿ ಓಡಿಸುತ್ತಾರೆಯೇ ಹೊರತು ಶಾಶ್ವತ ಪರಿಹಾರ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಬೇಲೂರು ತಾಲೂಕಿನ ಕೋಗಿಲೆಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಳೆಗೆರೆ ಗ್ರಾಮದ ಸುತ್ತಮುತ್ತ ರೈತರು ಕಾಡಾನೆ ಹಾವಳಿಯಿಂದ ಹೈರಾಣಾಗಿದ್ದು ಶಾಶ್ವತ ಪರಿಹಾರ ಸಿಗದಿದ್ದರೆ ''''''''ವಿಧಾನಸೌಧ ಮುತ್ತಿಗೆ'''''''' ಹಾಕುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.ಜಗ್ಗಬೋರನಹಳ್ಳಿ ಅರಣ್ಯ ಪ್ರದೇಶದ ಸುತ್ತಮುತ್ತಲಿನ ಕೋಗಿಲೆಮನೆ, ಕೊತ್ತನಳ್ಳಿ, ಮಾಳಗೆರೆ, ಹಾಡ್ಲಿಗೆರೆ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಗ್ರಾಮಗಳಲ್ಲಿ 50ಕ್ಕೂ ಅಧಿಕ ಕಾಡಾನೆಗಳ ಹಿಂಡು ನಿರಂತರವಾಗಿ ಸಂಚರಿಸುತ್ತಿದ್ದು, ಕೃಷಿ ಜಮೀನುಗಳ ಮೇಲೆ ದಾಳಿ ನಡೆಸಿ ಲಕ್ಷಾಂತರ ರುಪಾಯಿ ಮೌಲ್ಯದ ಬೆಳೆಗಳನ್ನು ನಾಶಪಡಿಸುತ್ತಿವೆ. ಈಗಾಗಲೇ ಭೀಕರ ಬರಗಾಲದಿಂದ ರೈತರು ತತ್ತರಿಸಿ ಹೋಗಿದ್ದಾರೆ. ಕುಡಿಯಲು ನೀರಿಲ್ಲದೆ, ಜಾನುವಾರುಗಳಿಗೆ ಮೇವಿಲ್ಲದೆ ಪರದಾಡುತ್ತಿರುವಾಗ ಕಾಡಾನೆಗಳ ಹಾವಳಿ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹಗಲು-ರಾತ್ರಿ ಎನ್ನದೆ ಆನೆಗಳು ಓಡಾಡುತ್ತಿರುವುದರಿಂದ ರೈತರು ಜಮೀನುಗಳಿಗೆ ಹೋಗಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ಶಾಸಕರು, ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಬಂದು ಆನೆಗಳನ್ನು ತಾತ್ಕಾಲಿಕವಾಗಿ ಓಡಿಸುತ್ತಾರೆಯೇ ಹೊರತು ಶಾಶ್ವತ ಪರಿಹಾರ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. "ನಮ್ಮ ಭಾಗದಲ್ಲಿ ಆನೆಗಳು ಜೋಳ, ರಾಗಿ, ಅಡಿಕೆ, ತೆಂಗು ಹಾಗೂ ಶುಂಠಿ ಬೆಳೆಗಳನ್ನು ಸಂಪೂರ್ಣವಾಗಿ ತುಳಿದು ಹಾಳುಮಾಡುತ್ತಿವೆ. ನನ್ನ 4 ಎಕರೆಯಲ್ಲಿ ಬೆಳೆದಿದ್ದ ಜೋಳ ಸಂಪೂರ್ಣ ನಾಶವಾಗಿದ್ದು, ಸುಮಾರು 5 ಲಕ್ಷ ರುಪಾಯಿ ನಷ್ಟ ಸಂಭವಿಸಿದೆ. ಕೃಷಿ ಭೂಮಿಯನ್ನು ರಕ್ಷಿಸಲು ಸಾಧ್ಯವಾಗದಿದ್ದರೆ, ಸರ್ಕಾರದವರೇ ರೈತರ ಭೂಮಿಯನ್ನು ಖರೀದಿಸಿ, ಬೇರೆಡೆ ಸುರಕ್ಷಿತವಾಗಿ ಬದುಕಲು ಜಾಗ ತೋರಿಸಲಿ, " ಎಂದು ಆಗ್ರಹಿಸಿದರು. ಬರಗಾಲದಲ್ಲಿ ಸಾವಿರಾರು ರುಪಾಯಿ ಸಾಲ-ಸೋಲ ಮಾಡಿ ಗೊಬ್ಬರ ತಂದು ಬೆಳೆ ಬೆಳೆದಿದ್ದೆವು. ಆದರೆ ರಾತ್ರಿ ವೇಳೆಯಲ್ಲಿ ದಾಳಿ ಮಾಡುವ ಆನೆಗಳ ಹಿಂಡು, 15-20 ವರ್ಷ ಬೆಳೆಸಿದ ತೆಂಗಿನ ಮರಗಳನ್ನು ಸಹ ಉರುಳಿಸಿವೆ. ಸಂಜೆ 6 ರಿಂದ ರಾತ್ರಿ 12 ಗಂಟೆಯವರೆಗೆ ಬೆಳೆ ಕಾಯ್ದರೂ ಆನೆಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ‘ಮೇಲಾಧಿಕಾರಿಗಳಿಂದ ಆದೇಶ ಬರಬೇಕು’ ಎಂದು ಜಾರಿಕೊಳ್ಳುತ್ತಾರೆ ಎಂದು ರೈತರು ಅಳಲು ತೋಡಿಕೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಶಾಲೆಗಳ ಬಲವರ್ಧನೆ ನಮ್ಮೆಲ್ಲರ ಜವಾಬ್ದಾರಿ
ತಾಲೂಕು ಟಿಎಪಿಎಂಎಸ್ ಅಧ್ಯಕ್ಷರಾಗಿ ತೋಟಿ ನಾಗರಾಜ್‌ ಆಯ್ಕೆ