ರಾಜ್ಯ ಸರ್ಕಾರ ದಿವಾಳಿಯಾಗಿದ್ರೆ ೧೦ ಎಕರೆ ಜಮೀನು ಕೊಡಲು ಸಿದ್ಧ: ಶಾಸಕ ಎಚ್‌.ಡಿ.ರೇವಣ್ಣ

KannadaprabhaNewsNetwork |  
Published : Sep 22, 2026, 01:45 AM IST
20ಕೆಎಂಎನ್ ಡಿ22  | Kannada Prabha

ಸಾರಾಂಶ

ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ರೇವಣ್ಣ, “ಡಿಸಿಯವರಿಗೆ ಯಾರು ಕಿರುಕುಳ ಕೊಡುತ್ತಿದ್ದಾರೆ ಎಂಬುದು ನನಗೆ ಗೊತ್ತಿಲ್ಲ” ಎಂದರು. ನಾನು ಯಾವತ್ತೂ ಧಮ್ಕಿ ಹಾಕಿಲ್ಲ. ನಾನೇಕೆ ಜಿಲ್ಲಾಧಿಕಾರಿಗಳಿಗೆ ಕಿರುಕುಳ ಕೊಡಲಿ? ಅವರ ಕಚೇರಿಗೆ ಹೋಗಿ ಎರಡು ವರ್ಷಗಳೇ ಆಗಿದೆ. ಅವರು ಕಾನೂನು ಪ್ರಕಾರ ಕೆಲಸ ಮಾಡಲಿ. ವೈಯಕ್ತಿಕವಾಗಿ ಇನ್ನು ಮುಂದೆ ಈ ವಿಚಾರದ ಬಗ್ಗೆ ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಯಾರಾದರೂ ಜಿಲ್ಲಾಧಿಕಾರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪವಿದ್ದರೆ ಅಂತಹವರ ಹೆಸರುಗಳನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ಕನ್ನಡಪ್ರಭವಾರ್ತೆ, ಹಾಸನ

ರಾಜ್ಯ ಸರ್ಕಾರ ದಿವಾಳಿಯಾಗಿದ್ದರೆ ರೈತರ ನೆರವಿಗಾಗಿ ನೆಲಮಂಗಲದಲ್ಲಿರುವ ತಮ್ಮ ೧೦ ಎಕರೆ ಜಮೀನನ್ನು ನೀಡಲು ಸಿದ್ಧನಿದ್ದೇನೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ತಿರುಗೇಟು ನೀಡಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರಿಗೆ ಪರಿಹಾರ ನೀಡುವ ವಿಚಾರವಾಗಿ ನಡೆಯುತ್ತಿರುವ ಚರ್ಚೆಗೆ ಪ್ರತಿಕ್ರಿಯಿಸಿ ರೈತರ ಪರಿಹಾರವನ್ನು ರಾಜ್ಯ ಸರ್ಕಾರವೇ ಭರಿಸಬಹುದು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್‌ನ ಕೆಲ ಸಚಿವರು ‘ರೇವಣ್ಣ ಅವರ ನೆಲಮಂಗಲದ ಆಸ್ತಿಯನ್ನು ಏಕೆ ನೀಡಬಾರದು’ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರೇವಣ್ಣ ಅವರು, ರೈತರಿಗಾಗಿ ೧೦ ಎಕರೆ ಜಮೀನು ನೀಡಲು ನಾನು ಸಿದ್ಧ. ರಾಜ್ಯದ ನಾಲ್ಕು ಕೋಟಿ ಜನ ಉಳಿಯಬೇಕು. ನನ್ನ ಆಸ್ತಿ ಹೋದರೆ ಏನು ರೈತರು ಸಂಕಷ್ಟದಲ್ಲಿದ್ದಾರೆ. ಎಸ್‌ಡಿಆರ್‌ಎಫ್‌ಗೆ ಬೇಕಾದರೂ ನನ್ನ ಜಮೀನು ದಾನ ಮಾಡಲು ಸಿದ್ಧನಿದ್ದೇನೆ. ನೆಲಮಂಗಲದಲ್ಲಿ ಇನ್ನೂ ಬೇರೆ ಖಾಲಿ ಜಮೀನು ಇದ್ದರೆ ಅದನ್ನೂ ನೀಡಲು ಸಿದ್ಧ ಎಂದು ಟಾಂಗ್ ನೀಡಿದರು. ಸರ್ಕಾರಿ ಇಲಾಖೆಗಳಲ್ಲಿನ ಲಂಚದ ಆರೋಪದ ಕುರಿತು ಮಾತನಾಡಿದ ರೇವಣ್ಣ, ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಈ ವಿಚಾರ ಹೇಳಿರುವುದರಲ್ಲಿ ಸತ್ಯವಿದೆ. ಎಲ್ಲಾ ಇಲಾಖೆಗಳಲ್ಲೂ ಲಂಚ ಕೊಡದೆ ಏನೂ ಆಗುವುದಿಲ್ಲ ಎಂಬ ಪರಿಸ್ಥಿತಿ ಇದೆ. ಹಾಗಾಗಿ ಕೈಲಾದಷ್ಟು ಕೊಟ್ಟು ಕೆಲಸ ಮಾಡಿಸಿಕೊಳ್ಳಿ. ಆ ಮೂಲಕ ಉಸ್ತುವಾರಿ ಸಚಿವರ ಆದೇಶವನ್ನು ಪಾಲಿಸಿ ಎಂದು ವ್ಯಂಗ್ಯವಾಡಿದರು.

ಕಂದಾಯ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ಯಾವುದೇ ಇಲಾಖೆಗೆ ಹೋದರೂ ಹಣ ನೀಡದಿದ್ದರೆ ಕೆಲಸ ಆಗುವುದಿಲ್ಲ. ಅದನ್ನು ಬೆಂಬಲಿಸುವ ರೀತಿಯಲ್ಲಿ ಉಸ್ತುವಾರಿ ಸಚಿವರು ಹೇಳಿರುವುದು ಲಂಚಕೋರತನಕ್ಕೆ ಮತ್ತಷ್ಟು ಉತ್ತೇಜನ ನೀಡಿದಂತಾಗುತ್ತದೆ ಎಂದು ಹೇಳಿದರು.ಡಿಸಿಗೆ ಯಾರು ಕಿರುಕುಳ ನೀಡುತ್ತಿದ್ದಾರೋ ಗೊತ್ತಿಲ್ಲ

ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ರೇವಣ್ಣ, “ಡಿಸಿಯವರಿಗೆ ಯಾರು ಕಿರುಕುಳ ಕೊಡುತ್ತಿದ್ದಾರೆ ಎಂಬುದು ನನಗೆ ಗೊತ್ತಿಲ್ಲ” ಎಂದರು. ನಾನು ಯಾವತ್ತೂ ಧಮ್ಕಿ ಹಾಕಿಲ್ಲ. ನಾನೇಕೆ ಜಿಲ್ಲಾಧಿಕಾರಿಗಳಿಗೆ ಕಿರುಕುಳ ಕೊಡಲಿ? ಅವರ ಕಚೇರಿಗೆ ಹೋಗಿ ಎರಡು ವರ್ಷಗಳೇ ಆಗಿದೆ. ಅವರು ಕಾನೂನು ಪ್ರಕಾರ ಕೆಲಸ ಮಾಡಲಿ. ವೈಯಕ್ತಿಕವಾಗಿ ಇನ್ನು ಮುಂದೆ ಈ ವಿಚಾರದ ಬಗ್ಗೆ ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಯಾರಾದರೂ ಜಿಲ್ಲಾಧಿಕಾರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪವಿದ್ದರೆ ಅಂತಹವರ ಹೆಸರುಗಳನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಬಸ್ ಗ್ಯಾರಂಟಿ ಇಲ್ಲ.. ಖಾಸಗಿ ಬಸ್‌ಗೆ ಕಾಸಿಲ್ಲ!
ಇಂದು ಗಣೇಶ ವಿಸರ್ಜನೆ: ಬಿಗಿ ಬಂದೋಬಸ್ತ್‌