ವಿದ್ಯುತ್ ತೊಂದರೆ ಆದ್ರೆ ಗಮನಕ್ಕೆ ತನ್ನಿ

KannadaprabhaNewsNetwork |  
Published : Feb 19, 2025, 12:50 AM IST
ಚಿತ್ರದುರ್ಗ ಮೂರನೇ ಪುಟದ ಮಿಡ್ಲ್  | Kannada Prabha

ಸಾರಾಂಶ

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಸಚಿವ ಜಾರ್ಜ್ ಮಾತನಾಡಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯ ಸಭೆಯಲ್ಲಿ ಇಂದನ ಸಚಿವ ಕೆ.ಜೆ. ಜಾರ್ಜ್ ಮನವಿಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಪ್ರಸ್ತುತ ರಾಜ್ಯದಲ್ಲಿ ಪವರ್ ಕಟ್ ಸ್ಥಿತಿ ನಿರ್ಮಾಣವಾಗಿಲ್ಲ. ಎಲ್ಲಿಯಾದರೂ ವಿದ್ಯುತ್ ವಿತರಣೆಯಲ್ಲಿ ತೊಂದರೆ ಆದರೆ ಗಮನಕ್ಕೆ ತರುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ವಿನಂತಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮಂಗಳವಾರ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೆಲವು ಕಡೆ ಓವರ್ ಲೋಡ್ ಆಗಿರುವುದರಿಂದ ಸಮರ್ಪಕ ವಿದ್ಯುತ್ ಪೂರೈಕೆಗೆ ತೊಂದರೆ ಆಗಿರಬಹುದು. ಅಕ್ರಮ-ಸಕ್ರಮಕ್ಕೂ ಟಿ.ಸಿ ಗೂ ಸಂಬಂಧವಿಲ್ಲ. 2004 ರಿಂದ ಅಕ್ರಮ ಸಕ್ರಮ ಆರಂಭವಾಯಿತು. ವಿದ್ಯುತ್ ಕೊಡುವುದು ಸ್ವಲ್ಪ ತಡವಾದಾಗ ಅಕ್ರಮ ಶುರುವಾಯಿತು. ನಾಲ್ಕುವರೆ ಲಕ್ಷ ಐಪಿ ಸೆಟ್‍ಗಳು ಹೀಗಾಗಿದೆ. ಎಸ್.ಆರ್ ರೇಟ್ ರಿವೈಸ್ ಮಾಡಲು ಹೇಳಿದ್ದೇನೆ. ಹಳೆ ಎಸ್.ಆರ್.ರೇಟ್‍ನಲ್ಲಿಯೇ ಟೆಂಡರ್ ಕರೆಯಲು ಆದೇಶಿಸಿದ್ದೇನೆ.

ನಿರಂತರ ಜ್ಯೋತಿಯಡಿ 6 ಗಂಟೆ ನಂತರ ಸಿಂಗಲ್ ಫೇಸ್ ಕರೆಂಟ್ ಕೊಡುತ್ತೇವೆ. ಐ.ಪಿ.ಸೆಟ್‍ಗೆ 19 ಸಾವಿರ ಕೋಟಿ ರು.ನೀಡುತ್ತಿದ್ದೇವೆ. ಗೃಹಜ್ಯೋತಿಗೆ 12 ಸಾವಿರ ಕೋಟಿ ರು.ಗಳನ್ನು ಕೊಡುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು 5 ಉಚಿತ ಗ್ಯಾರೆಂಟಿಗಳಿಗೆ 60 ಸಾವಿರ ಕೋಟಿ ರು. ಖರ್ಚು ಮಾಡುತ್ತಿದ್ದಾರೆ. ಉಚಿತ ಗ್ಯಾರಂಟಿಗಳಿಂದ ಸರ್ಕಾರಕ್ಕೆ ನಷ್ಟವಾಗಿಲ್ಲ. ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ. ಕೇಂದ್ರಕ್ಕೆ 4 ಲಕ್ಷ ಕೋಟಿ ರು. ತೆರಿಗೆ ಕಟ್ಟುತ್ತಿದ್ದೇವೆ. ಬಿಜೆಪಿಯವರು ಸತ್ಯ ಸಂಗತಿ ಹೇಳಲ್ಲ. ಕಾಂಗ್ರೆಸ್‍ನ್ನು ಟೀಕಿಸುವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆಂದು ಆಪಾದಿಸಿದರು.

ನೆಹರು, ಇಂದಿರಾಗಾಂಧಿ, ರಾಜೀವ್‍ಗಾಂಧಿಯಿಂದ ಹಿಡಿದು ಅನೇಕ ಹಿರಿಯರು ಪಕ್ಷಕ್ಕಾಗಿ ತ್ಯಾಗ ಮಾಡಿದ್ದಾರೆ. ಅಧಿಕಾರದಲ್ಲಿರುವಾಗ 10 ಜನಕ್ಕೆ ಒಳ್ಳೆಯದು ಮಾಡಬೇಕೆನ್ನುವುದು ಕಾಂಗ್ರೆಸ್ ಧ್ಯೇಯ. ವಿದ್ಯುತ್ ಇಲಾಖೆಯಲ್ಲಿ ಏನಾದರೂ ಅಕ್ರಮವಾಗಿದ್ದರೆ ನನಗೆ ತಿಳಿಸಿ ಎಂದು ಕಾರ್ಯಕರ್ತರಲ್ಲಿ ಕೆ.ಜೆ.ಜಾರ್ಜ್ ಮನವಿ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಸದಾ ಬರಗಾಲವನ್ನು ಎದುರಿಸಿಕೊಂಡು ಬರುತ್ತಿದೆ. ಹಾಗಾಗಿ ರೈತರಿಗೆ ತೊಂದರೆಯಾಗದಂತೆ ಕೃಷಿ ಪಂಪ್‍ಸೆಟ್‍ಗಳಿಗೆ ನಿರಂತರ ವಿದ್ಯುತ್ ಕೊಡಿ ಎಂದು ವಿನಂತಿಸಿದರು.

ಮಾಜಿ ಸಚಿವ ಎಚ್.ಆಂಜನೇಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಮಾಜಿ ಶಾಸಕ ಎ.ವಿ.ಉಮಾಪತಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಡಿ.ಟಿ.ವೆಂಕಟೇಶ್, ದ್ರಾಕ್ಷಾ ರಸ ಮಂಡಳಿ ಅಧ್ಯಕ್ಷ ಬಿ.ಯೋಗೇಶ್‍ಬಾಬು, ವಿಧಾನ ಪರಿಷತ್ ಮಾಜಿ ಸದಸ್ಯ ಜಯಮ್ಮ ಬಾಲರಾಜ್, ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಎಸ್.ಜಯಣ್ಣ, ಸೇವಾದಳದ ಜಿಲ್ಲಾಧ್ಯಕ್ಷ ಭೂತೇಶ್, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್ ಮೊಹಿದ್ದೀನ್, ಕೆ.ಡಿ.ಪಿ.ಸದಸ್ಯ ಕೆ.ಸಿ.ನಾಗರಾಜ್, ಗ್ಯಾರಂಟಿ ಅನುಷ್ಟಾನಗಳ ಸಮಿತಿ ಜಿಲ್ಲಾಧ್ಯಕ್ಷ ಆರ್.ಶಿವಣ್ಣ, ತಾಲ್ಲೂಕು ಅಧ್ಯಕ್ಷ ಆರ್.ಪ್ರಕಾಶ್, ಜಿ.ವಿ.ಮಧುಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಜಿಪಂ ಮಾಜಿ ಸದಸ್ಯ ಆರ್.ನರಸಿಂಹರಾಜ, ಪ್ರಚಾರ ಸಮಿತಿ ಅಧ್ಯಕ್ಷ ಆರ್.ಕೃಷ್ಣಮೂರ್ತಿ, ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ನಿಶಾನಿ ಜಯಣ್ಣ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷ ಡಿ.ಕುಮಾರ್ ಪಿಳ್ಳೆಕೆರನಹಳ್ಳಿ, ಬಿ.ರಾಜಪ್ಪ, ಹೆಚ್.ಅಂಜಿನಪ್ಪ, ಸೈಯದ್ ವಲಿಖಾದ್ರಿ, ಅಕ್ಬರ್, ಪರ್ವಿನ್, ಸುಧಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ