- ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅಭಿಮತ । ಕಂದನಕೋವಿಯಲ್ಲಿ ಈಶ್ವರ, ಬಸವೇಶ್ವರ ದೇಗುಲ ಉದ್ಘಾಟನೆ
-ರೈತರು ಹಠಮಾರಿತನ ಬಿಟ್ಟು, ಲಭ್ಯ ನೀರನ್ನು ಸದುಪಯೋಗಪಡಿಸಿಕೊಳ್ಳಿ: ಸಿರಿಗೆರೆ ಶ್ರೀ
ಕನ್ನಡಪ್ರಭ ವಾರ್ತೆ ದಾವಣಗೆರೆಜೀವನದಿ ತುಂಗಭದ್ರೆಯಲ್ಲಿ ಸಮರ್ಪಕವಾಗಿ ನೀರು ಹರಿದರೆ ಈ ಭಾಗದ ಕೆರೆಗಳನ್ನು ತುಂಬಿಸಲು ಸಾಧ್ಯವಾಗಲಿದ್ದು, ರೈತರು, ಸಾರ್ವಜನಿಕರು ವಿಶಾಲ ಮನೋಭಾವದಿಂದ ನೀರಾವರಿ ಯೋಜನೆಗೆ ಸಹಕರಿಸುವ ಮೂಲಕ ನೀರನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು.
ಲಭ್ಯ ನೀರನ್ನು ತಡೆಯುವುದು ಅಥವಾ ಯೋಜನೆಗೆ ಅಡ್ಡಿಪಡಿಸುವುದು ಒಳ್ಳೆಯದಲ್ಲ. ನೀರಾವರಿ ಯೋಜನೆಯಡಿ ಪೈಪ್‌ಲೈನ್ ಸೋರಿಕೆ, ಮೋಟಾರ್ ದುರಸ್ತಿ ಹಾಗೂ ಹಳೆ ಯಂತ್ರೋಪಕರಣಗಳ ಸಮಸ್ಯೆ ಎದುರಾಗಿವೆ. ಹೊಸ ಪೈಪ್ ಲೈನ್ ಮತ್ತು ಮೋಟಾರ್ ಅಳವಡಿಕೆ ಸೇರಿದಂತೆ ಅಗತ್ಯ ದುರಸ್ತಿ ಕಾರ್ಯಕ್ಕೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಲಿ. ಜಿಲ್ಲಾ ಸಚಿವರ ಪ್ರಯತ್ನದಿಂದ ಯೋಜನೆ ಹಾಗೂ ದುರಸ್ತಿ ಕಾರ್ಯಕ್ಕೆ 75 ಕೋಟಿ ರು. ಅನುದಾನ ಮಂಜೂರಾಗಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.
ಯಾವ ಕೆರೆಗೆ ನೀರು ಬರುತ್ತಿದೆ, ಯಾವ ಕೆರೆಗೆ ಬರುತ್ತಿಲ್ಲ ಎಂಬುದನ್ನು ಪರಿಶೀಲಿಸಿ ಅಧಿಕಾರಿಗಳ ಗಮನಕ್ಕೆ ತನ್ನಿ. ಅಗತ್ಯವಿದ್ದರೆ ಕೆರೆಗಳ ಸ್ಥಿತಿಗತಿಯ 15 ಸೆಕೆಂಡ್ ವಿಡಿಯೋ ಮಾಡಿ ಸಂಬಂಧಪಟ್ಟ ವಾಟ್ಸಾಪ್ ಗುಂಪುಗಳಿಗೆ ಹಂಚಿಕೊಳ್ಳಬಹುದು. ಮಳೆ ಬರಲಿ, ಬಾರದಿರಲಿ ತುಂಗಭದ್ರಾ ನದಿಯಲ್ಲಿ ನೀರು ಸಮೃದ್ಧವಾಗಿ ಹರಿಯಲೆಂದು ದೇವರಲ್ಲಿ ಪ್ರಾರ್ಥಿಸಬೇಕು. ನದಿಯಲ್ಲಿ ನೀರಿದ್ದರೆ ಈ ಭಾಗದ ಕೆರೆಗಳು ತುಂಬಿ, ರೈತರು ನೆಮ್ಮದಿಯಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯ ಎಂದು ಅವರು ವಿವರಿಸಿದರು.
ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಮಾತನಾಡಿ, ಕಳೆದ 30-35 ವರ್ಷಗಳಿಂದ ಕ್ಷೇತ್ರದ ಜನರೊಂದಿಗೆ ನಿಕಟ ಬಾಂಧವ್ಯ ಹೊಂದಿದ್ದು, ಮನೆ ಮಗನಂತೆ ಸೇವೆ ಸಲ್ಲಿಸುತ್ತಿದ್ದೇನೆ. ಜಿಪಂ ಸದಸ್ಯನಾಗಿ, ಶಾಸಕನಾಗಿ ಹಾಗೂ ಈಗ ಸಚಿವನಾಗಿ ಜನರ ಸೇವೆ ಮಾಡುವ ಅವಕಾಶ ದೊರೆತಿರುವುದು ನನ್ನ ಭಾಗ್ಯ.
ಅನುದಾನದ ಕೊರತೆ ಹಾಗೂ ಕಾಮಗಾರಿ ವಿಳಂಬದಿಂದ ಹಿಂದೆ ರೈತರಿಗೆ ತೊಂದರೆಯಾಗಿತ್ತು. ಈಗ ಜಿಲ್ಲಾ ಸಚಿವ ಎಸ್ಸೆಸ್ ಮಲ್ಲಿಕಾರ್ಜುನರ ಸಮನ್ವಯದಲ್ಲಿ ಬಿಡುಗಡೆಯಾದ ₹18 ಕೋಟಿ ಮೊತ್ತದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ಉಳಿದ ₹75 ಕೋಟಿ ರು. ವೆಚ್ಚದ ಕಾಮಗಾರಿಗಳಿಗೂ ಶೀಘ್ರ ಟೆಂಡರ್ ಕರೆದು. ಗುದ್ದಲಿ ಪೂಜೆ ನೆರವೇರಿಸಲಾಗುವುದು.
ಬಿಜೆಪಿ ಯುವ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಮಾಯಕೊಂಡ ಜಿ.ಎಸ್.ಶ್ಯಾಮ್, ಎಪಿಎಂಸಿ ಮಾಜಿ ಅಧ್ಯಕ್ಷ ಅಣಜಿ ಎಸ್.ಕೆ.ಚಂದ್ರಶೇಖರ, ಶಿವಕುಮಾರ ಸ್ವಾಮಿ, ಈಶ್ವರ ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಸದಸ್ಯರು, ಕಂದನಕೋವಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಇದ್ದರು.
23ಕೆಡಿವಿಜಿ1-
ದಾವಣಗೆರೆ ತಾ. ಕಂದನಕೋವಿ ಗ್ರಾಮದ ಶ್ರೀ ಈಶ್ವರ, ಬಸವೇಶ್ವರ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಸಿರಿಗೆರೆ ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ................
23ಕೆಡಿವಿಜಿ2 (ಇದು ಬೇಡ)ದಾವಣಗೆರೆ ತಾ. ಕಂದನಕೋವಿ ಗ್ರಾಮದ ಶ್ರೀ ಈಶ್ವರ, ಬಸವೇಶ್ವರ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿರಿಗೆರೆ ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳನ್ನು ಸಚಿವ ಕೆ.ಎಸ್.ಬಸವಂತಪ್ಪ ಸನ್ಮಾನಿಸಿದರು.
................23ಕೆಡಿವಿಜಿ3 (ಇದು ಪ್ಯಾನೆಲ್‌ಗೆ....)
ದಾವಣಗೆರೆ ತಾ. ಕಂದನಕೋವಿ ಗ್ರಾಮದ ಶ್ರೀ ಈಶ್ವರ, ಬಸವೇಶ್ವರ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿರಿಗೆರೆ ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನೂತನ ಸಚಿವ ಕೆ.ಎಸ್.ಬಸವಂತಪ್ಪಗೆ ಶುಭ ಹಾರೈಸಿ, ಆಶೀರ್ವದಿಸಿದರು.