ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರು
ಪಟ್ಟಣದ ಡೊಂಬರಕೊಪ್ಪ ಪ್ರವಾಸಿ ಮಂದಿರದಲ್ಲಿ ಗುರುವಾರ ಕರ್ನಾಟಕ ರಕ್ಷಣಾ ವೇದಿಕೆಯಿಂದ (ನಾರಾಯಣಗೌಡ ಬಣ) ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಬೆಂಗಳೂರು ನಗರದ ಅಭಿವೃದ್ಧಿಯಲ್ಲಿ ಉತ್ತರ ಕರ್ನಾಟಕದ ಜನರ ಶ್ರಮ ಹಾಗೂ ಕೊಡುಗೆ ಅಪಾರವಾಗಿದೆ. ಇಂತಹ ಸಂದರ್ಭದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕ ಪ್ರದೀಪ ಈಶ್ವರ ಅವರು ಉತ್ತರ ಕರ್ನಾಟಕದ ಜನರ ಕುರಿತು ಮಾತನಾಡುವಾಗ ನಾಲಿಗೆಯ ಮೇಲೆ ಹಿಡಿತವಿಟ್ಟುಕೊಂಡು ಮಾತನಾಡಬೇಕು. ಇಲ್ಲದಿದ್ದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇವರಂತೆ ಮುಖ್ಯ ಮಂತ್ರಿಗಳೂ ಕೂಡಾ ಮಾತನಾಡುವ ಭರದಲ್ಲಿ ಉತ್ತರ ಕರ್ನಾಟಕದ ಜನರು ಬೆಂಗಳೂರಿಗೆ ಬಂದರೆ ಮತ್ತೆ ತಮ್ಮ ಊರುಗಳಿಗೆ ಮರಳುವುದಿಲ್ಲ, ಇಲ್ಲಿಯೇ ನೆಲೆಸುತ್ತಾರೆಂದು ಮಾತನಾಡಿದ್ದು ಸರಿಯಲ್ಲ. ದಕ್ಷಿಣ ಕರ್ನಾಟಕಕ್ಕೆ ನೀಡುವಷ್ಟೇ ಆದ್ಯತೆಯನ್ನು ಉತ್ತರ ಕರ್ನಾಟಕಕ್ಕೂ ನೀಡಬೇಕು ಉತ್ತರ ಕರ್ನಾಟಕದ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಹಾಗೂ ವಿವಿಧ ಯೋಜನೆಗಳಿಗೆ ಹೆಚ್ಚಿನ ಅನುದಾನ ಒದಗಿಸಿದರೆ ಸ್ಥಳೀಯ ಯುವಜನರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತವೆ. ಇದರಿಂದ ಉದ್ಯೋಗಕ್ಕಾಗಿ ಯುವಕರು ವಲಸೆ ಹೋಗುವುದನ್ನು ತಡೆಯಬಹುದು. ಈ ವಾಸ್ತವವನ್ನು ಅರಿತು ಮುಖ್ಯಮಂತ್ರಿಗಳು ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನಹರಿಸಬೇಕು ಎಂದು ಒತ್ತಾಯಿಸಿದರು.ಕರವೇ ತಾಲೂಕು ಘಟಕದ ಗೌರವಾಧ್ಯಕ್ಷ ಲಕ್ಷ್ಮಣ ಪಾಟೀಲ ಮಾತನಾಡಿದರು. ಉಪಾಧ್ಯಕ್ಷ ಆನಂದ ಪಾಟೀಲ, ಕಾರ್ಯದರ್ಶಿ ಯೋಗಾನಂದ ಹಿರೇಮಠ, ವಿಶಾಲಗೌಡ ಪಾಟೀಲ, ಫಕ್ಕೀರಪ್ಪ ಜಾಡರ, ಕಾರ್ತಿಕ ಕಾಮ್ಕರ, ಮನೋಹರ ಫಕ್ಕೀರನವರ್, ಮಹಾಂತೇಶ ಶಹಾಪೂರ, ಬಸವರಾಜ ಸಾಣಿಕೊಪ್ಪ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.