ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ನಾನು ಅಧ್ಯಕ್ಷನಾಗಿ ಬರುವ ಮೊದಲೇ ಕಾಮಗಾರಿಗಳು ಮುಗಿದು ಹೋಗಿವೆ. ಕೆಲವು ಮಾತ್ರ ಉಳಿದಿದೆ ಅಷ್ಟೇ. ಪ್ರಸನ್ನಕುಮಾರ್ ಹೇಳಿದಂತೆ ಈಗಾಗಲೇ ಇದು ಲೋಕಾಯುಕ್ತ ತನಿಖೆಯಲ್ಲಿದೆ. ಲೋಕಾಯುಕ್ತರು ಖಂಡಿತ ತನಿಖೆ ಮಾಡುತ್ತಾರೆ. ಅವ್ಯವಹಾರವಾಗಿದ್ದರೆ ಶಿಕ್ಷೆಯಾಗಲಿ ಎಂದು ಹೇಳಿದರು.
ಅಧಿಕಾರಿಗಳು ತಮ್ಮ ತಮ್ಮ ಕೆಲಸಗಳನ್ನು ಮಾಡಿದ್ದಾರೆ. ಟೆಂಡರ್ ಕರೆಯುವುದು ಸೇರಿದಂತೆ ಅಧಿಕಾರಿಗಳ ವ್ಯಾಪ್ತಿಯಲ್ಲಿ ಇವೆಲ್ಲವೂ ಪಾರದರ್ಶಕವಾಗಿ ನಿಯಮಬದ್ಧವಾಗಿ ನಡೆಯುತ್ತದೆ. ಆಕಸ್ಮಾತ್ ಅಧಿಕಾರಿಗಳು ತಪ್ಪು ಮಾಡಿದ್ದರೆ ಅವರನ್ನು ಕಾಪಾಡುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಿ. ಇದಕ್ಕೆ ನನ್ನ ಸಹಮತವೂ ಇದೆ ಎಂದರು.ದಿನೇಶ್ ಎಂಬ ಅಧಿಕಾರಿಯ ವರ್ಗಾವಣೆ ಕುರಿತಂತೆ ಮಾತನಾಡಿದ ಅವರು, ಅವರ ವರ್ಗಾವಣೆ ಬಗ್ಗೆ ನನಗೆ ಗೊತ್ತಿಲ್ಲ. ವರ್ಗಾವಣೆಯ ವ್ಯಾಪ್ತಿ ನಮಗೆ ಬರುವುದೂ ಇಲ್ಲ. ಆಕಸ್ಮಾತ್ ಆ ವ್ಯಕ್ತಿ ತಪ್ಪು ಮಾಡಿದ್ದರೆ ಅದನ್ನು ಮುಚ್ಚಿಕೊಳ್ಳಲು ಸಾಧ್ಯವಿಲ್ಲ. ವರ್ಗಾವಣೆ ಆದರೆಂದರೆ ತಪ್ಪುಗಳು ವರ್ಗಾವಣೆ ಆಗುವುದಿಲ್ಲ. ಹೇಗಿದ್ದರೂ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ನಾವು ಇದರಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದರು.
ಈಗಾಗಲೇ ಪ್ರಾಧಿಕಾರದಿಂದ ಅಮೃತ್ ಸಿಟಿ ಯೋಜನೆಗೆ ಅನುಮೋದನೆಗಾಗಿ ಆಯುಕ್ತಾಲಯಕ್ಕೆ ಕಳಿಸಲಾಗಿದೆ. ಗ್ರಾಮದ ಸರ್ವೇ ನಂ. 25, ಕಸಬಾ ಹೋಬಳಿ ಗೋಪಿಶೆಟ್ಟಿ ಗ್ರಾಮದಲ್ಲಿ ವಸತಿ ಬಡಾವಣೆ ನಿರ್ಮಿಸುವ ಸಂಬಂಧ ವಿನ್ಯಾಸ ನಕ್ಷೆಗೆ ತಾಂತ್ರಿಕ ಅನುಮೋದನೆ ಕೇಳಲಾಗಿದೆ. ಸುಮಾರು ೩ ಎಕರೆ, ಗೋಪಿಶೆಟ್ಟಿಕೊಪ್ಪ ಗ್ರಾಮದಲ್ಲಿ 31 ಎಕರೆ, ಊರುಗಡೂರು ಗ್ರಾಮದಲ್ಲಿ 4 ಎಕರೆ, ಭದ್ರಾವತಿ ತಾಲೂಕು ಕಸಬಾ ಗ್ರಾಮದ ಸ.ನಂ.118 ರಲ್ಲಿ 32.21 ಎಕರೆ ಪ್ರದೇಶದಲ್ಲಿ ವಸತಿ ಬಡಾವಣೆ ನಿರ್ಮಿಸುವ ಸಂಬಂಧ ಪ್ರಸ್ತಾವನೆ ಆಯುಕ್ತಾಲಯಕ್ಕೆ, ಗ್ರಾಮಾಂತರ ಯೋಜನಾ ಇಲಾಖೆಗೆ ಕಳಿಸಲಾಗಿದೆ. ಈ ಎಲ್ಲದಕ್ಕೂ ಅನುಮೋದನೆ ಸಿಗುವ ಭರವಸೆ ನನಗಿದೆ ಎಂದರು.
ಒಟ್ಟಾರೆ ನನ್ನ ಅವಧಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆರೋಪ ಮಾಡುವವರು ಮಾಡಲಿ ಬಿಡಿ. ನಾನು ಬೇಡ ಎನ್ನುವುದಿಲ್ಲ ಎಂದು ಪುನರುಚ್ಛರಿಸಿದರು.
ಆಯುಕ್ತ ವಿಶ್ವನಾಥ್ ಎಸ್.ಮುದ್ದಜಿ, ಸದಸ್ಯರಾದ ಪ್ರವೀಣ್, ಫ್ರಾನ್ಸಿಸ್, ಅರುಣಾಕುಮಾರಿ, ಎಂಜಿನಿಯರ್ ಬಸವರಾಜ್ ಸೇರಿದಂತೆ ಹಲವರು ಇದ್ದರು.