ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ತಾಲೂಕು ಕಚೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಕುರಿತು ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಯುವನಿಧಿ ಯೋಜನೆಗಳು ಜನ ಸಾಮಾನ್ಯರನ್ನು ಯಶಸ್ವಿಯಾಗಿ ತಲುಪುತ್ತಿದ್ದು, ಜನ ಜೀವನ ಸುಧಾರಣೆ ಕಾಣುತ್ತಿದೆ ಎಂದರು.
ಸದಸ್ಯರು ಗೃಹಲಕ್ಷ್ಮಿ ಯೋಜನೆಯಡಿ ಜಿಎಸ್‌ಟಿ ಗೆ ಸಂಬಂಧಿಸಿದ ಕೆಲವು ಲೋಪದೋಷಗಳು ಕಂಡು ಬರುತ್ತಿರುವುದು ಗಮನಕ್ಕೆ ಬಂದಿದ್ದು, ಅವುಗಳನ್ನು ನಿವಾರಣೆ ಮಾಡುವ ಕೆಲಸ ಆಗಬೇಕಿದೆ ಎಂದರು. ಕೆಲವು ಮನೆಗಳಲ್ಲಿ ಮನೆಯ ಯಾಜಮಾನಿಯ ಸಾವು ಆದ ಸಮಯದಲ್ಲಿ ಅದೇ ಮನೆಯ ಬೇರೆ ಸದಸ್ಯರನ್ನು ಮನೆಯ ಯಜಮಾನಿಯನ್ನಾಗಿ ಮಾಡಿ ಸೌಲಭ್ಯ ಮುಂದುವರಿಸುವಂತೆ ಹೇಳಿದರು.ಅನ್ನಭಾಗ್ಯ ಯೋಜನೆಯು ಸರಿಯಾದ ರೀತಿಯಲ್ಲಿ ಎಲ್ಲಾ ಪಡಿತರ ಕುಟುಂಬಗಳಿಗೆ ಸರಬರಾಜು ಆಗುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿ, ಸರಿಯಾದ ರೀತಿಯಲ್ಲಿ ವಿತರಣೆ ಆಗದ ಪಡಿತರ ಅಂಗಡಿಯ ಮಾಹಿತಿಯನ್ನು ಪಡೆದು, ಸ್ಥಳದಲ್ಲೇ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆಯನ್ನು ಬಗೆಹರಿಸಿದರು.
ಯುವನಿಧಿ ಯೋಜನೆಯು ಬಹಳ ಯಶಸ್ವಿಯಾಗಿ ನಡೆಯುತ್ತಿದ್ದು, ಇನ್ನೂ ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಈ ಯೋಜನೆಯಡಿ ಫಲಾನುಭವಿಗಳಾಗುವಂತೆ ಮಾಡಬೇಕು. ಈ ಯೋಜನೆಯ ಬಗ್ಗೆ ಯುವಜನತೆಗೆ ತಿಳಿಯುವಂತೆ ಮಾಡಬೇಕು. ಮೇ ತಿಂಗಳಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 2482 ಜನ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 58.81 ಲಕ್ಷ ರು. ಹಣ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ ಎಂದು ಮಾಹಿತಿ ನೀಡಿದರು.
ಈ ಸಭೆಯಲ್ಲಿ ಶಿವಮೊಗ್ಗ ತಾಲೂಕು ಸಹಾಯಕ ಲೆಕ್ಕಾಧಿಕಾರಿ ಶ್ರೀಧರ್ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಯಗಳ ಅನುಷ್ಟಾನ ಸಮಿತಿಯ ಸದಸ್ಯರುಗಳು, ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.